ಸುದ್ದಿವಿಜಯ, ಜಗಳೂರು: ಇಲ್ಲಿನ ಕೃಷಿ ಇಲಾಖೆಯಿಂದ ಕೃಷಿ ಸಂಸ್ಕರಣೆ ಯೋಜನೆ ಅಡಿ, ತಾಡಪಾಲು ವಿತರಣೆಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ತಾಲೂಕು ಸಹಾಯಕ ಕೃಷಿ ನಿರ್ದೇಶಕ ಮಿಥುನ್ ಕಿಮಾವತ್ ತಿಳಿಸಿದ್ದಾರೆ.
ಸೆ.20ರ ಒಳಗೆ ಸಾಮಾನ್ಯ ವರ್ಗದವರಿಗೂ ಸೇರಿದಂತೆ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ರೈತರು ಸೂಕ್ತ ದಾಖಲೆಗಳಾದ ಪಹಣಿ, ಆಧಾರ್ ಕಾರ್ಡ್, ಬ್ಯಾಂಕ್ ಪಾಸ್‍ಬುಕ್ ಮತ್ತು ಜಾತಿ ಪ್ರಮಾಣ ಪತ್ರ ನಕಲು ದಾಖಲೆಗಳೊಂದಿಗೆ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
ಅರ್ಹ ಫಲಾನುಭವಿಗಳನ್ನು ಲಾಟರಿ ಮೂಲಕ ಆಯ್ಕೆ ಮಾಡಲಾಗುವುದು ಎಂದು ಸಹಾಯಕ ಕೃಷಿ ನಿರ್ದೇಶಕ ಮಿಥುನ್ ಕಿಮಾವತ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.