ಸುದ್ದಿವಿಜಯ, ಜಗಳೂರು: ತಾಲೂಕಿನ ಚಿಕ್ಕಬನ್ನಿಹಟ್ಟಿ ಗ್ರಾಮದ ಕ್ರಾಸ್ಬಳಿ ಹಿಂದಿನಿಂದ ಬಂದ ಲಾರಿ ಬೈಕ್ಗೆ ಡಿಕ್ಕಿ ಹೊಡೆದ ಪರಿಣಾಮ ಕೆಂಚಮ್ಮ (50) ಆಸ್ಪತ್ರೆಗೆ ಸಾಗಿಸುವಾಗ ದಾರಿಯಲ್ಲೇ ಮೃತಪಟ್ಟಿರುವ ಘಟನೆ ಬುಧವಾರ ಮಧ್ಯಾಹ್ನ ಸಂಭವಿಸಿದೆ.
ಹೊಸಕೆರೆ ಗ್ರಾಮದಿಂದ ಜಗಳೂರು ಕಡೆ ಬರುತ್ತಿದ್ದ ಲಾರಿಯ ಚಾಲಕನ ನಿರ್ಲಕ್ಷ್ಯದಿಂದ ವೃದ್ಧೆ ಬಲಿಯಾಗಿದ್ದಾರೆ. ವೇಗವಾಗಿ ಬರುತ್ತಿದ್ದ ಲಾರಿ ಕಂಡ ತಕ್ಷಣ ರಸ್ತೆಯ ಬದಿಗೆ ಬೈಕ್ ನಿಲ್ಲಿಸಿದರೂ ಚಾಲಕ ಬೈಕ್ ಮೇಲೆಯೇ ಲಾರಿ ಹರಿಸಿದ್ದಾನೆ. ಹೀಗಾಗಿ ರಮೇಶ್ (18), ನಾಗರಾಜ್ (48) ಇಬ್ಬರ ಸ್ಥಿತಿ ಗಂಭೀರವಾಗಿದ್ದು, ಅವರನ್ನು ದಾವಣಗೆರೆ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.
ಲಾರಿ ಚಾಲಕನನ್ನು ಪೊಲೀಸರು ಬಂಧಿಸಿದ್ದು, ಜಗಳೂರು ಪಟ್ಟಣದಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಪಿಎಸ್ಐ ಮಹೇಶ್ ಹೊಸಪೇಟ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿದರು.