ಸುದ್ದಿವಿಜಯ, ಜಗಳೂರು: ತಾಲೂಕಿನಲ್ಲಿ ರಾಗಿ ಖರೀದಿ ಕೇಂದ್ರದಲ್ಲಿ ರೈತರಿಗೆ ದೊಡ್ಡ ಸಮಸ್ಯೆಯುಂಟಾಗಿದೆ. ಮಧ್ಯವರ್ತಿಗಳ ಹಾವಳಿಯಿಂದ ನಿಜವಾಗಿ ರಾಗಿ ಬೆಳೆದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ತಕ್ಷಣವೇ ಸಮಸ್ಯೆ ಬಗೆ ಹರಿಸಿ ಎಂದು ಮಾಜಿ ಶಾಸಕ ಎಚ್.ಪಿ.ರಾಜೇಶ್ ಹೇಳಿದರು.
ಬಿದರಕೆರೆ ಎಫ್‍ಪಿಒ ಗೋದಾಮು, ಕಚೇರಿ ಉದ್ಘಾಟಿಸಿ ಮಾತನಾಡಿದ ಅವರು, ಬೇರೊಂದು ಕಡೆ ರಾಗಿ ಖರೀದಿ ಸರ್ಕಾರದ ಬೆಲೆಗೆ ಮಾರಾಟ ಮಾಡುವ ಮದ್ಯವರ್ತಿಗಳ ದೊಡ್ಡ ಗುಂಪು ಇದೆ. ಆದ್ದರಿಂದ ಇದಕ್ಕೆ ಸಂಬಂಧಿಸಿ ಅಧಿಕಾರಿಗಳು ಕಡಿವಾಣ ಹಾಕಬೇಕು.
ಅನ್ಯಾಯಕ್ಕೊಳಗಾದ ರೈತರಿಗೆ ನ್ಯಾಯ ಕಲ್ಪಿಸಬೇಕು ಎಂದು ಮಾಜಿ ಶಾಸಕ ಎಚ್.ಪಿ ರಾಜೇಶ್, ಶಾಸಕರಾದ ದೇವೇಂದ್ರಪ್ಪ ಮತ್ತು ಅಧಿಕಾರಿಗಳಿಗೆ ಆಗ್ರಹಿಸಿದರು.