ಸುದ್ದಿವಿಜಯ, ಜಗಳೂರು: ಕ್ರೀಡೆಗಳು ವಿದ್ಯಾರ್ಥಿಗಳಲ್ಲಿ ನಾಯಕತ್ವ ಗುಣ ಮತ್ತು ಕ್ರೀಡಾ ಮನೋಭಾವ ಬೆಳೆಸುತ್ತದೆ ಎಂದು ಶಾಸಕ ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಹೇಳಿದರು.
ತಾಲೂಕಿನ ಹೊಸಹಟ್ಟಿ ಗ್ರಾಮದಲ್ಲಿ ಕ್ಷೇತ್ರ ಶಿಕ್ಷಣ ಇಲಾಖೆ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಹೊಸಹಟ್ಟಿ ಇವರ ಸಂಯುಕ್ತಾಶ್ರಯದಲ್ಲಿ ಬುಧವಾರ ಹಮ್ಮಿಕೊಂಡಿದ್ದ ದೊಣೆಹಳ್ಳಿ ವಲಯ ಮಟ್ಟದ ಹಿರಿಯ ಪ್ರಾಥಮಿಕ ಶಾಲೆಗಳ ಕ್ರೀಡಾಕೂಟವನ್ನು ಉದ್ಘಾಟಿಸಿ ಮಾತನಾಡಿದರು.
ಕ್ರೀಡೆಯಲ್ಲಿ ಸೋಲು-ಗೆಲುವು ಮುಖ್ಯವಲ್ಲ, ಕ್ರೀಡೆಯಲ್ಲಿ ಭಾಗವಹಿಸುವುದು ಮುಖ್ಯ, ವಿದ್ಯಾರ್ಥಿಗಳು ವಿದ್ಯಾಭ್ಯಾಸದ ಜತೆಗೆ ಕ್ರೀಡೆ, ಸಾಂಸ್ಕೃತಿಕ ಚಟವಟಿಕೆಯಲ್ಲಿ ತೊಡಗಿಸಿಕೊಂಡು ರಾಜ್ಯ ಮತ್ತು ರಾಷ್ಟ್ರ ಮಟ್ಟದಲ್ಲಿ ಸಾಧನೆ ಮಾಡಬೇಕು. ಇದಕ್ಕೆ ಅಗತ್ಯವಿರುವ ಸಹಕಾರ ನೀಡಲಾಗುವುದು ಎಂದರು.
ಸರಕಾರ ಕ್ರೀಡಾಪಟುಗಳಿಗೆ ಶಿಕ್ಷಣ ಮತ್ತು ಉದ್ಯೋಗದಲ್ಲಿ ಮೀಸಲಾತಿ ನೀಡಿದೆ. ಹಾಗಾಗಿ ಪ್ರತಿಭಾವಂತ ಕ್ರೀಡಾಪಟುಗಳನ್ನು ಗುರುತಿಸಿ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ತಾಲೂಕು ಮಟ್ಟದ ಕ್ರೀಡಾಕೂಟಗಳು ಉತ್ತಮ ವೇದಿಕೆಯಾಗಿವೆ.
ಇಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಹೆಚ್ಚಿನ ತರಬೇತಿ, ಮಾರ್ಗದರ್ಶನ ನೀಡಿ ಜಿಲ್ಲಾ ಮತ್ತು ರಾಜ್ಯಮಟ್ಟದಲ್ಲೂ ವಿಜೇತರಾಗಲು ಅನುಕೂಲ ಮಾಡಿಕೊಡಬೇಕು ಎಂದು ತಿಳಿಸಿದರು.
ಕ್ರೀಡಾಕೂಟದಲ್ಲಿ ತಾಲ್ಲೂಕಿನ ವಿವಿಧ ಭಾಗಗಳಿಂದ ವಿದ್ಯಾರ್ಥಿಗಳು ಭಾಗಿಯಾಗಿದ್ದರು. ಓಟದ ಸ್ಪರ್ಧೆಗಳು, ಡಿಸ್ಕಸ್ ಥ್ರೋ, ಗುಂಡು ಎಸೆತ ಸೇರಿದಂತೆ ವಿವಿಧ ಸ್ಪರ್ಧೆಯಲ್ಲಿ ವಿದ್ಯಾರ್ಥಿಗಳು ಉತ್ಸಾಹದಿಂದ ಪಾಲ್ಗೊಂಡಿದ್ದರು.
ಈ ಸಂದರ್ಭದಲ್ಲಿ ಪ್ರಭಾರಿ ಬಿಇಒ ಸುರೇಶ್‍ರೆಡ್ಡಿ, ಸಿಆರ್‍ಪಿ ರಾಜಶೇಖರ್, ಪತ್ರಿಕಾ ಒಕ್ಕೂಟದ ರಾಷ್ಟ್ರೀಯ ಮಂಡಳಿ ಮಾಜಿ ಸದಸ್ಯ ಅಣಬೂರು ಮಠದ ಕೊಟ್ರೇಶ್, ದೊಣೆಹಳ್ಳಿ ಗ್ರಾ.ಪಂ ಅಧ್ಯಕ್ಷ ತಿಪ್ಪೇಸ್ವಾಮಿ, ಸದಸ್ಯ ಸಿದ್ದಲಿಂಗಪ್ಪ, ಎಸ್‍ಡಿಎಂಸಿ ಅಧ್ಯಕ್ಷ ತಿಪ್ಪೇಸ್ವಾಮಿ, ಮುಖಂಡರಾದ ಮುನಿಯಪ್ಪ, ತಿಪ್ಪೇಸ್ವಾಮಿ, ಪ್ರಕಾಶ್‍ರೆಡ್ಡಿ, ಶಿವಣ್ಣ, ಲೋಕಪ್ಪ, ಮಾರುತಿ, ಉಪ್ಪರ್‍ಚೌಡಪ್ಪ, ಕರಡಿ ತಿಪ್ಪೇಸ್ವಾಮಿ, ಗುರುಸ್ವಾಮಿ, ಹರೀಶ್, ಶಿಕ್ಷಕರಾದ ವೀರೇಶ್, ಪ್ರಕಾಶ್, ನಿವೃತ್ತ ಶಿಕ್ಷಕ ರಂಗಪ್ಪ, ಆಶಾ ಕಾರ್ಯಕರ್ತೆಯರು ಸೇರಿದಂತೆ ಮತ್ತಿತರಿದ್ದರು.