ಸುದ್ದಿವಿಜಯ,ಜಗಳೂರು: ಜೆಡಿಎಸ್ ಪಕ್ಷದ ಮಲ್ಲಾಪುರ ಗ್ರಾಮದ ದೇವರಾಜ್ ಗುರುವಾರ ತಮ್ಮ ಉಮೇದುವಾರಿಕೆ ಸಲ್ಲಿಸಿದರು. ದಾವಣಗೆರೆ ತಾಲೂಕಿನ ಮಲ್ಲಾಪುರದವರಾದ ನನಗೆ ಜೆಡಿಎಸ್ ಪಕ್ಷ ಗುರುತಿಸಿ ಟಿಕೆಟ್ ಕೊಟ್ಟಿದೆ.
ರಾಜ್ಯ ರೈತ ಸಂಘದಲ್ಲಿ ಸಕ್ರಿಯರಾಗಿ ಗುರುತಿಸಿಕೊಂಡಿರುವ ಮಲ್ಲಾಪುರ ಗ್ರಾಮದ ರವಿ ಅವರನ್ನು ಜೆಡಿಎಸ್ ಬಿ ಫಾರ್ಮ್ ಕೊಡುವ ಮೂಲಕ ಜಗಳೂರು ಕ್ಷೇತ್ರದ ಅಭ್ಯರ್ಥಿಯಾಗಿ ಘೋಷಣೆ ಮಾಡಿದೆ.
ಈವೇಳೆ ಪತ್ರಕರ್ತರೊಂದಿಗೆ ಮಾತನಾಡಿದ ಅವರು, ನಮ್ಮದು ಮೂಲತಃ ಜನತಾಪರಿವಾರದ ಕುಟುಂಬ. ರೈತ ಸಂಘದಲ್ಲಿ ಹೋರಾಟ ಮಾಡಿಕೊಂಡು ಬಂದವನು. ಜೆಡಿಎಸ್ ಕಾಂಗ್ರೆಸ್ ಸಮ್ಮಿಶ್ರ ಸರಕಾರದಲ್ಲಿ ಕುಮಾರಸ್ವಾಮಿ ಅವರು ಸಿಎಂ ಆಗಿದ್ದಾಗ ಮಾಡಿದ ಅಭಿವೃದ್ಧಿ ಕಾರ್ಯಗಳ ಆಧಾರದ ಮೇಲೆ ಮತ ಕೇಳುತ್ತೇವೆ ಎಂದರು.
ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್ ಮಾತನಾಡಿ, ಈ ಹಿಂದೆ ಕ್ಷೇತ್ರದ ತಿಪ್ಪೇಸ್ವಾಮಿ ಅವರನ್ನು ಆಯ್ಕೆ ಮಾಡಿದ್ದೆವು.
ಆದರೆ ತಾಂತ್ರಿಕ ದೋಷದಿಂದ ಸಾಧ್ಯವಾಗಲಿಲ್ಲ. ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ ನಿಮ್ಮ ಪಕ್ಷದಲ್ಲೇ ಇದ್ದವರು ಈಗ ಅವರು ಕಾಂಗ್ರೆಸ್ ಸೇರಿದ್ದಾರೆ.
ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷದಿಂದ ಹೊರಗಿನವರನ್ನು ಅಭ್ಯರ್ಥಿಯನ್ನಾಗಿ ಕಣಕ್ಕಿಳಿಸಿದ್ದೀರಿ ಎಂದು ಕೇಳಿದ ಪ್ರಶ್ನೆಗೆ ಈ ಕ್ಷೇತ್ರದಲ್ಲಿ ಎಸ್.ವಿ.ರಾಮಚಂದ್ರ, ದೇವೇಂದ್ರಪ್ಪ, ಪಾಲಯ್ಯ, ಅಶ್ವಥ್ರೆಡ್ಡಿ, ಚನ್ನಯ್ಯ ಒಡೆಯರ್ ಸೇರಿದಂತೆ ಎಲ್ಲರೂ ನಮ್ಮ ಪಕ್ಷದಿಂದಲೇ ಬೆಳೆದು ಹೊರ ಹೋಗಿದ್ದಾರೆ. ಜೆಡಿಎಸ್ ಪಕ್ಷ ನಾಯಕರನ್ನು ಹುಟ್ಟು ಹಾಕುವ ಫ್ಯಾಕ್ಟರಿ ಎಂದು ಹೇಳಿದರು.
ಈ ವೇಳೆ ಜೆಡಿಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಕಲ್ಲೇರುದ್ರೇಶ್, ಲುಕ್ಮಾನ್ಉಲ್ಲಾಖಾನ್ ಸೇರಿದಂತೆ ಅನೇಕರು ಇದ್ದರು.