ಸುದ್ದಿವಿಜಯ,ದಾವಣಗೆರೆ: ನಗರದ ಹೊರವಲಯದ ಎಸ್.ಎಸ್. ಆಸ್ಪತ್ರೆಯ ರೈಲ್ವೆ ಬ್ರಿಡ್ಜ್ ಬಳಿ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಬೈಕ್ ಒಂದು ರಸ್ತೆ ವಿಭಜಕಕ್ಕೆ ಡಿಕ್ಕಿ ಹೊಡೆದು ಇಬ್ಬರು ಮೃತಪಟ್ಟಿದ್ದಾರೆ.
ಕೇರಳದ ಪಾಲಕ್ಕಾಡ್ ಜಿಲ್ಲೆಯ ಅತುಲ್ (25) ಹಾಗೂ ಹೃಷಿಕೇಶ್ (24) ಮೃತರು. ಗೋವಾದಿಂದ ಪ್ರವಾಸ ಮುಗಿಸಿಕೊಂಡು ಬೆಂಗಳೂರಿಗೆ ವಾಪಸ್ ಬರುತ್ತಿದ್ದಾಗ ಗುರುವಾರ ಬೆಳಿಗ್ಗೆ ಅಪಘಾತವಾಗಿದೆ.
ನಿಯಂತ್ರಣ ತಪ್ಪಿದ ಬೈಕ್ ರಸ್ತೆಯ ವಿಭಜಕಕ್ಕೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಸವಾರರು ಸೇತುವೆ ಮೇಲಿನಿಂದ ರೈಲ್ವೆಯ ಹಳಿಯ ಪಕ್ಕ ಬಿದ್ದು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ರಸ್ತೆಯ ಬದಿಯಲ್ಲಿ ಬಿದ್ದಿದ್ದ ಬೈಕ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಕಾರಿನ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ.
ದಾವಣಗೆರೆ ದಕ್ಷಿಣ ಸಂಚಾರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.