G.M.ಸಿದ್ದೇಶ್ವರ್ ವಿರುದ್ಧ ಸಂಸದೆ ಪ್ರಭಾ ಮಲ್ಲಿಕಾರ್ಜುನ್ ಪರೋಕ್ಷ ವಾಗ್ದಾಳಿ

Suddivijaya
Suddivijaya August 16, 2024
Updated 2024/08/16 at 1:54 PM

Suddivijayanews16/8/2024

ಸುದ್ದಿವಿಜಯ, ಜಗಳೂರು: ದಾವಣಗೆರೆ ಲೋಕಸಭಾ ಕ್ಷೇತ್ರದಲ್ಲಿ 25 ವರ್ಷ ಆಡಳಿತ ಮಾಡಿದ ಬಿಜೆಪಿಯನ್ನು ಸೋಲಿಸಿ ನಮ್ಮನ್ನು ಗೆಲ್ಲಿಸಿದ್ದಕ್ಕೆ ಜಗಳೂರು ಕ್ಷೇತ್ರದ ಜನರಿಗೆ ನಾನು ಚಿರಋಣಿ.

ಇನ್ನು ಮುಂದೆ ನಮ್ಮನ್ನು ಯಾರಿಂದಲೂ ಸೋಲಿಸಲು ಸಾಧ್ಯವಿಲ್ಲ ಎಂದು ಸಂಸದೆ ಡಾ.ಪ್ರಭಾಮಲ್ಲಿಕಾರ್ಜುನ್ ಪರೋಕ್ಷವಾಗಿ ಮಾಜಿ ಸಂಸದ ಜಿ.ಎಂ.ಸಿದ್ದೇಶ್ವರ್, ಗಾಯಿತ್ರಿ ಸಿದ್ದೇಶ್ವರ್ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು.

ಗ್ರಾಮ ವಾಸ್ತವ್ಯ:

ಶಾಸಕರ ಮನೆಯಲ್ಲಿ ಶುಕ್ರವಾರ ವರಮಹಾಲಕ್ಷ್ಮೀ ಪೂಜೆಯಲ್ಲಿ ಭಾಗವಹಿಸಿದ ನಂತರ ಪಟ್ಟಣದ ತರಳಬಾಳು ಸಮುದಾಯಭವನದಲ್ಲಿ ಹಮ್ಮಿಕೊಂಡಿದ್ದ ಮತದಾರರಿಗೆ ಕೃತಜ್ಞತಾ ಸಭೆಯಲ್ಲಿ ಭಾಗವಹಿಸಿ ಮಾತನಾಡಿದರು.

ಪ್ರಭಕ್ಕ ಎಂಬುದು ಸಾಂಕೇತಿಕ ಮಾತ್ರ ಇದು ಜನ್ನ ಜಯವಲ್ಲ ನಿಮ್ಮೆಲ್ಲರ ಜಯ.

ಮತದಾರರಿಗೆ ನಮ್ಮ ಮನೆ ಬಾಗಿಲು ಯಾವಾಗಲು ತೆರೆದಿರುತ್ತದೆ. ಮುಂದಿನ ದಿನಗಳಲ್ಲಿ ಗ್ರಾಮಗಳಲ್ಲಿ ಜನತಾ ದರ್ಶನ ಮಾಡುವ ಮೂಲಕ ಜನರ,

ಕೂಲಿಕಾರರ, ರೈತರ ಕಷ್ಟಗಳಿಗೆ ಸಾಧ್ಯವಾದಷ್ಟು ಸ್ಥಳದಲ್ಲೇ ಇತ್ಯರ್ಥ ಪಡಿಸಲು ಪ್ರಯತ್ನಿಸುತ್ತೇನೆ.

ಜಗಳೂರು ಶಾಸಕರು, ಸಚಿವರು, ಸಂಸದರು ಸೇರಿದಂತೆ ತ್ರಿಬ್ಬಲ್ ಎಂಜಿನ್ ಸರಕಾರವಿದೆ. ಅಗತ್ಯ ಮೂಲಸೌಕರ್ಯ ಒದಗಿಸಲು ಪ್ರಾಮಾಣಿಕವಾಗಿ ದುಡಿಯುತ್ತೇವೆ. ಅಭಿವೃದ್ಧಿಯೇ ನಮ್ಮ ಮಂತ್ರವಾಗಿರುತ್ತದೆ ಎಂದರು.

