ಸುದ್ದಿವಿಜಯ, ದಾವಣಗೆರೆ: ಅಕ್ಕಿಗಾಗಿ ಕಾಂಗ್ರೆಸ್ ಪ್ರತಿಭಟನೆ ಮಾಡಿದ ಬೆನ್ನೇಲ್ಲೇ ಬೆಣ್ಣೆ ನಗರಿ ಬಿಜೆಪಿ ನಾಯಕರು ಈಗ ಕಾಂಗ್ರೆಸ್ ನಾಯಕರಿಗೆ ಟಾಂಗ್ ನೀಡಿದ್ದಾರೆ. ಇಡೀ ರಾಜ್ಯದಲ್ಲಿ ಎಲ್ಲಿಯೂ ಮಳೆ ಇಲ್ಲ ಆದ ಕಾರಣ ಬೆಳೆಯೂ ಸ್ಟಾಕ್ ಇದ್ದರೆ ಕೊಡಲಾಗುತ್ತಿತ್ತು. ಆದರೆ ಸ್ಟಾಕ್ ಇಲ್ಲದ ಕಾರಣ ಕೇಂದ್ರ ಸರಕಾರ ಅಕ್ಕಿ ನಿಲ್ಲಿಸಿದೆ ಎಂಬ ದಾಳ ಹೊರಡಿಸಿದ್ದಾರೆ.
ಈ ನಡುವೆ ಕಾಂಗ್ರೆಸ್ ಕೂಡ ಅನ್ನಭಾಗ್ಯ ಯೋಜನೆ ಅಡಿ ತಲಾ 10 ಕೆ.ಜಿ ಅಕ್ಕಿ ವಿತರಿಸುವ ರಾಜ್ಯ ಸರ್ಕಾರದ ಗ್ಯಾರಂಟಿ ಯೋಜನೆಗೆ ಕೇಂದ್ರ ಸರ್ಕಾರವು ಅಕ್ಕಿ ಪೂರೈಸುತ್ತಿಲ್ಲ ಎಂದು ಆರೋಪಿಸಿ, ಪ್ರತಿಭಟನೆ ನಡೆಸಿದೆ. ಅಲ್ದೇ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದ್ದಾರೆ.
ಎಲ್ಲವೂ ಉಚಿತ ಎಂದಿದ್ದ ಕಾಂಗ್ರೆಸ್ಸಿಗರು ಈಗ ಷರತ್ತುಗಳನ್ನು ಹಾಕುತ್ತಿದ್ದಾರೆ. ಕೆಲವಂತೂ ಅನುಷ್ಠಾನಕ್ಕೆ ಸಾಧ್ಯವಿಲ್ಲದ ಷರತ್ತುಗಳನ್ನು ಹಾಕಿದ್ದಾರೆ. ಈಗಾಗಲೇ ಕೇಂದ್ರ ಸರಕಾರ 5.ಕೆಜಿ ಅಕ್ಕಿಯನ್ನು ಆತ್ಮ ನಿರ್ಭರ ಯೋಜನೆಯಡಿ ಕೊಡುತ್ತಿದೆ. ಈ ನಡುವೆ ಕಾಂಗ್ರೆಸ್ ತಮ್ಮ ಬೇಳೆ ಬೇಯಿಸಿಕೊಳ್ಳಲು ಹತ್ತು ಕೆಜಿ ಅಕ್ಕಿಯನ್ನು ಉಚಿತವಾಗಿ ಕೊಡುತ್ತೇವೆ ಎಂದು ಘೋಷಣೆ ಮಾಡಿದೆ.
ಇದರಲ್ಲಿ ಕೇಂದ್ರದ ಬಿಜೆಪಿ ಪಾಲಿದ್ದುಘಿ, ಕೇಂದ್ರ ಅಕ್ಕಿಯನ್ನು ಕೊಡುತ್ತದೆ ಎಂದು ಜನರಿಗೆ ಮನವರಿಕೆ ಮಾಡಿಕೊಟ್ಟಿದೆ. ಕೇಂದ್ರದ ಅಕ್ಕಿ ಕೊಡುತ್ತಾ ಸಿಎಂ ಸಿದ್ದರಾಮಯ್ಯರನ್ನು ಅನ್ನರಾಮಯ್ಯ ಎಂದು ಬಿಂಬಿಸಲಾಗುತ್ತಿದೆ. ಇದು ಸರಿಯಲ್ಲ, ಕೇಂದ್ರದ ಬಳಿ ಅಕ್ಕಿ ಇದ್ದಿದ್ದರೇ ಕೊಡಲಾಗುತ್ತಿತ್ತು ಎಂದು ಬಿಜೆಪಿ ನಾಯಕರು ಹೇಳಿದ್ದಾರೆ.
ಈ ಹಿಂದೆ ಕೇಂದ್ರ ಸರ್ಕಾರ ರಿಯಾಯಿತಿ ದರದಲ್ಲಿ ಕೊಟ್ಟಅಕ್ಕಿಯನ್ನೆ ನಾನು ಉಚಿತವಾಗಿ ಕೊಟ್ಟೆ ಎಂದು ಕಾಂಗ್ರೆಸ್‍ನವರು ಹೇಳುತ್ತಿದ್ದಾರೆ. ಪ್ರತಿಯೊಬ್ಬರಿಗೂ ಹತ್ತು ಕೆ.ಜಿ. ಅಕ್ಕಿ ಕೊಡುತ್ತೇವೆ ಎಂದು ಕೊಟ್ಟ ಭರವಸೆ ಈಡೇರಿಸುವುದಕ್ಕೆ ಸಾಧ್ಯವಾಗುತ್ತಿಲ್ಲವೆಂದು ಕೇಂದ್ರದ ಮೇಲೆ ಗೂಭೆ ಕೂರಿಸಲಾಗುತ್ತಿದೆ.
ಈ ಹೊರೆಯಿಂದ ತಪ್ಪಿಸಿಕೊಳ್ಳಲು ಈಗ ಕೇಂದ್ರ ಸರ್ಕಾರ ಅಕ್ಕಿ ಕೊಟ್ಟಿಲ್ಲ ಎಂದು ಸಬೂಬು ಹೇಳುತ್ತಿದ್ದಾರೆ. ಕೇಂದ್ರ ಸರ್ಕಾರ ಕೊಡುತ್ತಿದ್ದ ಐದು ಕೆ.ಜಿ. ಅಕ್ಕಿ ಪೂರೈಕೆಯನ್ನು ಈವರೆಗೆ ನಿಲ್ಲಿಸಿಲ್ಲ. ಹೆಚ್ಚುವರಿ ಐದು ಕೆ.ಜಿ. ಅಕ್ಕಿ ಕೊಡುತ್ತೆನೆಂದು ಹೇಳಿದ್ದು ಕಾಂಗ್ರೆಸ್ ಅದರಂತೆ ನಡೆದುಕೊಳ್ಳಿ. ಅದನ್ನು ಬಿಟ್ಟು ಕೇಂದ್ರ ಸರ್ಕಾರದತ್ತ ಬೊಟ್ಟು ಮಾಡುವ ಕೀಳು ರಾಜಕಾರಣ ನಿಲ್ಲಿಸಿ ಎಂದು ಬಿಜೆಪಿ ಕೈ ನಾಯಕರ ವಿರುದ್ಧ ಹರಿಹಾಯ್ದಿದಿದ್ದಾರೆ.