ಸುದ್ದಿ ವಿಜಯ, ಬೆಂಗಳೂರು: ಇಡೀ ರಾಜ್ಯ, ದೇಶದ ಜನರನ್ನು ತಲ್ಲಣಗೊಳಿಸಿದ್ದ ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಪೊಲೀಸರು ಇಬ್ಬರು ಆರೋಪಿಗಳನ್ನ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ಳಾರೆಯ ಶಫಿಕ್ (27), ಜಾಕೀರ್ ಸವಣೂರು (29) ಬಂಧಿತ ಆರೋಪಿಗಳಾಗಿದ್ದು ಪ್ರಮುಖ ಆರೋಪಿಗಳ ಪತ್ತೆಗೆ ಪೊಲೀಸರು ಆರು ತಂಗಳನ್ನು ರಚಸಿ ಶೋಧ ಕಾರ್ಯ ಮುಂದುವರೆಸಿದ್ದಾರೆ.
ಪ್ರವೀಣ ಹತ್ಯೆಯಾಗುತ್ತಿದ್ದಂತೆ ಬಿಜೆಪಿ ಯಲ್ಲಿ ವಿವಿಧ ಮೋರ್ಚಗಳ ಮುಖಂಡರ ರಾಜೀನಾಮೆ ಪರ್ವ ಆರಂಭವಾಗುತ್ತಿದ್ದಂತೆ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ದಿಟ್ಟಕ್ರಮಕ್ಕೆ ಮುಂದಾಗಿದ್ದಾರೆ.
ಪೊಲೀಸ್ ಇಲಾಖೆಯ ಮೇಲೆ ಒತ್ತಡ ಹಾಕಿ ಆರೋಪಿಗಳನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷೆ ಕೊಡಿಸುವವರೆಗೂ ವಿರಮಿಸುವುದಿಲ್ಲ ಎಂದು ಶಪಥ ಮಾಡಿದ್ದಾರೆ. ಹೀಗಾಗಲೇ ರಾಜ್ಯದಾದ್ಯಂತ ಪ್ರತಿಭಟನೆಯ ಕಾವು ಜೋರಾಗುತ್ತಿದ್ದಂತೆ ಪೊಲೀಸರು ಆರೋಪಿಗಳ ಹುಡುಕಾಟಕ್ಕೆ ದಿಟ್ಟ ಕ್ರಮ ಕೈಗೊಂಡಿದ್ದಾರೆ.
ಮುಖ್ಯಮಂತ್ರಿಗಳು ಹತ್ಯೆಯಾದ ಪ್ರವೀಣ್ ಕುಟುಂಬಕ್ಕೆ 25 ಲಕ್ಷ ರೂ ಪರಿಹಾರ ನೀಡಿದ್ದಾರೆ. ವಿವಿಧ ರಾಜಕೀಯ ಮುಖಂಡರು ಸಹ ಆರ್ಥಿಕ ನೆರವು ನೀಡುತ್ತಿದ್ದಾರೆ.