ಜಗಳೂರು: ಮುಗ್ಗಿದರಾಗಿಹಳ್ಳಿಯಲ್ಲಿಅಕ್ರಮ ಮದ್ಯಮಾರಾಟ ಪ್ರತಿಭಟನೆ!

Suddivijaya
Suddivijaya November 22, 2022
Updated 2022/11/22 at 4:27 AM

ಸುದ್ದಿವಿಜಯ: ಜಗಳೂರು: ತಾಲೂಕಿನ ಮುಗ್ಗಿದರಾಗಿಹಳ್ಳಿಯಲ್ಲಿ ಅಕ್ರಮವಾಗಿ ಮದ್ಯಮಾರಾಟ ಮಾಡುತ್ತಿರುವುದನ್ನು ವಿರೋಧಿಸಿ ಸೋಮವಾರ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಅಕ್ರಮ ಮದ್ಯ ಮಾರಾಟ ಮಾಡದಂತೆ ಅನೇಕ ಸಲ ಅಕ್ರಮ ಮದ್ಯ ಮಾರಾಟಗಾರರಿಗೆ ಎಚ್ಚರಿಕೆ ನೀಡಿದ್ದರೂ ಮಾರಾಟ ನಿಲ್ಲಿಸದಿರುವುದರಿಂದ 16 ವರ್ಷದಿಂದ ವಯೋ ವೃದ್ದರವರೆಗೂ ಕುಡುತನ ಶುರುವಾಗಿದೆ. ಆದ್ದರಿಂದ ಈ ಮದ್ಯದಿಂದ ದೂರ ಮಾಡಬೇಕು ಎಂದರು.

ಗ್ರಾಮದಲ್ಲಿ ಎಗ್ಗಿಲ್ಲದ ಸಣ್ಣ ಸಣ್ಣ ಅಂಗಡಿಗಳಲ್ಲಿ ಮದ್ಯ ಮಾರಾಟ ಮಾಡುತ್ತಿರುವುದರಿಂದ ದಿನದಿಂದ ದಿನಕ್ಕೆ ಕುಡುಕರ ಸಂಖ್ಯೆ ಹೆಚ್ಚಾಗುತ್ತಿದ್ದು, ಗ್ರಾಮದ ವಾತಾವರಣ ಸಂಪೂರ್ಣ ಹದಗೆಟ್ಟಿದೆ. ಅಧಿಕಾರಿಗಳು ಈಗಲಾದರೂ ಎಚ್ಚೆತ್ತುಕೊಂಡು ಅಕ್ರಮ ಮದ್ಯ ಮಾರಾಟ ತಡೆಗಟ್ಟಬೇಕು ಹಾಗೂ ಮಾರುವವರ ವಿರುದ್ದ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಅಬಕಾರಿ ಅಧಿಕಾರಿಗಳಿಗೆ ಒತ್ತಾಯಿಸಿದರು.

 ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಬೇಕು ಹಾಗೂ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಜಗಳೂರು ತಾಲೂಕಿನ ಮುಗ್ಗಿದರಾಗಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.
ತಾಲೂಕಿನಲ್ಲಿ ಅಕ್ರಮ ಮದ್ಯ ಮಾರಾಟ ತಡೆಯಬೇಕು ಹಾಗೂ ಅಕ್ರಮ ಮದ್ಯ ಮಾರಾಟ ಮಾಡುವವರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಸೋಮವಾರ ಜಗಳೂರು ತಾಲೂಕಿನ ಮುಗ್ಗಿದರಾಗಿಹಳ್ಳಿ ಗ್ರಾಮಸ್ಥರು ಪ್ರತಿಭಟನೆ ನಡೆಸಿದರು.

ಕುಡಿದು ಅನಾರೋಗ್ಯಕ್ಕೆ ತುತ್ತಾಗಿ 9 ಮಂದಿ ಸಾವನ್ನಪ್ಪಿದ್ದಾರೆ. ಇವರುಗಳು ಕೂಲಿ ಮಾಡಿ ಬದುಕುತ್ತಿದ್ದರು. ಆದರೆ ಮೃತರ ಕುಟುಂಬಗಳು ಬೀದಿಗೆ ಬಿದ್ದಿವೆ. ಮಕ್ಕಳ ಅನಾಥವಾಗಿವೆ ಎಂದು ಅಸಮಾಧಾನಗೊಂಡರು.

ಗ್ರಾ.ಪಂ ಸದಸ್ಯ ತಿಮ್ಮಾರೆಡ್ಡಿ ಮಾತನಾಡಿ, ತಾಲೂಕಿನ ಎಲ್ಲಾ ಗ್ರಾಮಗಳಲ್ಲಿ ಅಕ್ರಮ ಮದ್ಯ ಮಾರಾಟ ದಂಧೆ ಜೋರಾಗಿದೆ. ಇದನ್ನು ತಡೆಯುವಲ್ಲಿ ಅಬಕಾರಿ ಹಾಗೂ ಪೆÇಲೀಸ್ ಅಧಿಕಾರಿಗಳು ವಿಫಲರಾಗಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಎಲ್.ಬಿ ಭೈರೇಶ್, ವೆಂಕಟೇಶ್, ಕೇಶವಮೂರ್ತಿ, ಚೌಡೇಶ್, ಅಂಜಿನಪ್ಪ, ಆನಂದ್, ರಾಮ್ ಕುಮಾರ್ ಸೇರಿದಂತೆ ಮತ್ತಿತರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!