ಸುದ್ದಿವಿಜಯ, ಜಗಳೂರು: ಮೇ.10 ರಂದು ನಡೆಯಲಿರುವ 16ನೇ ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಏ.13 ರಂದು ಗುರುವಾರ ನಾಮಪತ್ರ ಸಲ್ಲಿಕೆಯ ಪ್ರಕ್ರಿಯೆ ಜಗಳೂರು ಪಟ್ಟಣದ ತಹಶೀಲ್ದಾರ್ ಕಚೇರಿಯಲ್ಲಿ ಚುನಾವಣಾ ನೀತಿ ಸಂಹಿತೆಯ ಮೊದಲ ಕಾರ್ಯ ಆರಂಭವಾಯಿಗಿದೆ.
ಇದೇ ವೇಳೆ ಪತ್ರಕರ್ತರಿಗೆ ಮಾಹಿತಿ ನೀಡಿದ ಚುನಾವಣಾಧಿಕಾರಿ ಎಸ್.ರವಿ, ಇಂದಿನಿಂದ ನಾಮಪತ್ರ ಪ್ರಕ್ರಿಯೆ ಆಂಭವಾಗಿದೆ. ಬೆಳಿಗ್ಗೆ 11 ರಿಂದ 3 ಗಂಟೆಯವರೆಗೆ ನಾಮಪತ್ರ ಸ್ವೀಕರಿಸಲಾಗುವುದು.
ಏ.20 ನಾಮಪತ್ರ ಸಲ್ಲಿಕೆಗೆ ಕೊನೆಯದಿನವಾಗಿರುತ್ತದೆ. ನಾಮಪತ್ರ ಸಲ್ಲಿಕೆಗೆ ಬೇಕಾಗುವ ಅಗತ್ಯ ದಾಖಲೆಗಳು ಏನೇನು ಬೇಕು ಎಂಬುದರ ಕುರಿತು ಅಗತ್ಯ ಮಾಹಿತಿಯನ್ನು ನೋಟಿಸ್ ಬೋರ್ಡ್‍ನಲ್ಲಿ ದಾಖಲಿಸಲಾಗಿದೆ.
ಸುವಿದಾ ಆನ್‍ಲೈನ್‍ನಲ್ಲಿ ನಾಮಪತ್ರ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಚುನಾವಣಾಧಿಕಾರಿಗಳ ಕಾರ್ಯಾಲಯದ 100 ಮೀ. ಒಳಗೆ ಕೇವಲ ಮೂರು ವಾಹನಗಳಿಗೆ ಅವಕಾಶ ಕಲ್ಪಿಸಲಾಗಿದೆ.
ನಾಮಪತ್ರ ಸಲ್ಲಿಸುವವರು 10 ಜನ ಸೂಚಕರ ಸಹಿ ಜೊತೆಗೆ ಕೇವಲ 5 ಜನರಿಗೆ ಪ್ರವೇಶ ಅವಕಾಶ ಕಲ್ಪಿಸಲಾಗಿದೆ. ಎಲ್ಲ ರಾಜಕೀಯ ಪಕ್ಷಗಳ ಮುಖಂಡರು ಈ ನೀತಿ ಸಂಹಿತೆಯನ್ನು ಪಾಲಿಸಬೇಕು ಎಂದರು.
ಈ ವೇಳೆ ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್, ಪಪಂ ಚೀಫ್ ಆಫೀಸರ್ ಲೋಕ್ಯಾನಾಯ್ಕ್, ಪಶುಸಂಗೋಪನಾ ಇಲಾಖೆ ಸಹಾಯಕ ನಿರ್ದೇಶಕ ಲಿಂಗರಾಜು, ಸಿಪಿಐ ಶ್ರೀನಿವಾಸ್‍ರಾವ್ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆಯಲ್ಲಿ ಉಪಸ್ಥಿತರಿದ್ದರು.
ಪಟ್ಟಣದ ತಾಲೂಕು ಕಚೇರಿಯಲ್ಲಿ ನಾಮಪತ್ರ ಸ್ವೀಕರಿಸುವ ಪ್ರಕ್ರಿಯೆ ಗುರುವಾರ ಆರಂಭವಾಯಿತು