ಹಿರಿಯೂರು ಬಳಿ KSRTC ಬಸ್ ಭೀಕರ ಅಪಘಾತ ನಾಲ್ವರ ಸಾವು!

Suddivijaya
Suddivijaya September 11, 2023
Updated 2023/09/11 at 3:00 AM

ಸುದ್ದಿವಿಜಯ, ಚಿತ್ರದುರ್ಗ:ತಾಲೂಕಿನ ಗೊಲ್ಲಹಳ್ಳಿ ಬಳಿಯ ಬೀದರ್-ಶ್ರೀರಂಗಪಟ್ಟಣ ರಸ್ತೆಯಲ್ಲಿ ಸೋಮವಾರ ಬೆಳಗಿನ ಜಾವದಲ್ಲಿ ಕೆಎಸ್‌ಆರ್‌ಟಿಸಿ ಹಾಗೂ ಲಾರಿಯೊಂದರ ನಡುವೆ ಭೀಕರ ಅಪಘಾತ ಸಂಭವಿಸಿ ನಾಲ್ವರು ಮೃತಪಟ್ಟು, ಹಲವು ಮಂದಿಗೆ ಗಾಯಗೊಂಡಿರುವ ದುರುಂತ ಘಟನೆ ನಡೆದಿದೆ.

ಬೆಂಗಳೂರು ಮೂಲದ ಪಾರ್ವತಮ್ಮ(45), ರಾಯಚೂರಿನ ಮಸ್ಕಿ ಮೂಲದ ರಮೇಶ್(40) ಸೇರಿದಂತೆ ಒಟ್ಟು ನಾಲ್ವರು ಮೃತಪಟ್ಟಿದ್ದಾರೆ. ಮೃತ ಪಟ್ಟಿರುವ ಇಬ್ಬರ ಗುರುತು ಪತ್ತೆಯಾಗಿಲ್ಲ.

ಆರಕ್ಕೂ ಹೆಚ್ಚು ಜನರಿಗೆ ಗಾಯಗಳಾಗಿದ್ದು ಅವರೆಲ್ಲರನ್ನೂ ಚಿತ್ರದುರ್ಗ ಜಿಲ್ಲಾಸ್ಪತ್ರೆಗೆ ದಾಖಲು ಮಾಡಲಾಗಿದೆ.

ಬೀದರ್-ಶ್ರೀರಂಗಪಟ್ಟಣ ನಡುವಿನ ಹೆದ್ದಾರಿ ಅಗಲೀಕರಣ ಕಾಮಗಾರಿಯಿಂದ ಸಿಂಗರ್ ರಸ್ತೆಯಲ್ಲಿಯೇ ವಾಹನಗಳು ಸಂಚರಿಸುತ್ತಿದ್ದು, ಚಳ್ಳಕೆರೆಯಿಂದ ಹಿರಿಯೂರು ಕಡೆಗೆ ಬರುತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಹಿಂದಿನಂದ ಬಂದ ಲಾರಿ ಓವರ್ ಟೇಕ್ ಮಾಡಲು ಹೋಗಿ ಬಸ್‌ಗೆ ಡಿಕ್ಕೆ ಹೊಡೆದು ಈ ಘಟನೆ ಸಂಭವಿಸಿದೆ.

ಲಾರಿಯು ಬಸ್‌ಗೆ ಡಿಕ್ಕಿ ಹೊಡೆದ ರಭಸಕ್ಕೆ ಬಸ್ಸಿನ ಎಡಬದಿ ನಜ್ಜುನೂರಾಗಿದ್ದು, ಅಲ್ಲಿ ಕುಳಿತಿದ್ದ ಪ್ರಯಾಣಿಕರೇ ಮೃತಪಟ್ಟಿದ್ದಾರೆ. ಲಾರಿಯ ಚಾಲಕ ಲಾರಿಯೊಂದಿಗೆ ನಾಪತ್ತೆ ಆಗಿದ್ದಾನೆ. ಐಮಂಗಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!