ಸುದ್ದಿವಿಜಯ, ದಾವಣಗೆರೆ : ಮಾಜಿ ಶಾಸಕ ಗುರುಸಿದ್ದನಗೌಡ ಉಚ್ಚಾಟನೆ ಹಿನ್ನಲೆ ದಾವಣಗೆರೆಯಲ್ಲಿರುವ ಗುರುಸಿದ್ದನಗೌಡ ಮನೆಗೆ ಮಾಜಿ ಶಾಸಕ ಎಂ.ಪಿ. ರೇಣುಕಾಚಾರ್ಯ ಭಾನುವಾರ ಭೇಟಿ ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ರೇಣುಕಾಚಾರ್ಯ, ನೋಟೀಸ್ ನೀಡದೇ ಉಚ್ಚಾಟನೆ ಮಾಡಿದ್ದು ಖಂಡನೀಯ. ಚುನಾವಣೆಯ ಸಂದರ್ಭದಲ್ಲಿ ಓಡಾಟ ಮಾಡಿ ಪಕ್ಷ ಕಟ್ಟಿದವರು. ಕಳೆದ ವಾರ ಉಚ್ಚಾಟನೆ ಮಾಡುತ್ತಾರೆ ಎಂದರೆ ಹೇಗೆ.
ಚುನಾವಣೆಯಲ್ಲಿ ಅಭ್ಯರ್ಥಿ ವಿರುದ್ದ ಕೆಲಸ ಮಾಡಿದರೆ ನೋಟೀಸ್ ನೀಡಬೇಕು. ಆದರೆ ಯಾವುದೇ ನೋಟೀಸ್ ನೀಡದೆ ಪಕ್ಷದಿಂದ ಗುರುಸಿದ್ದನಗೌಡ್ರನ್ನು ಕುಟುಂಬಸ್ಥರನ್ನು ಉಚ್ಚಾಟನೆ ಮಾಡಿದ್ದಾರೆ ಎಂದು ತಿಳಿಸಿದರು.ರವಿ ಕುಮಾರ್ ಲೋಕಾಸಭಾ ಚುನಾವಣೆ ಟಿಕೇಟ್ ಅಕಾಂಕ್ಷಿ. ಆದ್ದರಿಂದ ಬೆಳೆಯಬಾರದು ಎಂದು ಉಚ್ಚಾಟನೆ ಮಾಡಿದ್ದು ಖಂಡನೀಯ ಎಂದು ಆಕ್ಷೇಪ ವ್ಯಕ್ತಪಡಿಸಿದರು.
ರವೀಂದ್ರನಾಥ, ಗುರುಸಿದ್ದನಗೌಡ್ರನ್ನು ಮೂಲೆಗುಂಪು ಮಾಡುತ್ತಾರೆ. ಜಿಲ್ಲೆಯ ಐದು ಶಾಸಕರು ಒಟ್ಟಾಗಿ ಸಚಿವ ಸ್ಥಾನ ಕೇಳಿದರೂ ಕೊಡಲು ಬಿಡಲಿಲ್ಲ. ಸಚಿವ ಸ್ಥಾನ ತಪ್ಪಿಸಿದರು. ಏಕಪಕ್ಷೀಯವಾಗಿ ಜಿಲ್ಲಾಧ್ಯಕ್ಷರು ನಿರ್ಧಾರ ಕೈಗೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ದೇಶಕ್ಕೆ ಮೋದಿ ಹೇಗೋ ರಾಜ್ಯಕ್ಕೆ ಯಡಿಯೂರಪ್ಪ. ಎಲ್ಲಾ ಸಮುದಾಯಗಳನ್ನು ಒಟ್ಟಿಗೆ ತೆಗೆದುಕೊಂಡು ಹೋದ ಮಹಾನ್ ನಾಯಕ. ವ್ಯವಸ್ಥಿತವಾಗಿ ಯಡಿಯೂರಪ್ಪ ನವರನ್ನು ಇಳಿಸುವ ಕೆಲಸ ಮಾಡಿದ್ದರು. ಸಂಚು ಮಾಡಿ ಜೈಲಿಗೆ ಕಳುಹಿಸಿದರು.
ನಮ್ಮವರೇ ಆರೋಪ ಹೊರಿಸಿ ಸಿಎಂ ಸ್ಥಾನದಿಂದ ಕೆಳಗೆ ಇಳಿಸಿದರು ಎಂದು ಕಿಡಿಕಾರಿದರು.2010-12 ರಲ್ಲಿ ಆರೋಪವನ್ನು ಹೊರಿಸಿ ಜೈಲಿಗೆ ಕಳಿಸಿದರು. ಆದರೆ ಬಿಎಸ್ ವೈ ವಿರುದ್ದ ಮಾತನಾಡಿದ ಅವರಿಗೆ ನೋಟೀಸ್ ನೀಡಲಿಲ್ಲ ಎಂದರು.