ಜಗಳೂರು: ಹೆಣ್ಣುಮಕ್ಕಳ ರಕ್ಷಣೆ ಪ್ರತಿಯೊಬ್ಬ ಭಾರತೀಯ ಹೊಣೆ!

Suddivijaya
Suddivijaya October 12, 2022
Updated 2022/10/12 at 3:07 PM

ಸುದ್ದಿವಿಜಯ, ಜಗಳೂರು: ಹೆಣ್ಣು ಮಕ್ಕಳಿಗೆ ರಕ್ಷಣೆ ಮತ್ತು ಅವಕಾಶಗಳನ್ನು ನೀಡುವುದರ ಜೊತೆಗೆ ಹೆಣ್ಣು ಮಕ್ಕಳು ಸಮಾಜದಲ್ಲಿ ಅನುಭವಿಸುವ ತೊಂದರೆಗಳ ಬಗ್ಗೆ ಅರಿವು ಮೂಡಿಸಬೇಕು ಎಂದು ಜೆಎಂಎಫ್‍ಸಿ ಹಾಗೂ ಸಿವಿಲ್ ನ್ಯಾಯಾಧೀಶ ಮೊಹಮ್ಮದ್ ಯುನೂಸ್ ಅಥಣಿ ಹೇಳಿದರು.

ಇಲ್ಲಿನ ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಭಾಂಗಣದಲ್ಲಿ ಬುಧವಾರ ಹಮ್ಮಿಕೊಂಡಿದ್ದ ಅಂತರಾಷ್ಟ್ರೀಯ ಹೆಣ್ಣು ಮಗುವಿನ ದಿನಾಚರಣೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಭಾರತದಲ್ಲಿ ಮಹಿಳೆಯರಿಗೆ ದೇವತೆ ಮತ್ತು ತಾಯಿಯ ಸ್ಥಾನ ನೀಡಲಾಗಿದೆ. ಹೆಣ್ಣು ಮಕ್ಕಳ ಬಗ್ಗೆ ಅಪಾರವಾದ ಗೌರವ ನೀಡಬೇಕು ಎಂದರು.

2008 ರಲ್ಲಿ ಮೊದಲ ಬಾರಿಗೆ ಕೇಂದ್ರ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವಾಲಯ ಪ್ರವರ್ಧ ಮಾನಕ್ಕೆತಂದಿತು. ಪ್ರಧಾನಿ ನರೇಂದ್ರ ಮೋದಿ ಬೇಟಿ ಬಚಾವೋ ಬೇಟಿ ಪಡಾವೋ ಎಂಬ ವ್ಯಾಖ್ಯದ ಮೂಲಕ ಹೆಣ್ಣುಮಕ್ಕಳ ಸಬಲೀಕರಣದ ಅಗತ್ಯವನ್ನು ಒತ್ತಿ ಹೇಳಿದ್ದಾರೆ.

ಹೆಣ್ಣೊಂದು ಕಲಿತರೆ ಶಾಲೆಯೊಂದು ತೆರೆದಂತೆ ಎಂಬ ನಮ್ಮ ಪಾರಂಪರಿಕ ಜ್ಞಾನವೇ ಈ ಮಾತಿನಲ್ಲಿದೆ. ಈ ಮಾತನ್ನು ಅನುಷ್ಠಾನಕ್ಕೆ ತರುವ ಅನಿವಾರ್ಯತೆ ನಮ್ಮ ದೇಶದಲ್ಲಿ ಹೆಚ್ಚಿದೆ ಎಂದು ಅಭಿಪ್ರಾಯಪಟ್ಟರು.

ಭಾರತೀಯ ಸಮಾಜದಲ್ಲಿ ಹೆಣ್ಣುಮಕ್ಕಳು ಎದುರಿಸುತ್ತಿರುವ ಅಸಮಾನತೆಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಮೂಡಿಸುವುದು, ಹೆಣ್ಣು ಮಕ್ಕಳ ಹಕ್ಕುಗಳು ಮತ್ತು ಸ್ತ್ರೀ ಶಿಕ್ಷಣ, ಆರೋಗ್ಯ ಮತ್ತು ಪೆÇೀಷಣೆಯ ಮಹತ್ವದ ಬಗ್ಗೆ ಜಾಗೃತಿ ಮೂಡಿಸುವುದು ದಿನದ ಉದ್ದೇಶವಾಗಿದೆ ಈ ದಿನದ ಉದ್ದೇಶವಾಗಿದೆ ಎಂದರು.

ಬ್ರಹ್ಮಕುಮಾರಿ ಈಶ್ವರಿ ವಿಶ್ವವಿದ್ಯಾಲಯ ಸಂಚಾಲಕಿ ಅಕ್ಕ ಭಾರತಿ ಮಾತನಾಡಿ, ಶಾಲಾ, ಕಾಲೇಜು ಮತ್ತು ವಿಶ್ವವಿದ್ಯಾನಿಲಯಗಳಲ್ಲಿ ಮಹಿಳೆಯರಿಗೆ ಮೀಸಲಾತಿಯಂತಹ ಅಭಿಯಾನಗಳು ಮತ್ತು ಕಾರ್ಯಕ್ರಮಗಳಿಗೆ ಅನುಗುಣವಾಗಿದೆ. ಕೆಲವು ಥೀಮ್‍ಗಳ ಆಧಾರದ ಮೇಲೆ ಆಯಾ ವರ್ಷದ ಕಾರ್ಯಕ್ರಮಗಳನ್ನು ಆಚರಿಸಲಾಗುತ್ತದೆ. 2019ರಲ್ಲಿ, ‘ಉಜ್ವಲವಾದ ನಾಳೆಗಾಗಿ ಹೆಣ್ಣುಮಕ್ಕಳನ್ನು ಸಬಲೀಕರಣಗೊಳಿಸುವುದು’,

2020ರಲ್ಲಿ ‘ನನ್ನ ಧ್ವನಿ, ನಮ್ಮ ಸಾಮಾನ್ಯ ಭವಿಷ್ಯ’, 2021ರಲ್ಲಿ ‘ಡಿಜಿಟಲ್ ಜನರೇಷನ್, ನಮ್ಮ ಪೀಳಿಗೆ’ ಥೀಮ್ ಆಗಿದ್ದವು. ಈ ವರ್ಷ ಹೆಣ್ಣು ಮಕ್ಕಳ ಶಿಕ್ಷಣ ಹಾಗೂ ಸಬಲೀಕರಣದ ಕಡೆಗೆ ನಡೆಯೋಣ ಎಂಬುದಾಗಿದೆ. ಆಜಾದಿ ಕಾ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವು ಕಡೆ ರಂಗೋಲಿ ಅಭಿಯಾನಗಳನ್ನು ಏರ್ಪಡಿಸಲಾಗಿತ್ತು ಎಂದು ವಿವರಿಸಿದರು.

ಈ ಸಂದರ್ಭದಲ್ಲಿ ವಕೀಲರ ಸಂಘದ ಮಾಜಿ ಕಾರ್ಯದರ್ಶಿ ತಿಪ್ಪೇಸ್ವಾಮಿ, ಅಲ್‍ಫಾತೀಮಾ ಸಂಸ್ಥೆ ಕಾರ್ಯದರ್ಶಿ ಶಾಹೀನಾ ಬೇಗಂ, ಚುಟುಕು ಸಾಹಿತ್ಯ ಪರಿಷತ್ತು ಅಧ್ಯಕ್ಷೆ ಗೀತಾ ಮಂಜು, ವಾಣಿ ಸೇರಿದಂತೆ ಮತ್ತಿತರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!