ಸುದ್ದಿವಿಜಯ, ಜಗಳೂರು: ಕೇಂದ್ರ ಮತ್ತು ರಾಜ್ಯ ಸರಕಾರದ ಮಹತ್ವಾಕಾಂಕ್ಷೆಯ ಯೋಜನೆಗಳಲ್ಲಿ ಒಂದಾದ ಭದ್ರಾ ಮೇಲ್ದಂಡೆ ಯೋಜನೆಗೆ ಶನಿವಾರ ಭೂಮಿ ಪೂಜೆ ನೆರವೇರಲಿದೆ ಎಂದು ಬಿಜೆಪಿ ವಿಜಯ ಸಂಕಲ್ಪ ಯಾತ್ರೆಯಲ್ಲಿ ಶಾಸಕ ಎಸ್.ವಿ.ರಾಮಚಂದ್ರ ಹೇಳಿದರು.
ಪಟ್ಟಣದ ಈಶ್ವರ ದೇವಸ್ಥಾನದಿಂದ ಅಂಬೇಡ್ಕರ್ ವೃತ್ತದ ವರೆಗೆ ಬಿಜೆಪಿ ವಿಜಯ ಸಂಕಲ್ಪ ಯಾತ್ರೆ ಕಾರ್ಯಕ್ರಮ ನಡೆಯಿತು. ಶಾಸಕ ಎಸ್.ವಿ.ರಾಮಚಂದ್ರ ವಿಜಯ ಸಂಕಲ್ಪ ಯಾತ್ರೆ ವಾಹನಕ್ಕೆ ಪೂಜೆ ನೆರವೇರಿಸಿದ ನಂತರ ಸಾವಿರಾರು ಸಂಖ್ಯೆಯಲ್ಲಿ ನೆರದ ಕಾರ್ಯಕರ್ತರೊಂದಿಗೆ ಬೃಹತ್ ಮೆರವಣಿಗೆಯಲ್ಲಿ ಸಾಗಿ ಅಂಬೇಡ್ಕರ್ ವೃತ್ತ ತಲುಪಿದ ನಂತರ ಕಾರ್ಯಕರ್ತರು ಪಟಾಕಿ ಸಿಡಿಸಿ, ಪುಷ್ಪಾ ಹಾಕುವ ಮೂಲಕ ವಿಜಯ ಸಂಕಲ್ಪ ಯಾತ್ರೆಗೆ ಬೀಳ್ಕೊಟ್ಟರು.
ಈ ವೇಳೆ ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಹಾಗೂ ಮಾಜಿ ಎಂಎಲ್ ಸಿ ಸಿದ್ದರಾಜು ಮಾತನಾಡಿ, ಜಗಳೂರು ಕ್ಷೇತ್ರವನ್ನು ಹಸಿರು ನಾಡಾಗಿಸಿದ ಕೀರ್ತಿ ಬಿಜೆಪಿ ಸರ್ಕಾರ ಹಾಗೂ ಶಾಸಕ ರಾಮಚಂದ್ರ ಅವರಿಗೆ ಸಲ್ಲುತ್ತದೆ. ಅಪ್ಪರ್ ಭದ್ರಾ ಯೋಜನೆ ಜಾರಿ,
57 ತುಂಬಿಸುವ ಯೋಜನೆ ಮತ್ತು ಬಹುಗ್ರಾಮ ಕುಡಿಯುವ ನೀರಿನ 426 ಕೋಟಿ ರೂ ವೆಚ್ಚದ ಯೋಜನೆಗೆ ನಾಳೆ ಪೂಜೆ ನೆರವೇರಿಸಲಿದ್ದಾರೆ.
ಬರದ ನಾಡನ್ನು ಅಡಕೆ ನಾಡನ್ನಾಗಿ ಮಾಡಲು ಅವರು ಪಣ ತೊಟ್ಟಿದ್ದಾರೆ. ಈ ಬಾರಿಚುನಾವಣೆಯಲ್ಲಿ ಮತ್ತೆ ಬಿಜೆಪಿ ಗೆಲ್ಲಿಸಿ, ರಾಮಚಂದ್ರ ಅವರನ್ನು ಶಾಸಕರನ್ನಾಗಿ ಆಯ್ಕೆ ಮಾಡಿ ಎಂದರು.
ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ, ಕೊಟ್ಟ ಮಾತಿನಂತೆ ಕ್ಷೇತ್ರ ಅಭಿವೃದ್ಧಿಗೆ ಪಣ ತೊಟ್ಟಿದ್ದೇನೆ. ನಾಳೆ ಅಪ್ಪರ್ ಭದ್ರಾ ಯೋಜನೆಗೆ ಭೂಮಿ ಪೂಜೆ ನೆರವೇರಿಸಲಿದ್ದೇವೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಪೂಜೆ ನೆರವೇರಿಸಲಿದ್ದಾರೆ ಎಂದರು. ಕಾರ್ಯಕ್ರಮದಲ್ಲಿ ಬಿಜೆಪಿ
ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ, ಬಿಜೆಪಿ ಕ್ಷೇತ್ರವು ಉಸ್ತುವಾರಿ ಆರುಂಡಿ ನಾಗರಾಜ್, ಮಂಡಲ್ ಬಿಜೆಪಿ ಅಧ್ಯಕ್ಷ ಎಚ್.ಸಿ.ಮಹೇಶ್, ಜಿಪಂ ಮಾಜಿ ಸದಸ್ಯ ಸೊಕ್ಕೆ ನಾಗರಾಜ್, ಪಾಪಂ ಸದಸ್ಯ ಎಚ್. ನಾಗರಶಜ್, ಇಂದಿರೇಶ್, ಆರ್. ತಿಪ್ಪೇಸ್ವಾಮಿ, ಡಿ.ವಿ.ನಾಗಪ್ಪ, ಕಟ್ಟಿಗೆಹಳ್ಳಿ ಮಂಜುನಾಥ್ ಸೇರಿದಂತೆ ಸಾವಿರಾರು ಜನ ಕಾರ್ಯಕರ್ತರು ವಿಜಯ ಸಂಕಲ್ಪ ಯಾತ್ರೆಯಲ್ಲಿ ಭಾಗವಿಸಿದ್ದರು.