ದಾವಣಗೆರೆ ಜಿಲ್ಲೆಯ ಎಲ್ಲ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ನಿಶ್ಚಿತ: ಸಂಸದ ಜಿ.ಎಂ ಸಿದ್ದೇಶ್ವರ್

Suddivijaya
Suddivijaya May 5, 2023
Updated 2023/05/05 at 1:29 PM

ಸುದ್ದಿವಿಜಯ, ಜಗಳೂರು: ದಾವಣಗೆರೆ ಜಿಲ್ಲೆ 8 ಕ್ಷೇತ್ರಗಳಲ್ಲೂ ಬಿಜೆಪಿ ಗೆಲುವು ಪಡೆಯಲಿದೆ ಎಂದು ಸಂಸದ ಜಿ.ಎಂ ಸಿದ್ದೇಶ್ವರ್ ವಿಶ್ವಾಸ ವ್ಯಕ್ತಪಡಿಸಿದರು.
ತಾಲೂಕಿನ ದೇವಿಕೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಮೆದಕೆರೆನಹಳ್ಳಿ ಗ್ರಾಮದಲ್ಲಿ ಶುಕ್ರವಾರ ಬಿಜೆಪಿ ಅಭ್ಯರ್ಥಿ ಎಸ್.ವಿ ರಾಮಚಂದ್ರ ಪರ ಚುನಾವಣಾ ಪ್ರಚಾರ ನಡೆಸಿ ಮಾತನಾಡಿದರು.

ಜಗಳೂರು ಕ್ಷೇತ್ರದಲ್ಲಿ ಕಳೆದ ಐದು ವರ್ಷಗಳಲ್ಲಿ ಶಾಸಕ ಎಸ್.ವಿ ರಾಮಚಂದ್ರ ಅವರು ಮಾಡಿದ ಅಭಿವೃದ್ದಿ ಕೆಲಸಗಳೇ ಗೆಲುವಿಗೆ ಶ್ರೀ ರಕ್ಷೆಯಾಗಲಿದೆ. 57 ಕೆರೆಗಳಿಗೆ ನೀರು ತುಂಬಿಸುವ ಯೋಜನೆಯಡಿ ತುಪ್ಪದಹಳ್ಳಿ ಕೆರೆಗೆ ನೀರು ತುಂಬಿಸಲಾಗಿದೆ. ಉಳಿದ ಕೆರೆಗಳಿಗೆ ಕಾಮಗಾರಿ ಪ್ರಗತಿಯಲ್ಲಿದೆ. ಇನ್ನೊಮ್ಮೆ ಎಸ್‍ಆರ್ ಆಯ್ಕೆ ಮಾಡಿ ಸೇವೆ ಮಾಡಲು ಅವಕಾಶ ನೀಡಿ ಎಂದು ಮತದಾರರಿಗೆ ಮನವಿ ಮಾಡಿದರು.

ಕ್ಷೇತ್ರದಲ್ಲಿ ತ್ರಿಕೋನ ಸ್ಪರ್ಧೆ ಇದ್ದರೂ ಕೂಡ ಬಿಜೆಪಿಗೆ ಎಲ್ಲಾ ಕಡೆ ಉತ್ತಮ ಪ್ರತಿಕ್ರಿಯೆ ಸಿಗುತ್ತಿದ್ದು ಗೆಲ್ಲಲು ಯಾವುದೇ ಅಡ್ಡಿ ಇಲ್ಲ. ಪಕ್ಷೇತರ ಅಭ್ಯರ್ಥಿಯಿಂದ ನಮ್ಮ ಪಕ್ಷಕ್ಕೆ ಯಾವ ತೊಂದರೆ ಇಲ್ಲ. ಲಿಂಗಾಯಿತ ಸಮುದಾಯ ಬಿಜೆಪಿ ಬಿಟ್ಟು ಎಲ್ಲೂ ಹೋಗುವುದಿಲ್ಲ. ಪಕ್ಷೇತರ ಅಥವಾ ಕಾಂಗ್ರೆಸ್ ಅಭ್ಯರ್ಥಿಗಳಿಗೆ ಬೆಂಬಲ ಸೂಚಿಸಿಲ್ಲ ಎಲ್ಲಾ ವದಂತಿಗಳು ಕಾರ್ಯಕರ್ತರು ಕಿವಿಗೊಡಬಾರದು ಎಂದರು.

ಈ ಸಂದರ್ಭದಲ್ಲಿ ಶಾಸಕ ಎಸ್.ವಿ ರಾಮಚಂದ್ರ, ಬಿಜೆಪಿ ತಾಲೂಕಾಧ್ಯಕ್ಷ ಎಚ್.ಸಿ ಮಹೇಶ್, ಎಸ್ಟಿ ಘಟಕದ ಅಧ್ಯಕ್ಷ ರವಿಕುಮಾರ್, ಮಾಜಿ ಗ್ರಾ.ಪಂ ಅಧ್ಯಕ್ಷ ಶಿವಾನಂದಪ್ಪ, ಗ್ರಾ.ಪಂ ಸದಸ್ಯೆ ಪದ್ಮಾ ಸೇರಿದಂತೆ ಮತ್ತಿತರಿದ್ದರು.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!