ಸುದ್ದಿವಿಜಯ,ಜಗಳೂರು: ತಾಲೂಕಿನ ತೋರಣಗಟ್ಟೆ ಗ್ರಾಮದಲ್ಲಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿಕಡೆ ಕಾರ್ಯಕ್ರಮವನ್ನು ಶುಕ್ರವಾರ ಹಮ್ಮಿಕೊಳ್ಳಲಾಗಿದೆ ಎಂದು ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ತಿಳಿಸಿದ್ದಾರೆ.
ತೋರಣಗಟ್ಟೆ ಗ್ರಾಮದಲ್ಲಿ ಬೆಳಿಗ್ಗೆ 9.30ಕ್ಕೆ ಕಾರ್ಯಕ್ರಮ ಆರಂಭವಾಗಲಿದೆ. ಜಿಲ್ಲಾಧಿಕಾರಿ ಶಿವಾನಂದ ಕಪಶಿ ಅವರ ಮಾರ್ಗದರ್ಶನದಲ್ಲಿ ತಹಶಿಲ್ದಾರ್ ಜಿ.ಸಂತೋಷ್ ಕುಮಾರ್ ಅವರು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ತಹಶಿಲ್ದಾರ್ ಅವರನ್ನು ಜಾನಪದ ಕಲಾವಿದರು ಅದ್ಧೂರಿಯಾಗಿ ಸ್ವಾಗತಿಸಲಿದ್ದಾರೆ.
ಶಾಸಕ ಎಸ್.ವಿ.ರಾಮಚಂದ್ರ ಸೇರಿದಂತೆ ಎಲ್ಲ ಇಲಾಖೆಗಳ ಮುಖ್ಯಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರ ಕುಂದುಕೊರತೆಗಳ ಅರ್ಜಿಗಳನ್ನು ಸಲ್ಲಿಸಲು ಅವಕಾಶಗಳಿದ್ದು ನಾಗರೀಕರು ಕಾರ್ಯಕ್ರಮದಲ್ಲಿ ಭಾಗವಹಿಸಲು ತಹಶಿಲ್ದಾರ್ ಜಿ.ಸಂತೋಷ್ ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.