ಸುದ್ದಿವಿಜಯ, ಜಗಳೂರು: ತಾಲೂಕಿನ ಚಿಕ್ಕಉಜ್ಜಿನಿ ಗ್ರಾಮದಲ್ಲಿ ನಾಳೆ ಬೆಳಿಗ್ಗೆ 11 ಗಂಟೆಗೆ ವಿದ್ಯುತ್ ಅದಾಲತ್ ಮತ್ತು ಮೂರು ಗಂಟೆಗೆ ಗ್ರಾಹಕರ ಜೊತೆ ಸಂವಾದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಬೆಸ್ಕಾಂ ಎಇಇ ಗಿರೀಶ್ ನಾಯ್ಕ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್ ಸಮಸ್ಯೆಗಳ ಬಗ್ಗೆ ಅರಿತುಕೊಳ್ಳಲು ಸ್ಥಳದಲ್ಲಿ ಪರಿಹಾರ ನೀಡಲ ಆಂದೋಲನ ನಡೆಯಲಿದೆ. ಬೆಸ್ಕಾಂ ಸೊಕ್ಕೆ ಶಾಖೆಯ ಚಿಕ್ಕ ಉಜ್ಜಿನಿ ಗ್ರಾಮದಲ್ಲಿ ನಡೆಯಲಿರುವ ವಿದ್ಯುತ್ ಅದಾಲತ್ ನಲ್ಲಿ ರೈತರು ಆಗಮಿಸಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಸಮಸ್ಯೆಗೆ ತಕ್ಷಣವೇ ಪರಿಹಾರ ಕಂಡುಕೊಳ್ಳುವ ಪ್ರಯತ್ನ ನಡೆಯಲಿದೆ ಎಂದು ಹೇಳಿದ್ದಾರೆ. ಮಧ್ಯಾಹ್ನ 3 ಗಂಟೆಗೆ ಗ್ರಾಹಕರ ಜೊತೆ ಸಂವಾದವನ್ನು ಜಗಳೂರು ಉಪವಿಭಾಗ ಕಚೇರಿಯಲ್ಲಿ ಹಮ್ಮಿಕೊಳ್ಳಲಾಗಿದೆ. ಗ್ರಾಹಕರು ತಮ್ಮ ವಿದ್ಯುತ್ ಸಂಬಂಧಿಸಿದ ಕುಂದು ಕೊರತೆಗಳನ್ನು ಪರಿಹರಿಸಿಕೊಳ್ಳಬಹುದು ಎಂದು ಅವರು ಕೋರಿದ್ದಾರೆ.