ಸುದ್ದಿವಿಜಯ, ದಾವಣಗೆರೆ : ರಾಜ್ಯದ ಸಮಗ್ರ ಅಭಿವೃದ್ದಿಗೆ ಬಜೆಟ್‍ನಲ್ಲಿ ಗಮನ ನೀಡಲಾಗಿದೆ ಎಂದು ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿರ್ದೇಶಕ ಡಾ.ಜೆ.ಆರ್.ಷಣ್ಮುಖಪ್ಪ ಹೇಳಿದ್ದಾರೆ. ರಾಜ್ಯ ಬಜೆಟ್ ಕುರಿತು ಪ್ರತಿಕ್ರಿಯೆ ನೀಡಿರುವ ಅವರು ಕೃಷಿ,ಕೈಗಾರಿಕೆ, ಆರೋಗ್ಯ, ಶಿಕ್ಷಣ, ನೀರಾವರಿ ಮೂಲಭೂತ ಸೌಕರ್ಯಗಳನ್ನು ಕಲ್ಪಿಸುವಲ್ಲಿ ಬಜೆಟ್ ಯಶಸ್ವಿಯಾಗಿದೆ ಎಂದು ತಿಳಿಸಿದ್ದಾರೆ.
ಅತೀಮುಖ್ಯವಾಗಿ ಸಹಕಾರಿ ಕ್ಷೇತ್ರಕ್ಕೆ ಗಮನಾರ್ಹ ಕೊಡುಗೆ ನೀಡಲಾಗಿದೆ. ಶೂನ್ಯ ಬಡ್ಡಿದರದ ಬೆಳೆ ಸಾಲವನ್ನು 3 ಲಕ್ಷದಿಂದ 5 ಲಕ್ಷದ ತನಕ ಸಾಲ ಹೆಚ್ಚಳ ಮಾಡಲಾಗಿದೆ. ಮಧ್ಯಮಾವಧಿ ಮತ್ತು ದೀರ್ಘಾವಧಿ ಸಾಲವನ್ನು 10 ರಿಂದ 15 ಲಕ್ಷಕ್ಕೆ ಏರಿಕೆ ಮಾಡಲಾಗಿದೆ
ಇದಕ್ಕೆ ಶೇ.3 ರಷ್ಟು ವಾರ್ಷಿಕ ಬಡ್ಡಿ ವಿಧಿಸಿರುವುದು ಉತ್ತಮ ಬೆಳವಣಿಗೆಯಾಗಿದೆ.ಇದರ ಜೊತೆಗೆ ಎಪಿಎಂಸಿ ಕಾಯಿದೆ ವಾಪಾಸು ಪಡೆದಿರುವುದು ಒಳ್ಳೆಯದು ಎಂದು ಅವರು ಹೇಳಿದ್ದಾರೆ. ವೋದ್ಯಮಗಳನ್ನು ಪ್ರಾರಂಭಮಾಡಿರುವುದು ಸೂಕ್ತವಾದ ಕೆಲಸ.
ಇದರಿಂದ ರೈತರ ಉತ್ಪನ್ನಗಳ ಮೌಲ್ಯವರ್ಧನೆಗೆ ಅನುಕೂಲವಾಗಲಿದೆ. ನಂದಿನಿ ಬ್ರಾಂಡ್ ರೂಪದಲ್ಲಿ ರೈತರ ಉತ್ಪನ್ನಗಳಿಗೆ ಬ್ರಾಂಡ್ ನೀಡುತ್ತಿರುವುದು ಸಂತೋಷದ ವಿಚಾರ. ಈ ಮೂಲಕ ರಾಜ್ಯದ ಹಾಲು ಉತ್ಪಾದಕರನ್ನು ಪೊತ್ಸಾಹಿಸುತ್ತಿರುವುದು ಒಳ್ಳೆಯದು. ರೈತರಿಗೆ ಬೇಕಾದ ಶೀಥಲೀಕರಣ ಘಟಕಗಳನ್ನು ಆರಂಭಿಸಿ ರೈತರ ಬೆಳೆಗಳನ್ನು ಸಂಗ್ರಹಿಸಿ ಉತ್ತಮ ಬೆಲೆ ಬಂದಾಗ ಮಾರಾಟ ಮಾಡುವ ಮೂಲಕ ರೈತರ ಸಮಗ್ರ ಅಭಿವೃದ್ದಿಯ ಚಿಂತನೆಯ ಬಜೆಟ್ ಇದಾಗಿದೆ ಎಂದು ಷಣ್ಮುಖಪ್ಪ ಹೇಳಿದ್ದಾರೆ.