ಬಿಜೆಪಿ ಸರಕಾರದ ವಿರುದ್ಧ ಹರಿಹಾಯ್ದ ಸಹಕಾರ ರತ್ನ ಪ್ರಶಸಸ್ತಿ ಪುರಸ್ಕೃತ ಜೆ.ಆರ್.ಷಣ್ಮುಖಪ್ಪ ಆಕ್ರೋಶ

Suddivijaya
Suddivijaya April 26, 2023
Updated 2023/04/26 at 1:02 PM

ಸುದ್ದಿವಿಜಯ, ದಾವಣಗೆರೆ: ಭ್ರಷ್ಟಾಚಾರ ರಹಿತ ಆಡಳಿತಕ್ಕಾಗಿ ಕಾಂಗ್ರೆಸ್ ಅವಶ್ಯಕತೆಯಿದ್ದು, ಇಡೀ ಜಿಲ್ಲೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಗೆಲ್ಲಿಸಬೇಕೆಂದು ಸಹಕಾರ ರತ್ನ ಪ್ರಶಸಸ್ತಿ ಪುರಸ್ಕೃತ ಜೆ.ಆರ್.ಷಣ್ಮುಖಪ್ಪ ಹೇಳಿದರು.

ಉತ್ತರ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಬಿ.ಕಲ್ಪನಹಳ್ಳಿಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸ್ವ ಸಹಾಯ ಗುಂಪು ಮಹಿಳೆಯರ ಸಭೆಯಲ್ಲಿ ಮಾತನಾಡಿದ ಅವರು, 2018 ರ ನಂತರ ದಾವಣಗೆರೆ ಉತ್ತರ ಕ್ಷೇತ್ರದ ಅಭಿವೃದ್ಧಿ ಸಂಪೂರ್ಣ ಸ್ಥಗಿತ ಗೊಂಡಿದೆ.

ಕಾಂಗ್ರೆಸ್ ಹಿಂದಿನ ಅವಧಿಯಲ್ಲಿ ಸಿಲಿಂಡರ್ ಬೆಲೆ ಕೇವಲ 400 ರೂಗಳಿಂದ 450 ರೂ.ಇತ್ತು. ಬೆಲೆ ಏರಿಕೆಯಾಗಿರಲಿಲ್ಲಘಿ. ಆದರೀಗ ಶ್ರೀ ಸಾಮಾನ್ಯ ಬದುಕದಂತೆ ಆಗಿದೆ. ಬಿಜೆಪಿ ಸರ್ಕಾರದ ಶೇ.40 ಕಮಿಷನ್ ವಿಚಾರದಲ್ಲಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಯ್ಯ ಪ್ರಧಾನಮಂತ್ರಿಗಳಿಗೆ ಪತ್ರ ಬರೆದು ಅಳಲು ತೋಡಿಕೊಳ್ಳುತ್ತಾರೆ .

ಇದರ ಪರಿಣಾಮ ಕೆ.ಎಸ್.ಈಶ್ವರಪ್ಪ ಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುತ್ತಾರೆ. ಅಂದರೆ ಈ ರಾಜ್ಯದ ಜನ ಸಾಮಾನ್ಯರ ಪರಿಸ್ಥಿತಿ ಏನಾಗಿರಬೇಕು ಎನ್ನುವುದನ್ನು ಎಲ್ಲರೂ ಅರ್ಥ ಮಾಡಿಕೊಳ್ಳಬೇಕು. ಚುನಾವಣಾ ಪೂರ್ವ ಸಮೀಕ್ಷೆಗಳ ಪ್ರಕಾರ ರಾಜ್ಯದಲ್ಲಿ ಕಾಂಗ್ರೆಸ್ ಕನಿಷ್ಟ 150 ಸ್ಥಾನಗಳನ್ನು ಪಡೆಯಲಿದೆ. ಈ ಹಿನ್ನೆಲೆಯಲ್ಲಿ ಪ್ರತಿಯೊಬ್ಬರೂ ಎಸ್.ಎಸ್.ಮಲ್ಲಿಕಾರ್ಜುನ ಅವರನ್ನು ಬೆಂಬಲಿಸಿ ಎಂದು ಕರೆ ನೀಡಿದರು.

