ಸುದ್ದಿವಿಜಯ, ದಾವಣಗೆರೆ: ಪ್ರಸ್ತುತ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶ ಪ್ರಕಟವಾಗಿದೆ. ರಂದು ಬೆಳಿಗ್ಗೆ 10.30ಕ್ಕೆ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಪ್ರಕಟಿಸಿದೆ.
ಈ ಬಾರಿ ದಾವಣಗೆರೆ ಜಿಲ್ಲೆಯಲ್ಲಿ ಫಲಿತಾಂಶ ಕುಸಿತ ಕಂಡಿದೆ ಕಳೆದ ಬಾರಿ ಫಲಿತಾಂಶಕ್ಕಿಂತ ಈ ಬಾರಿ ಭಾರಿ ಕುಸಿತ ಕಂಡಿದೆ. 2022-23ನೇ ಸಾಲಿನಲ್ಲಿ 15ನೇ ಸ್ಥಾನದಲ್ಲಿದ್ದ ದಾವಣಗೆರೆ ಜಿಲ್ಲೆ ಈ ಬಾರಿ 23ನೇ ಸ್ಥಾನಕ್ಕೆ ಕುಸಿತ ಕಂಡಿದೆ. ಪ್ರಸ್ತುತ ವರ್ಷ ಶೇ.73ರಷ್ಟು ಫಲಿತಾಂಶ ಬಂದಿದೆ.
ಕಾರಣಗಳೇನು:
ಈ ಬಾರಿಯ ಎಸ್‍ಎಸ್‍ಎಲ್‍ಸಿ ಪರೀಕ್ಷೆ ಅತ್ಯಂತ ಶಿಸ್ತುಬದ್ಧವಾಗಿ ಮತ್ತು ವೆಬ್ ಕ್ಯಾಮರಾಗಳನ್ನು ಅಳವಡಿಸಿ ಕಾಪಿಗೆ ಅವಕಾಶ ಮಾಡಿಕೊಡದೇ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.
ಕೇಂದ್ರಗಳಿಗೆ ಅನ್ಯರು ಅಥವಾ ವಿಷಯ ತಜ್ಞ ಶಿಕ್ಷಕರು ಪ್ರವೇಶ ಮಾಡದಂತೆ ವೆಬ್ ಕ್ಯಾಮರಾಗಳನ್ನು ಅಳವಡಿಸಿದ್ದರಿಂದ ಫಲಿತಾಂಶ ಕುಸಿತ ಕಂಡಿದೆ. ಹೀಗಾಗಿ ವಿದ್ಯಾರ್ಥಿಗಳು ಸಾಕಷ್ಟು ಸಂಖ್ಯೆಯಲ್ಲಿ ಫೇಲ್ ಆಗಿದ್ದಾರೆ.