ಸುದ್ದಿವಿಜಯ, ಚಿತ್ರದುರ್ಗ: ತಾಲ್ಲೂಕಿನ ಅಯ್ಯನಹಳ್ಳಿ ಗ್ರಾಮ ಪಂಚಾಯಿತಿ ಅಧ್ಯಕ್ಷರಾಗಿ ಆರ್.ಉಮೇಶ್ ಮತ್ತು ಉಪಾಧ್ಯಕ್ಷರಾಗಿ ಬಿ.ಪವಿತ್ರ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಅಯ್ಯನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 18 ಮಂದಿ ಸದಸ್ಯರ ಸಂಖ್ಯಾ ಬಲ ಹೊಂದಿದೆ. ಎರಡನೇ ಅವದಿಯ ಅಧ್ಯಕ್ಷ ಸ್ಥಾನ ಎಸ್ಸಿ ಸಾಮಾನ್ಯ ಹಾಗೂ ಉಪಾಧ್ಯಕ್ಷ ಸ್ಥಾನ ಸಾಮಾನ್ಯ ಮಹಿಳೆಗೆ ಮೀಸಲಿತ್ತು. ಹಾಗಾಗಿ ಎರಡು ಸ್ಥಾನಗಳಿಗೆ ಚುನಾವಣೆ ನಡೆಯಿತು.
ಚುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಷ ಸ್ಥಾನಕ್ಕೆ ಆರ್. ಉಮೇಶ್, ಉಪಾಧ್ಯಕ್ಷಕ್ಕೆ ಬಿ.ಪವಿತ್ರ ಇಬ್ಬರು ನಾಮ ಪತ್ರ ಸಲ್ಲಿಸಿದ್ದರು. ಬೇರೆ ಸದಸ್ಯರು ಉಮೇದುವಾರಿಕೆ ಸಲ್ಲಿಸದ ಹಿನ್ನೆಲೆ ಚುನಾವಣಾಧಿಕಾರಿ ಬಿಇಒ ತಿಪ್ಪೇಸ್ವಾಮಿ ಅವಿರೋಧ ಆಯ್ಕೆಯನ್ನು ಘೋಷಣೆ ಮಾಡಿದರು.
ಈ ವೇಳೆ ಸುದ್ದಿ ವಿಜಯ ವೆಬ್‍ನ್ಯೂಸ್‍ಗೆ ಪ್ರತಿಕ್ರಿಯೆ ನೀಡಿದ ನೂತನ ಅಧ್ಯಕ್ಷ ಆರ್.ಉಮೇಶ್, ಗ್ರಾಮ ಸ್ವರಾಜ್ಯದ ಪರಿಕಲ್ಪನೆ ನನಸು ಮಾಡುವ ಗುರಿ ನನ್ನದಾಗಿದೆ. ಗ್ರಾಮಗಳಲ್ಲಿ ಮೂಲ ಸೌಕರ್ಯ ಒದಗಿಸುವ ನಿಟ್ಟಿನಲ್ಲಿ ನಾನು ಮತ್ತು ಉಪಾಧ್ಯಕ್ಷರು ಹಾಗೂ ಸರ್ವ ಸದಸ್ಯರು ಸೇರಿ ಎಲ್ಲರೂ ಒಗ್ಗಟ್ಟಿನಿಂದ ಕಾರ್ಯನಿರ್ವಹಿಸುತ್ತೇವೆ ಎಂದರು.