ಎಸ್‍ಟಿ ಘಟಕದ ರಾಜ್ಯ ನೂತನ ಪ್ರಧಾನ ಕಾರ್ಯದರ್ಶಿಯಾಗಿ ಎಂ.ಡಿ.ಕೀರ್ತಿಕುಮಾರ್ ನೇಮಕ

Suddivijaya
Suddivijaya December 30, 2023
Updated 2023/12/30 at 1:40 PM

ಸುದ್ದಿವಿಜಯ, ಜಗಳೂರು: ರಾಜ್ಯ ವಿಧಾನಸಭೆಗೆ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ಬಿ.ದೇವೇಂದ್ರಪ್ಪ ಗೆಲುವಿಗೆ ಕಾರ್ಯಕರ್ತರನ್ನು ಸಂಘಟಿಸಿದ ಕಾರಣ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆದೇಶದ ಮೇರೆಗೆ ಶಾಸಕ ಬಿ.ದೇವೇಂದ್ರಪ್ಪ ಪುತ್ರ ಎಂ.ಡಿ.ಕೀರ್ತಿಕುಮಾರ್ ಅವರನ್ನು ಕೆಪಿಸಿಸಿ ಎಸ್‍ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯನ್ನಾಗಿ ನೇಮಕ ಮಾಡಲಾಗಿದೆ.

ಶನಿವಾರ ಪಟ್ಟಣದ ಶಾಸಕರ ಜನ ಸಂಪರ್ಕ ಕಚೇರಿಯಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ ನೇಮಕಾತಿ ಆದೇಶ ಪತ್ರವನ್ನು ಎಂ.ಡಿ.ಕೀರ್ತಿಕುಮಾರ್ ಅವರಿಗೆ ಹಸ್ತಾಂತರಿಸಿದರು.

ಈ ವೇಳೆ ಮಾತನಾಡಿದ ಅವರು, ಚುನಾವಣೆಯಲ್ಲಿ ನೀಡಿದ ಜವಾಬ್ದಾರಿಯನ್ನು ಕೀರ್ತಿಕುಮಾರ್ ಅಚ್ಚುಕಟ್ಟಾಗಿ ನೆರವೇರಿಸಿದ್ದಾರೆ. ಎಸ್‍ಟಿ ಘಟಕದ ಮುಖಂಡರು ಹಾಗೂ ಸ್ಥಳೀಯ ಮುಖಂಡರ ಮಾರ್ಗದರ್ಶನದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ. ಅವರ ಸೇವಾ ಮನೋಭಾವಕ್ಕೆ ಪಕ್ಷ ಉನ್ನತ ಹುದ್ದೆ ನೀಡಿದೆ ಎಂದು ಪ್ರಶಂಸಿಸಿದರು.: ರಾಜ್ಯ ಎಸ್‍ಟಿ ಸೆಲ್‍ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಶಾಸಕರ ಪುತ್ರ ಎಂ.ಡಿ.ಕೀರ್ತಿಕುಮಾರ್‍ಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ ಆದೇಶ ಪ್ರತಿ ನೀಡಿದರು.ರಾಜ್ಯ ಎಸ್‍ಟಿ ಸೆಲ್‍ನ ಪ್ರಧಾನ ಕಾರ್ಯದರ್ಶಿಯಾಗಿ ನೇಮಕವಾದ ಶಾಸಕರ ಪುತ್ರ ಎಂ.ಡಿ.ಕೀರ್ತಿಕುಮಾರ್‍ಗೆ ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಸಗೋಡು ಜಯಸಿಂಹ ಆದೇಶ ಪ್ರತಿ ನೀಡಿದರು.

ಶಾಸಕ ಬಿ.ದೇವೇಂದ್ರಪ್ಪ ಮಾತನಾಡಿ, 12 ವರ್ಷ ಸರಕಾರಿ ಸೇವೆಯಲ್ಲಿದ್ದ ನನ್ನ ಪುತ್ರ ಕೀರ್ತಿಕುಮಾರ್ ಕೆಲಸಕ್ಕೆ ರಾಜೀನಾಮೆ ನೀಡಿ ರಾಜ್ಯ ನಾಯಕರ ಆದೇಶದಂತೆ ಪಕ್ಷ ಸಂಘಟನೆಯಲ್ಲಿ ತೊಡಗಿ ನನ್ನನ್ನು ಶಾಸಕನನ್ನಾಗಿ ಮಾಡುವಲ್ಲಿ ಅವರು ಶ್ರಮಿಸಿದ್ದಾರೆ. ಇದಕ್ಕೆ ಕಾರಣ ಅವರ ಟೀಂ ವರ್ಕ್ ಮತ್ತು ಕಾರ್ಯಕರ್ತರ ಶ್ರಮವೇ ಕಾರಣ.