ವರ್ಜಿನಲ್ ಆಟ ಶುರು:

ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ, ನಮ್ಮ ಮನೆ ಮಗಳು ಡಾ.ಪ್ರಭಮಲ್ಲಿಕಾರ್ಜುನ್ ಸಂಸದರಾಗಿ ಆಯ್ಕೆಯಾಗಿದ್ದಾರೆ. ದಾವಣಗೆರೆ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಸಂಸತ್ ನಲ್ಲಿ ಪ್ರಸ್ತಾಪಿಸಿದ್ದಾರೆ.

ಇದು ಟ್ರಯಲ್ ಇನ್ನು ಮುಂದೆ ವರ್ಜಿನಲ್ ಆಟ ಶುರುಆಗುತ್ತದೆ. ತ್ರಿಬ್ಬಲ್ ಇಂಜಿನ್ ಸರಕಾರದಿಂದ ಸಮಗ್ರ ಅಭಿವೃದ್ಧಿಗೆ ಬದ್ಧವಾಗಿದ್ದೇವೆ ಎಂದರು.

ಕರ್ನಾಟಕ ತಾಂಡ ಅಭಿವೃದ್ಧಿ ನಿಗಮದ ಅಧ್ಯಕ್ಷ ಜಯದೇವ್ ನಾಯ್ಕ ಮಾತನಾಡಿ,

ಜಗಳೂರಿನಲ್ಲಿ ನಿವೇಶನ ನೀಡಿದರೆ ಬಣಜಾರ ಸಮುದಾಯ ಭವನಕ್ಕೆ 2.5 ಕೋಟಿ ರೂ, ಜಗಳೂರು ವಿಧಾನ ಸಭಾ ಕ್ಷೇತ್ರದ ಲಂಬಾಣಿ ತಾಂಡಗಳ ಅಭಿವೃದ್ಧಿಗೆ 5 ಕೋಟಿ ರೂ.ಗಳನ್ನು ಕೊಡುವುದಾಗಿ ಭರವಸೆ ನೀಡಿದರು.

ಬ್ರಾಹ್ಮಣ ನಿಗಮದ ಅಧ್ಯಕ್ಷ ಅಸಗೋಡು ಜಯಸಿಂಹ ಮಾತನಾಡಿ,

ದಾವಣಗೆರೆ ಲೋಕಸಭಾ ಸದಸ್ಯರಾದ ಡಾ.ಪ್ರಭಮಲ್ಲಿಕಾರ್ಜುನ್ ಅವರಿಗೆ ಮುಂದಿನ ಭವಿಷ್ಯದಲ್ಲಿ ಮುಖ್ಯಮಂತ್ರಿಯಾಗುವ ಎಲ್ಲಾ ಗುಣಲಕ್ಷಣಗಳನ್ನು ಹೊಂದಿದ್ದಾರೆ ಎಂದು ಭವಿಷ್ಯ ನುಡಿದರು.

ಈ ಸಂದರ್ಭದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಶಿರ್ ಅಹಮ್ಮದ್, ಅರಸಿಕೆರೆ ಬ್ಲಾಕ್ ನ ಅಧ್ಯಕ್ಷ ಮಂಜುನಾಥ್, ಕೆಪಿಸಿಸಿ ಸದಸ್ಯ ಕಲ್ಲೇಶ್ ರಾಜ್ ಪಟೇಲ್,

ರಾಜ್ಯ ಎಸ್‍ಟಿ ಸೆಲ್ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ, ಪ್ರಧಾನಕಾರ್ಯದರ್ಶಿ ಕೀರ್ತಿಕುಮಾರ್, ಸಿ.ತಿಪ್ಪೇಸ್ವಾಮಿ, ಪಿ.ಸುರೇಶ್ ಗೌಡ, ಬಿ.ಮಹೇಶ್ವರಪ್ಪ, ಪಲ್ಲಾಗಟ್ಟೆ ಶೇಖರಪ್ಪ ಸೇರಿದಂತೆ ಅನೇಕರು ಇದ್ದರು

Share this Article
Leave a comment

Leave a Reply

Your email address will not be published. Required fields are marked *

error: Content is protected !!