ಸುದ್ದಿವಿಜಯ, ಜಗಳೂರು: ನಕಲಿ ಮತದಾನ ಗುರುತಿನ ಚೀಟಿ ನೀಡುವ ವ್ಯಕ್ತಿಗಳ ಬಗ್ಗೆ ಜಾಗೃತವಾಗಿರಿ ಮತ್ತು ಅಂತಹ ವ್ಯಕ್ತಿಗಳು ಕಂಡು ಬಂದರೆ ತಕ್ಷಣವೇ ಮಾಹಿತಿ ನೀಡಿ ಎಂದು ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ಪ್ರಕಟಣೆ ಮೂಲಕ ತಿಳಿಸಿದ್ದಾರೆ.
ಭಾರತದ ಚುನಾವಣಾ ಆಯೋಗದ ಪತ್ರದ ಆದೇಶದಂತೆ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಆದೇಶದಂತೆ ದಾವಣಗೆರೆ ವ್ಯಾಪ್ತಿಯಲ್ಲಿ ಯಾವುದೇ ವ್ಯಕ್ತಿ ಅಥವಾ ಸಂಘ ಸಂಸ್ಥೆಗಳು, ಮತದಾರರಿಗೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯನ್ನು, ತಂತ್ರಜ್ಞಾನ ಆಧಾರಿತ ಸಲಕರಣೆಗಳ ಮೂಲಕ ಮಾಹಿತಿ ಸಂಗ್ರಹಣೆ ಮಾಡುವುದು ಮತ್ತು ಮನೆ ಮನೆ ಸಮೀಕ್ಷೆ ಮಾಡುವುದು ಗುರುತಿನ ಚೀಟಿ ದುರ್ಬಗಳಕೆ ಮಾಡಿಕೊಳ್ಳುವುದು ಸಂಪೂರ್ಣವಾಗಿ ನಿಷೇಧಿಸಲಾಗಿದೆ.
ಗುರುತಿನ ಚೀಟಿಗಳನ್ನು ಮುದ್ರಿಸಲು ರಾಜ್ಯ ಚುನಾವಣಾ ಆಯೋಗ ಯಾವುದೇ ವ್ಯಕ್ತಿ, ಸಂಘ-ಸಂಸ್ಥೆ ಏಜೆನ್ಸಿಗಳನ್ನು ನೇಮಕ ಮಾಡಿಲ್ಲ. ಗುರುತಿನ ಚೀಟಿಗಳು ನೇರವಾಗಿ ಮತದಾರರ ಮನೆ ಬಾಗಿಲಿಗೆ ಅಂಚೆ ಇಲಾಖೆ ಮೂಲಕ ವಿತರಣೆಯಾಗುತ್ತವೆ.
ಹೀಗಾಗಿ ಮತದಾರರು ಅನಧಿಕೃತ ವ್ಯಕ್ತಿ, ಸಂಸ್ಥೆಗಳಿಗೆ ಹಣ ಪಾವತಿಸಿ ಮತದಾರರ ಗುರುತಿನ ಚೀಟಿ ಪಡೆಯಬಾರದು. ನಕಲಿ ಗುರುತಿನ ಚೀಟಿ ಸೃಷ್ಟಿಸುವ ವ್ಯಕ್ತಿಗಳು ಕಂಡು ಬಂದರೆ ತಜ್ಷಣವೇ ಟೋಲ್ ಫ್ರೀ ನಂ 1950ಕ್ಕೆ ಇಲ್ಲವೇ 08196-227242 ಇಲ್ಲಿಗೆ ಕರೆ ಮಾಡಿ ಮಾಹಿತಿ ನೀಡಿ ಎಂದು ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.