ಕೇಂದ್ರ ಸರ್ಕಾರದಿಂದ ಎಲ್ಲಾ ಕ್ಷೇತ್ರಗಳಲ್ಲೂ ಸಮಾನತೆ : ಹನುಮಂತ ನಾಯ್ಕ

Suddivijaya
Suddivijaya June 9, 2022
Updated 2022/06/09 at 11:58 PM

ಸುದ್ದಿ ವಿಜಯ, ಜಗಳೂರು: ಪರಿಶಿಷ್ಠ ಜಾತಿ ಜನಾಂಗದ ಅಭಿವೃದ್ದಿಗೆ ಕೇಂದ್ರ ಸರ್ಕಾರ ಒತ್ತು ನೀಡಿದ್ದು, ಎಲ್ಲಾ ಕ್ಷೇತ್ರಗಳಲ್ಲೂ ಸಮಾನತೆ ಕಲ್ಪಿಸಿದೆ ಎಂದು ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾಧ್ಯಕ್ಷ ಹನುಮಂತನಾಯ್ಕ ಅಭಿಪ್ರಾಯಪಟ್ಟರು.

ಕೇಂದ್ರ ಸರ್ಕಾರ 8 ವರ್ಷ ಅಧಿಕಾರ ಪೂರ್ಣಗೊಳಿಸಿದ ಹಿನ್ನೆಲೆ ಬುಧವಾರ ಇಲ್ಲಿನ ಜೆಸಿಆರ್ ಬಡಾವಣೆಯ ಎಸ್ಸಿ ಕಾಲನಿಯಲ್ಲಿ ಬಿಜೆಪಿ ಎಸ್ಸಿ ಮೋರ್ಚಾದ ವತಿಯಿಂದ ಆಯೋಜಿಸಿದ್ದ ಸಂಭ್ರಮಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಪ್ರಧಾನ ಮಂತ್ರಿ ನರೇಂದ್ರ ಮೋದಿ 8ವರ್ಷಗಳ ಆಡಳಿತದಲ್ಲಿ ದೇಶದ ಅಭಿವೃದ್ದಿಗೆ, ಸಾಮಾಜಿಕ ನ್ಯಾಯಕ್ಕೆ ಹಾಗೂ ಸಾಮಾಜಿಕ ಭದ್ರತೆ ಕಲ್ಪಿಸುವಲ್ಲಿ ಯಶಸ್ವಿ ಆಡಳಿತ ನೀಡಿದ್ದಾರೆ. 2014ರಲ್ಲಿ ಜನಧನ್ ಯೋಜನೆಯಿಂದ ಪಿಂಚಣಿ, ವಿದ್ಯಾರ್ಥಿ ವೇತನ ಸೇರಿದಂತೆ ಬ್ಯಾಂಕ್ ವ್ಯವಹಾರಕ್ಕೆ ತುಂಬ ಅನುಕೂಲವಾಗಿದೆ. 2016ರಲ್ಲಿ ಉಜ್ವಲ ಯೋಜನೆ ಜಾರಿಗೆ ತರಲಾಯಿತು, 8 ಕೋಟಿ ಮನೆಗಳಿಗೆ ಉಚಿತ ಅಡುಗೆ ಅನಿಲದ ವ್ಯವಸ್ಥೆಯನ್ನು ಕಲ್ಪಿಸಲಾಗಿದೆ.

2018ರಲ್ಲಿ ಆಯುಷ್ಮಾನ್ ಭಾರತ ಯೋಜನೆಯನ್ನು ಆರಂಭಿಸಿತು. ಇದು ಸರ್ಕಾರಿ ಪ್ರಾಯೋಜಿತ ಆರೋಗ್ಯ ವಿಮಾ ಯೋಜನೆಯಾಗಿದ್ದು,ಪ್ರತಿ ಬಡ ಕುಟುಂಬಕ್ಕೆ 5ಲಕ್ಷ ವಿಮಾ ಭದ್ರತೆ ನೀಡಿದೆ. ದೇಶದ 10 ಕೋಟಿ ಜನರು ಯೋಜನೆಯ ಲಾಭ ಪಡೆದುಕೊಂಡಿದ್ದಾರೆ, ಇಂತಹ ಹತ್ತು ಹಲವು ಕಾರ್ಯಕ್ರಮಗಳನ್ನು ಕೊಟ್ಟಿದ್ದಾರೆ ಎಂದರು.

ಬಿಜೆಪಿ ಎಸ್ಸಿ ಮೋರ್ಚಾ ತಾಲೂಕಾಧ್ಯಕ್ಷ ಎನ್. ಆರ್ ರಾಜೇಶ್ ಮಾತನಾಡಿ, ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿ ಸರ್ಕಾರ ಯುವಕರ ಸಬಲೀಕರಣಕ್ಕೆ ಗಮನಹರಿಸಿದೆ. ರಾಜಕೀಯ ಕ್ಷೇತ್ರದಲ್ಲೂ ಯುವಕರನ್ನು ಆಯ್ಕೆ ಮಾಡಿಕೊಂಡು ದೇಶದ ಪ್ರಗತಿಗೆ ಮುನ್ನಡೆಸುತ್ತಿದ್ದಾರೆ ಎಂದರು.

ಕಳೆದ 60 ವರ್ಷಗಳಿಗೆ ಹೋಲಿಕೆ ಮಾಡಿದರೆ ದೇಶದ ಚಿತ್ರಣವೇ ಬದಲಾವಣೆಯಾಗುತ್ತಿದೆ. ಕೃಷಿ ಕ್ಷೇತ್ರದಲ್ಲಿ ಕಿಸಾನ್ ಸಮ್ಮಾನ್ ಯೋಜನೆಯಿಂದ ಪ್ರತಿ ರೈತರ ಖಾತೆಗಳಿಗೆ ಮೂರು ಕಂತುಗಳಲ್ಲಿ ತಲಾ 2 ಸಾವಿರ ಹಣ ಖಾತೆಗಳಿಗೆ ಜಮೆ ಮಾಡಲಾಗುಗುತ್ತದೆ. ಇದರಿಂದ ರೈತರು ಬಿತ್ತನೆ ಬೀಜ ಖರೀದಿಸಲು ಸಹಕಾರಿಯಾಗಿದೆ. ಇಂತಹ ಪ್ರಧಾನ ಮಂತ್ರಿಗಳು ದೇಶಕ್ಕೆ ಅವಶ್ಯಕತೆ ಇದ್ದು ಮುಂದಿನ ಚುನಾವಣೆಯಲ್ಲೂ ಗೆದ್ದು ಬರಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ಈ ಸಂದರ್ಭದಲ್ಲಿ ಬಿಜೆಪಿ ಎಸ್ಸಿ ಮೋರ್ಚಾ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜಿ.ವಿ ಗಂಗಾಧರ್, ಕಾರ್ಯದರ್ಶಿ ಕುಬೇರಪ್ಪ, ತಾಲೂಕು ಉಸ್ತವಾರಿಗಳಾದ ಸತೀಶ್‍ನಾಯ್ಕ, ತಾಲೂಕು ಉಪಾಧ್ಯಕ್ಷ ಪೂಜಾರಿ ಸಿದ್ದಪ್ಪ, ಕಾರ್ಯದರ್ಶಿ ಉಮೇಶ್ ಸೇರಿದಂತೆ ಮತ್ತಿತರಿದ್ದರು.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!