ಮಾಜಿ ಸಚಿವ ಮಲ್ಲಿಕಾರ್ಜುನ್ ಪತ್ನಿ ಡಾ.ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿ, ಜಿಲ್ಲೆಯ ಸರ್ವಾಂಗೀಣ ಅಭಿವೃದ್ಧಿಗೆ ಎಸ್.ಎಸ್.ಮಲ್ಲಿಕಾರ್ಜುನ್ ಹಾಗೂ ಡಾ.ಶಾಮನೂರು ಶಿವಶಂಕರಪ್ಪ ಅವರ ಆಯ್ಕೆ ಅನಿವಾರ್ಯವಾಗಿದೆ. 2018 ರಿಂದ 23 ರ ತನಕ ಉತ್ತಮ ಅಭಿವೃದ್ಧಿ ಕಾರ್ಯಗಳನ್ನು ನಡೆಸಲು ಸಮಗ್ರ ಯೋಜನೆ ರೂಪಿಸಿದ್ದರು. ಆದರೆ 4 ಸಾವಿರ ಮತಗಳ ಅಂತರದಿಂದ ಪರಾಭವಗೊಂಡರು. ಇದರೊಂದಿಗೆ ಉತ್ತರ ಕ್ಷೇತ್ರದ ಅಭಿವೃದ್ಧಿ ಕೂಡ ಕುಂಠಿತಗೊಂಡಿತು ಎಂದರು.

ನಾವು ವಿದೇಶ ಪ್ರವಾಸಕ್ಕೆ ಹೋದಾಗ ಅಲ್ಲಿನ ಮೂಲಭೂತ ಸೌಕರ್ಯಗಳು ಮತ್ತು ಉತ್ತಮ ಅಭಿವೃದ್ಧಿ ಕಾಮಗಾರಿಗಳ ಬಗ್ಗೆ ಮಲ್ಲಿಕಾರ್ಜುನ್ ತಿಳಿದುಕೊಳ್ಳುತ್ತಾರೆ. ಮತ್ತು ಅವುಗಳ ಪೋಟೋ ತೆಗೆದುಕೊಳ್ಳುತ್ತಾರೆ. ಅದೇ ಮಾದರಿಯಲ್ಲಿ ದಾವಣಗೆರೆಯಲ್ಲೂ ಮೂಲಭೂತ ಸೌಕರ್ಯ ಮತ್ತು ಅಭಿವೃದ್ಧಿ ಕಾಮಗಾರಿಗಳ ಅನುಷ್ಠಾನಕ್ಕೆ ಪ್ರಯತ್ನ ಮಾಡುತ್ತಾರೆ .ಇದು ಅವರಿಗೆ ಇರುವ ಜನಪರ ಕಾಳಜಿಯ ದ್ಯೋತಕವಾಗಿದೆ ಎಂದರು.

ಬಿಜೆಪಿಯವರ ಶೇ.40 ಕಮಿಷನ್ ದಂಧೆಗೆ ರಾಜ್ಯದ ಜನ ನಲುಗಿ ಹೋಗಿದ್ದಾರೆ. ದಾವಣಗೆರೆ ಉತ್ತರ ಮತ್ತು ದಕ್ಷಿಣದಲ್ಲಿ ಆರುಲಕ್ಷ ಮತದಾರರು ಇದ್ದುಘಿ, ಇದರಲ್ಲಿ ಮೂರು ಲಕ್ಷ ಮಹಿಳಾ ಮತದಾರರು ಇದ್ದಾರೆ.

ಈ ಎಲ್ಲರೂ ಕೂಡ ಮಲ್ಲಿಕಾರ್ಜುನ್ ಮತ್ತು ಶಾಮನೂರು ಶಿವಶಂಕರಪ್ಪ ಅವರನ್ನು ಈ ಬಾರಿಯೂ ಬೆಂಬಲಿಸಿದರೆ ಎರಡೂ ಕ್ಷೇತ್ರಗಳ ಚಿತ್ರಣವೇ ಬದಲಾಗಲಿದೆ. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಬಲಿಸಿ ಎಂದು ಮನವಿ ಮಾಡಿದರು. ಈ ಸಂದರ್ಭದಲ್ಲಿ ಉದ್ಯಮಿ ಅಣಬೇರು ರಾಜಣ್ಣ ಸೇರಿದಂತೆ ಅನೇಕ ಮುಖಂಡರು, ಪಕ್ಷದ ಕಾರ್ಯಕರ್ತರು ಉಪಸ್ಥಿತರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!