ಸುದ್ದಿವಿಜಯ,ದಾವಣಗೆರೆ: ಸಾರ್ವತ್ರಿಕ ಚುನಾವಣೆ ಹಿನ್ನೆಲೆ ಅಬಕಾರಿ ಅಧಿಕಾರಿಗಳು ಭರ್ಜರಿ ಭೇಟೆ ಆಡಿದ್ದಾರೆ. ಸೋಮವಾರ ಮಧ್ಯಾಹ್ನ ಹರಿಹರ ತಾಲೂಕಿನ ಆದಾಪುರ ಗ್ರಾಮದ ಹನುಮಕ್ಕ ಇವರಿಗೆ ಸೇರಿದ ವಾಸದ ಮನೆಯ ಮೇಲೆ ದಾಳಿ ಅಕ್ರಮ ಮದ್ಯ ಸಂಗ್ರಹಿಸಿಟ್ಟಿದ್ದ ಬಾಟಲ್‍ಗಳನ್ನು ವಶಪಡಿಸಿಕೊಂಡಿದ್ದಾರೆ.
ದಾವಣಗೆರೆ ಉಪವಿಭಾಗದ ವ್ಯಾಪ್ತಿಯಲ್ಲಿನ ಅಬಕಾರಿ ಇಲಾಖೆಯ ವಲಯ/ಉಪ ವಿಭಾಗ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಅಕ್ರಮ ಚಟುವಟಿಕೆಗಳನ್ನು ತಡೆಯಲು ಸೂಚನೆ ನೀಡಿದ ಹಿನ್ನೆಲೆ ಕಾರ್ಯ ಪ್ರವೃತ್ತರಾದ ಅಧಿಕಾರಿಗಳು ಅಬಕಾರಿ ಉಪ ಆಯುಕ್ತರಾದ ರವಿ ಎಂ ಮರಿಗೌಡ್ರ ಮಾರ್ಗದರ್ಶನದಲ್ಲಿ ಅಬಕಾರಿ ನಿರೀಕ್ಷಕರಾದ ಎಚ್.ಸವಿತಾ, ಸಿ.ಆರ್.ರಂಗಸ್ವಾಮಿ ಹಾಗೂ ಸಿಬ್ಬಂದಿಗಳು ಅಕ್ರಮ ಮದ್ಯ ಸಾಗಾಣೆ ಮಾಡುವ ವ್ಯಕ್ತಿಗಳ ಮೇಲೆ ಹದ್ದಿನ ಕಣ್ಣಿಟ್ಟು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಮನೆಯಲ್ಲಿ ಪರವಾನಿಗೆ ಇಲ್ಲದ ಅಕ್ರಮ ಮದ್ಯ ಪತ್ತೆಯಾಗಿದೆ. ಆ ಮದ್ಯವನ್ನು ಅವರು ಹೆಚ್ಚಿನ ಬೆಲೆಗೆ ಮಾರಾಟ ಮಾಡುತ್ತಿದ್ದರು ಎನ್ನಲಾಗಿದೆ. 145.440 ಲೀ ಅಕ್ರಮ ಮದ್ಯದ ಬಾಟಲ್, 22.100 ಲೀ ಬಿಯರ್ ದಾಸ್ತಾನನ್ನು ಜಪ್ತಿ ಮಾಡಿದ್ದಾರೆ. ಇದರ ಅಂದಾಜು ಮೌಲ್ಯ 61 ಸಾವಿರ ರೂ ಎಂದು ತಿಳಿದು ಬಂದಿದೆ. ದಾಳಿ ವೇಳೆ ಆರೋಪಿ ಪರಾರಿಯಾಗಿದ್ದು ಅಬಕಾರಿ ಇಲಾಖೆ ಅಧಿಕಾರಿಗಳು ಬಂಧಿಸಲು ಬಲೆ ಬೀಸಿದ್ದಾರೆ.