ಸುದ್ದಿವಿಜಯ, ಜಗಳೂರು: ಪಟ್ಟಣದಲ್ಲಿರುವ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್‍ರಾಂ ಭವನ ನಿರ್ವಹಣೆ ಮತ್ತು ಮಾದಿಗ ಸಮಾಜದ ಕುಂದುಕೊರತೆಗಳ ಬಗ್ಗೆ ಚರ್ಚಿಸಲು ಸೆ.7ರಂದು ಬೆಳಗ್ಗೆ 10.30ಕ್ಕೆ ಅಂಬೇಡ್ಕರ್ ಭವನದಲ್ಲಿ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಆದಿಜಾಂಬವ ಹರಿಜನ ವಿದ್ಯಾರ್ಥಿ ನಿಲಯ ಸಂಸ್ಥೆ ಕಾರ್ಯದರ್ಶಿ ಜಿ.ಎಚ್ ಶಂಭುಲಿಂಗಪ್ಪ ತಿಳಿಸಿದರು.
ಪಟ್ಟಣದ ಪ್ರತಿಕಾ ಭವನದಲ್ಲಿ ಶನಿವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗಳೂರು ಪಟ್ಟಣದ ಹೃದಯ ಭಾಗದಲ್ಲಿ ಸುಮಾರು 2 ಎಕರೆ ಜಮೀನಿದ್ದು, ಅದರಲ್ಲಿ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಬಾಬು ಜಗಜೀವನ್‍ರಾಂ ಭವನ, ವಿದ್ಯಾರ್ಥಿ ನಿಲಯ, ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಸ್ವಾತಂತ್ರ ಪೂರ್ವದಿಂದ ಇಂದಿನವರೆಗೂ ಆದಿಜಾಂಬವ ಹರಿಜನ ವಿದ್ಯಾರ್ಥಿ ನಿಲಯ ನಡೆದುಕೊಂಡು ಬರುತ್ತಿದೆ.
ತಾಲೂಕಿನಲ್ಲಿ ಸುಮಾರು 30ಸಾವಿರಕ್ಕೂ ಹೆಚ್ಚು ಜನಸಂಖ್ಯೆ ಹೊಂದಿರುವ ಮಾದಿಗ ಸಮುದಾಯ ಸಾಮಾಜಿಕ, ಆರ್ಥಿಕ, ರಾಜಕೀಯವಾಗಿ ಸಾಕಷ್ಟು ಹಿಂದುಳಿದಿದೆ. ನಮ್ಮಲ್ಲಿ ಒಗ್ಗಟ್ಟಿನ ಕೊರತೆಯಿಂದ ಗುಂಪಾಗಿ ಚದುರಿ ಹೋಗಿದ್ದೇವೆ,
ಹಾಗಾಗಿ ಎಲ್ಲರು ಒಗ್ಗೂಡಿ ಸಮಾಜವನ್ನು ಸಂಘಟಿಸಬೇಕಾಗಿದೆ. ಆದ್ದರಿಂದ ಸಮುದಾಯದ ಎಲ್ಲರು ಸಭೆಯ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿದರು.
2ಕೋಟಿಯಲ್ಲಿ ನಿರ್ಮಾಣಗೊಂಡಿರುವ ಭವನಗಳು ಮೂಲೆ ಸೇರಬಾರದೆಂಬ ಉದ್ದೇಶದಿಂದ ನಿರ್ವಹಣೆಗಾಗಿ ವ್ಯಕ್ತಿಯೊಬ್ಬರಿಗೆ ನೀಡಲಾಗಿದೆ. ಆದರೆ ಕೆಲವರು ಸಮಾಜಕ್ಕೆ ಕೆಟ್ಟ ಹೆಸರು ತರುವ ಉದ್ದೇಶದಿಂದ ಮುಖಂಡರ ಮೇಲೆ ಮಸಿ ಬಳಿಯ ಪ್ರಯತ್ನ ಮಾಡಿರುವುದು ಗಮನಕ್ಕೆ ಬಂದಿದೆ.
ಹಾಗಾಗಿ ಮುಂದುವರಿಯಬಾರದೆಂಬ ಉದ್ದೇಶದಿಂದ ಸಂಸ್ಥೆಯ ಅಧ್ಯಕ್ಷ ತಿಪ್ಪೇಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ಸಭೆಯನ್ನು ಕರೆಯಲಾಗಿದೆ. ಬಂದು ಮುಕ್ತವಾಗಿ ಮಾತನಾಡಿ ಅಭಿಪ್ರಾಯಗಳನ್ನು ಹಂಚಿಕೊಳ್ಳಬಹುವುದು ಎಂದರು.
ಈ ಸಂದರ್ಭದಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಹಟ್ಟಿ ತಿಪ್ಪೇಸ್ವಾಮಿ, ಗ್ಯಾಸ್‍ಓಬಣ್ಣ, ಸಿದ್ದಮ್ಮನಹಳ್ಳಿ ವೆಂಕಟೇಶ್, ಹೊನ್ನೂರಪ್ಪ, ಅಣಬೂರು ರಾಜಶೇಖರ್ ಸೇರಿದಂತೆ ಮತ್ತಿತರಿದ್ದರು.