ಕಠಿಣ ಅಭ್ಯಾಸ, ಏಕಾಗ್ರತೆಯಿಂದ ಓದಿದರೆ ಯಶಸ್ಸಿ ಗರಿ!

Suddivijaya
Suddivijaya June 4, 2022
Updated 2022/06/04 at 6:23 PM

ಸುದ್ದಿ ವಿಜಯ, ಜಗಳೂರು: ಕಠಿಣ ಅಭ್ಯಾಸ, ಏಕಾಗ್ರತೆಯಿಂದ ಓದಿದರೆ ಯಶಸ್ಸಿನ ಗುರಿ ಮುಟ್ಟಲು ಸಾದ್ಯವಾಗುತ್ತದೆ ಎಂದು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ. ಮಹೇಶ್ವರಪ್ಪ ಹೇಳಿದರು. ತಾಲೂಕಿನ ಕಲ್ಲೇದೇವರಪುರ ಕಲ್ಲೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ನಡೆದ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯಲ್ಲಿ ಮಾತನಾಡಿದರು.

ತಾಲೂಕಿನಲ್ಲಿ ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಿಗೆ ಪೈಪೋಟಿ ನೀಡುತ್ತಾ ಪ್ರತಿ ಕ್ಷೇತ್ರಗಳಲ್ಲೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಶೇ.100 ಫಲಿತಾಂಶ ಪಡೆದ ಶಾಲೆಯ ಗೌರವವನ್ನು ಎತ್ತಿ ಹಿಡಿದಿದ್ದಾರೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.
ಪ.ಜಾತಿ, ಪ.ಪಂಗಡ ವಿದ್ಯಾರ್ಥಿ ವೇತನ ಹಂಚಿಕೆಯಲ್ಲಿ ಕೆಲ ಲೋಪದೋಷಗಳಿರುವುದು ಕಂಡು ಬಂದಿದೆ. ವಿದ್ಯಾರ್ಥಿಗಳು ಅಗತ್ಯ ದಾಖಲೆಗಳನ್ನು ಸರಿಪಡಿಸಿಕೊಂಡು ತಾಂತ್ರಿಕ ತೊಂದರೆಗಳನ್ನು ಸರಿಪಡಿಸಿಕೊಂಡರೆ ನೇರವಾಗಿ ಖಾತೆಗೆ ಜಮೆ ಮಾಡಲಾಗುವುದು ಎಂದರು.

ಎಸ್‍ಎಸ್‍ಎಲ್‍ಸಿ ಪರೀಕ್ಷೆಯಲ್ಲಿ ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾದ ಪರಿಶಿಷ್ಠ ಸಮುದಾಯದ ವಿದ್ಯಾರ್ಥಿಗಳಿಗೆ ಸರ್ಕಾರದಿಂದ 15 ಸಾವಿರ ರೂ ಪ್ರೋತ್ಸಹಧನ ನೀಡಲಾಗುವುದು, ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ತಿಳಿಸಿದರು.

ಇದೇ ವೇಳೆ ಶಾಲಾ ಕ್ರೀಡಾ ಸಾಮಾಗ್ರಿಗಳ ಖರೀದಿಗೆ ವೈಯಕ್ತಿಕವಾಗಿ 5ಸಾವಿರ ನಗದು ನೀಡಿದರು. ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ ಇವರನ್ನು ಶಾಲಾ ಆಡಳಿತ ಮಂಡಳಿ ಸನ್ಮಾನಿಸಿತು. ಈ ಸಂದರ್ಭದಲ್ಲಿ ಶಾಲಾ ಮುಖ್ಯ ಶಿಕ್ಷಕ ಡಿ.ರಮೇಶ್‍ನಾಯ್ಕ, ಸಹ ಶಿಕ್ಷಕರಾದ ಚಿತ್ತಯ್ಯ, ತಿಪ್ಪೇಸ್ವಾಮಿ, ನಾಗರಾಜ್ ನಾಯ್ಕ, ಅನಂತ್, ಪ್ರಥಮ ದರ್ಜೆ ಸಹಾಯಕಿ ಚೈತ್ರಾಬಾಬು ಸೇರಿದಂತೆ ಮತ್ತಿತರಿದ್ದರು.

ಜಗಳೂರು ತಾಲೂಕಿನ ಕಲ್ಲೇದೇವರಪುರ ಕಲ್ಲೇಶ್ವರ ಗ್ರಾಮಾಂತರ ಪ್ರೌಢಶಾಲೆಯ ಆವರಣದಲ್ಲಿ ಶನಿವಾರ ನಡೆದ ವಿದ್ಯಾರ್ಥಿಗಳ ಸಮಾಲೋಚನಾ ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ಬಿ.ಮಹೇಶ್ವರಪ್ಪ ಇವರನ್ನು ಶಾಲಾ ಆಡಳಿತ ಮಂಡಳಿ ಸನ್ಮಾನಿಸಿತು.

agalurkalledevarapura-news

Share this Article
Leave a comment

Leave a Reply

Your email address will not be published. Required fields are marked *

error: Content is protected !!