ಸುದ್ದಿವಿಜಯ,ಹಗರಿಬೊಮ್ಮನಹಳ್ಳಿ: ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ಕಣಿವೆ ನಾಯಕನಹಳ್ಳಿ ಗ್ರಾಮದಲ್ಲಿ ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕ್ ಮತ್ತು ಎನ್ಐಐಟಿ(NIIT)ಫೌಂಡೇಶನ್ ವತಿಯಿಂದ ಆರ್ಥಿಕ ಮತ್ತು ಡಿಜಿಟಲ್ ಸಾಕ್ಷರತೆ ಬಗ್ಗೆ ಅರಿವು ಮೂಡಿಸುವ ಕಾರ್ಯಗಾರ ಹಮ್ಮಿಕೊಳ್ಳಲಾಗಿತ್ತು.
ಎನ್ಐಐಟಿ ಫೌಂಡೇಶನ್ ಸಂಪನ್ಮೂಲ ವ್ಯಕ್ತಿಗಳಾದ ಸುನಿಲ್ ಕುಮಾರ್ ಅವರು ಗ್ರಾಮೀಣ ಭಾಗದ ಜನರ ಆರ್ಥಿಕ ದಿನಚರಿಯನ್ನು ಬರೆಯುವುದನ್ನು ರೂಢಿಸಿಕೊಂಡರೆ ಯಾವುದೇ ಹಣಕಾಸು ತೊಂದರೆ ಆಗದ ರೀತಿಯಲ್ಲಿ ತಮ್ಮ ಜೀವನ ಸಾಗಿಸಬಹುದು ಆದ್ದರಿಂದ ಜನರಿಗೆ ತಮ್ಮ ಆದಾಯ, ಖರ್ಚು ವೆಚ್ಚಗಳ ಕುರಿತು ಸರಿಯಾದ ದಾಖಲೆಗಳನ್ನು ನಿರ್ವಹಣೆ ಮಾಡಬೇಕು ಎಂದು ಜನರಿಗೆ ತಿಳುವಳಿಕೆ ನೀಡಿದರು.
ಅಲ್ಲದೆ ರಾಷ್ಟ್ರೀಕೃತ ಬ್ಯಾಂಕುಗಳಲ್ಲಿ ಭಾರತ ಸರ್ಕಾರದಿಂದ ಸಿಗುವ ವಿವಿಧ ಯೋಜನೆಗಳು, ಹಣಕಾಸು ವ್ಯವಹಾರಗಳ ವಿವಿಧ ಯೋಜನೆಗಳು, ವಿವಿಧ ಇಲಾಖೆಗಳಿಂದ ಸಿಗುವ ಸಬ್ಸಿಡಿ ಹಾಗೂ ಇನ್ನಿತರ ಯೋಜನೆಗಳು ಗ್ರಾಮೀಣ ಜನರಿಗೆ ಹೆಚ್ಚಿನ ಮಟ್ಟದಲ್ಲಿ ಅರಿವು ಮೂಡಿಸುವ ಕಾರ್ಯಕ್ರಮಗಳು ಹಮ್ಮಿಕೊಳ್ಳಬೇಕಾಗಿದೆ.
ಜನರಿಗೆ ವಿಮಾ ಯೋಜನೆಗಳ ಬಗ್ಗೆ ,ಸುಕನ್ಯಾ ಸಮೃದ್ಧಿ ಯೋಜನೆ, ಮುದ್ರಾ ಯೋಜನೆ ಹಾಗೂ ಅಂಚೆ ಕಚೇರಿಯ ವಿವಿಧ ಸೌಲಭ್ಯಗಳನ್ನು ಗ್ರಾಮೀಣ ಜನರಿಗೆ ಸರಳವಾಗಿ ಸಿಗುವಂತಾಗಬೇಕು ಹಾಗೂ ಪ್ರತಿಯೊಂದು ಕುಟುಂಬ ಉಪಯೋಗಿಸಿಕೊಳ್ಳಬೇಕು ಎಂದು ಮಾಹಿತಿ ನೀಡಿದರು.
ಇತ್ತೀಚಿನ ದಿನಗಳಲ್ಲಿ ಗ್ರಾಮೀಣ ಜನರು ಸಹ ಡಿಜಿಟಲ್ ಹಾಗೂ ಡಿಜಿಟಲ್ ವ್ಯವಹಾರ ಬಗ್ಗೆ ಆಸಕ್ತಿ ತೋರುತ್ತಿರುವುದು ದೇಶದ ಆರ್ಥಿಕತೆಯ ಬೆಳವಣಿಗೆಗೆ ಹೊಂದಿಕೊಳ್ಳುತ್ತಿರುವುದು ಆಶಾದಾಯಕವಾಗಿದೆ ಎಂದು ಕಾರ್ಯಕ್ರಮದಲ್ಲಿ ಮಾಹಿತಿಯನ್ನು ನೀಡಿದರು.
ಈವೇಳೆ ಕಾರ್ಯಕ್ರಮದಲ್ಲಿ ಪಿನ್ ಕೇರ್ ಸ್ಮಾಲ್ ಫೈನಾನ್ಸ್ ಬ್ಯಾಂಕಿನ ಸಿಬ್ಬಂದಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.