ಕಾಂಗ್ರೆಸ್ ಸರ್ಕಾರದ ಸಾಧನೆ ಅಜರಾಮರ

Suddivijaya
Suddivijaya August 8, 2022
Updated 2022/08/08 at 3:17 PM
ಸುದ್ದಿವಿಜಯ ಜಗಳೂರು.ದೇಶದ ಅಭಿವೃದ್ದಿಯಲ್ಲಿ ಕಾಂಗ್ರೆಸ್ ಪಕ್ಷದ ಮಾಡಿದ  ಸಾಧನೆ  ಅಜರಾಮವಾಗಿದೆ  ಎಂದು ಕಾಂಗ್ರೆಸ್ ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ಹೇಳಿದರು.
ಜಗಳೂರು ತಾಲೂಕಿನ ಹಿರೇಮಲ್ಲನಹೊಳೆ ಗ್ರಾಮದಲ್ಲಿ ಸೋಮವಾರ ಸ್ವಾತಂತ್ರ ಅಮೃತ ಮಹೋತ್ಸವ ಹಿನ್ನೆಲೆ  ಕಾಂಗ್ರೆಸ್ ಹಮ್ಮಿಕೊಂಡಿರುವ ಪಾದಯಾತ್ರೆ ಸಮಾರಂಭದಲ್ಲಿ ಮಾತನಾಡಿದರು.
ಭಾರತ ಸ್ವಾತಂತ್ರಕ್ಕಾಗಿ ಕಾಂಗ್ರೆಸ್ ಅನೇಕ ನಾಯಕರು ಹೋರಾಟ ನಡೆಸಿ ಪ್ರಾಣ ತ್ಯಾಗ ಮಾಡಿದ್ದಾರೆ. ಸ್ವಾತಂತ್ರ ಬಂದ ನಂತರ  ಸುಮಾರು 65 ವರ್ಷಗಳ ಕಾಲ ಬಡವ, ಹಿಂದುಳಿದ ವರ್ಗಗಳ ಅಭಿವೃದ್ದಿ ಅನೇಕ ಕಾರ್ಯಕ್ರಮಗಳನ್ನು ಕೊಟ್ಟು ದೇಶವನ್ನು ಮುನ್ನಡೆಸಿಕೊಂಡು ಬಂದಿದೆ. ಆದರೆ ಕೇವಲ 8ವರ್ಷಗಳ ಆಡಳಿತ ನಡೆಸುತ್ತಿರುವ ಬಿಜೆಪಿ ಸರ್ಕಾರ ಆರ್ಥಿಕಯಲ್ಲಿ ಮುಗ್ಗರಿಸಿ ಪ್ರತಿ ಪ್ರಜೆಯನ್ನು ಸಾಲಗಾರರನ್ನಾಗಿ ಮಾಡಿರುವುದು ಇವರ ದೊಡ್ಡ ಸಾಧನೆಯಾಗಿದೆ ಎಂದು ಟೀಕಿಸಿದರು.
ಮಾಜಿ ಶಾಸಕ ಎಚ್.ಪಿ ರಾಜೇಶ್ ಮಾತನಾಡಿ, ಸುಮಾರು 30 ವರ್ಷಗಳ ಕಾಲ ಶಾಸಕರಾಗಿ ಜನಮನ್ನಡೆ ಪಡೆದಿದ್ದ ದಿ. ಮಾಜಿ ಸಚಿವ ಜಿ.ಎಚ್ ಅಶ್ವತ್‌ರೆಡ್ಡಿ ಮಾದರಿಯಾಗಿದ್ದಾರೆ. ತೊರೆಸಾಲು ಭಾಗ ಕಾಂಗ್ರೆಸ್ ಭದ್ರ ಕೋಟೆಯಾಗಿದೆ, ಮುಂಬರುವ ಚುನಾವಣೆಯಲ್ಲಿ ಒಗ್ಗೂಡಿ ಪಕ್ಷದ ಗೆಲುವಿಗೆ ಕೈಜೋಡಿಸಬೇಕು ಎಂದರು.
ಕೆಪಿಸಿಸಿ ಎಸ್ಟಿ ಘಟಕದ ರಾಜ್ಯಾಧ್ಯಕ್ಷ ಕೆ.ಪಿ.ಪಾಲಯ್ಯ ಮಾತನಾಡಿ, ಸಾಮಾಜಿಕ ನ್ಯಾಯ ನೀಡುವ ಕಾಂಗ್ರೆಸ್ ಕೇಂದ್ರ ಮತ್ತು ರಾಜ್ಯದಲ್ಲಿ ಅಧಿಕಾರಕ್ಕೆ ಬರಬೇಕಾಗಿದೆ. ಹೀಗಾಗಲೇ ಅನೇಕ ಬೆಲೆ ಏರಿಕೆಗಳಿಂದ ಸಾಮಾನ್ಯ ಜನರು ಆರ್ಥಿಕ ಸಂಕಷ್ಟಕ್ಕೆ ಸಿಲುಕ್ಕಿದ್ದಾರೆ, ಸರ್ಕಾರ ಬದಲಾಯಿಸುವ ಶಕ್ತಿ ಮತದಾರರಲ್ಲಿದೆ ಚುನಾವಣೆಯಲ್ಲಿ ಎತ್ತಿ ಹಿಡಿಬೇಕು ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕ್ಷೇತ್ರ ಉಸ್ತುವಾರಿ ಕಲ್ಲೇಶ್ ರಾಜ್‌ಪಟೇಲ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮದ್, ಮಾಜಿ ಅಧ್ಯಕ್ಷ ತಿಪ್ಪೇಸ್ವಾಮಿ ಗೌಡ್ರು, ಮಾಜಿ ಜಿ.ಪಂ ಅಧ್ಯಕ್ಷೆ ನಾಗರತ್ನಮ್ಮ, ಮಾಜಿ ಜಿ.ಪಂ.ಸದಸ್ಯ ಎಸ್.ಕೆ.ರಾಮರೆಡ್ಡಿ, ಮಾಜಿ ಚೇರ್ಮನ್ ಪ್ರಕಾಶ್ ರೆಡ್ಡಿ, ಜಿಲ್ಲಾ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ ಇದ್ದರು.
Share this Article
Leave a comment

Leave a Reply

Your email address will not be published. Required fields are marked *

error: Content is protected !!