ಎಲೆ ಮರೆಯ ಕಾಯಿಯಂತೆ ಕೆಲಸ ಮಾಡಿದ್ದರು. ಅವರ ಸೇವೆ ಗುರುತಿಸಿ ಅವರನ್ನು ಪಕ್ಷದಲ್ಲಿ ಮುನ್ನೆಲೆಗೆ ತರುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷ ಸಲೀಂ ಅಹಮದ್ ಅವರು ಬಹುದೊಡ್ಡ ಜವಾಬ್ದಾರಿ ನೀಡಿದ್ದಾರೆ.

ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್.ಮಲ್ಲಿಕಾರ್ಜುನ್ ಮಾರ್ಗದರ್ಶನದಲ್ಲಿ ಶೀಘ್ರದಲ್ಲೇ ಸಮಯ ನಿಗದಿಪಡಿಸಿ ಶಾಸಕರು, ಮಂತ್ರಿಗಳನ್ನು ಆಹ್ವಾನಿಸಿ ದೊಡ್ಡಮಟ್ಟದಲ್ಲಿ ಪದಗ್ರಹಣ ಸಮಾರಂಭ ಮಾಡಲಾಗುವುದು ಎಂದರು.

KPCC ಆಧ್ಯಕ್ಷರಿಗೂ, ಕಾರ್ಯಾಧ್ಯಕ್ಷರಿಗೂ ಅಭಿನಂದನೆ

ಎಸ್‍ಟಿ ಘಟಕದ ನೂತನ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್ ಮಾತನಾಡಿ, 2023ರ ವಿಧಾನಸಭೆಗೆ ಪಕ್ಷವನ್ನು ಅಧಿಕಾರಕ್ಕೆ ತರಲು ಮತ್ತು ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗದ ತಂದೆಯವರಾದ ಬಿ.ದೇವೇಂದ್ರಪ್ಪ ಜೀ ಅವರನ್ನು ಗೆಲ್ಲಿಸಲು ಸರಕಾರಿ ಕೆಲಸಕ್ಕೆ 2 ವರ್ಷಗಳ ಹಿಂದೆ ರಾಜೀನಾಮೆ ನೀಡಿದ್ದೆ.ಎಸ್‍ಟಿ ಘಟಕದ ನೂತನ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್ಎಸ್‍ಟಿ ಘಟಕದ ನೂತನ ಪ್ರಧಾನ ಕಾರ್ಯದರ್ಶಿ ಎಂ.ಡಿ.ಕೀರ್ತಿಕುಮಾರ್

ನನಗೆ ಕೆಪಿಸಿಸಿ ಎಸ್‍ಟಿ ಘಟಕದ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ ನೇಮಕ ಮಾಡಿದ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿಕೆ ಶಿವಕುಮಾರ್ ಮತ್ತು ಕಾರ್ಯದರ್ಶಿ ಸಲೀಂ ಅಹಮದ್ ಅವರಿಗೆ ಆಭಾರಿಯಾಗಿದ್ದೇನೆ.

ಮುಂದಿನ ಲೋಕಸಭಾ ಚುನಾವಣೆ ಮತ್ತು ಜಿಪಂ, ತಾಪಂ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ರಾಜ್ಯಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟಿಸುತ್ತೇನೆ ಎಂದು ತಿಳಿಸಿದರು.

ಸುದ್ದಿಗೋಷ್ಠಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಷಂಷೀರ್ ಅಹಮದ್, ಮಾಜಿ ಅಧ್ಯಕ್ಷ ಸುರೇಶ್‍ಗೌಡ್ರು, ಮುಖಂಡರಾದ ಸಿ.ತಿಪ್ಪೇಸ್ವಾಮಿ, ಓಮಣ್ಣ, ತಮಲೇಹಳ್ಳಿ ಗುರುಮೂರ್ತಿ, ಪಲ್ಲಾಗಟ್ಟೆ ಶೇಖರಪ್ಪ, ರುದ್ರಮುನಿ, ಅಹಮದ್ ಆಲಿ, ಕಾನನಕಟ್ಟೆ ಪ್ರಭು, ಜೀವಣ್ಣ ಸೇರಿದಂತೆ ಅನೇಕರು ಇದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!