suddivijyanew26/05/2024
ಸುದ್ದಿವಿಜಯ, ಬೆಂಗಳೂರು: ತೀವ್ರ ಬರಗಾಲ ಕಂಡ ರಾಜ್ಯದ ಮತ್ತು ದೇಶದ ಜನತೆಗೆ ಹವಾಮಾನ ಇಲಾಖೆ ಗುಡ್‍ನ್ಯೂಸ್ ಕಟ್ಟಿದೆ.
ಕೇರಳ ಮತ್ತು ಕರ್ನಾಟಕದಲ್ಲಿ ನೈಋತ್ಯ ಮಾನ್ಸೂನ್ ಶೀಘ್ರವಾಗಿ ಪ್ರಾರಂಭವಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ (ಐಎಂಡಿ) ಮುನ್ಸೂಚನೆ ನೀಡಿದೆ. ಮೇ ಅಂತ್ಯದವರೆಗೆ ಕರ್ನಾಟಕದ ಬಹುತೇಕ ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನೂ ನೀಡಿದೆ.
ಮೇ 30 ರೊಳಗೆ ಕೇರಳ ಮತ್ತು ಮೇ 31 ರ ವೇಳೆಗೆ ಕರ್ನಾಟಕವನ್ನು ಅಪ್ಪಳಿಸುವ ಸಾಧ್ಯತೆಯಿದೆ. ಈ ಹಿಂದೆ ಜೂನ್ 4 ರಂದು ಕೇರಳಕ್ಕೆ ಮುಂಗಾರು ಅಪ್ಪಳಿಸುವ ಸಾಧ್ಯತೆಯಿದೆ ಎಂದು ಐಎಂಡಿ ಹೇಳಿತ್ತು.
ರೆಮಲ್ ಚಂಡಮಾರುತ ತಮಿಳುನಾಡು ಮತ್ತು ಆಂಧ್ರ ಪ್ರದೇಶದ ಕರಾವಳಿ ಭಾಗದಿಂದ ಭಾರೀ ದೂರ ಚಲಿಸಿದೆ. ಹೀಗಾಗಿ ಬೆಂಗಳೂರು ಸೇರಿದಂತೆ ರಾಜ್ಯ, ಹಾಗೂ ದಕ್ಷಿಣ ಭಾರತಕ್ಕೆ ಚಂಡಮಾರುತದಿಂದ ಯಾವುದೇ ಪರಿಣಾಮವನ್ನು ಈ
ಮುಂದಿನ ಮೂರು ದಿನ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಮಳೆಯಾಗುವ ಯಾವುದೇ ಸಾಧ್ಯತೆ ಇಲ್ಲ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿ ಪೂರ್ವ ಮುಂಗಾರು ಇಳಿಕೆಯಾಗಿದೆ.
ಇನ್ನು ಬಂಗಾಳ ಕೊಲ್ಲಿಯಲ್ಲಿ ರೂಪುಗೊಳ್ಳುತ್ತಿರುವ ರೆಮಲ್ ಚಂಡಮಾರುತವು ಕರ್ನಾಟಕದ ಮೇಲೆ ಸಹ ಪರಿಣಾಮ ಬೀರಲಿದೆಯೇ ಎಂಬ ಪ್ರಶ್ನೆ ಉದ್ಭವಿಸಿತ್ತು. ಇದೀಗ ಹವಾಮಾನ ಇಲಾಖೆ ಈ ಪ್ರಶ್ನೆಗೆ ಉತ್ತರ ನೀಡಿದೆ.
ಮುಂದಿನ ಮೂರ್ನಾಲ್ಕು ದಿನ ಬೆಂಗಳೂರು ನಗರದಲ್ಲಿ ಮೋಡ ಕವಿದ ವಾತಾವರಣ ಮುಂದುವರಿಕೆ ಆಗಲಿದ್ದು, ಅತ್ತ ಕೋಲ್ಕತಾ, ಹಿಮಾಚಲ ಪ್ರದೇಶಗಳಿಗೆ ಚಂಡಮಾರುತದ ಎಫೆಕ್ಟ್ ಸಾಧ್ಯತೆ ಹಿನ್ನೆಲೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಜೂನ್ 1ರ ಬಳಿಕ ಕರಾವಳಿ ಮತ್ತು ದಕ್ಷಿಣ ಒಳನಾಡು ಪ್ರದೇಶಗಳಿಗೆ ಭಾರೀ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ವಾಡಿಕೆಗಿಂತ ಹೆಚ್ಚಾಗಿ ಮುಂಗಾರು ಮಳೆ ಅಬ್ಬರಿಸುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.