ಸುದ್ದಿವಿಜಯ,ಜಗಳೂರು: ತಾಲೂಕಿನ ಚಿಕ್ಕಬಂಟನಹಳ್ಳಿ ಗ್ರಾಮದ ಜಮೀನೊಂದರಲ್ಲಿ ಅಕ್ರಮವಾಗಿ ಬೆಳೆಯಲಾಗಿದ್ದ 25 ಸಾವಿರ ಮೌಲ್ಯದ ಗಾಂಜಾ ಗಿಡಗಳನ್ನು ಜಗಳೂರು ಠಾಣಾ ಸಭ್ಇನ್ಸ್ಪೆಕ್ಟರ್ ಎಸ್.ಡಿ.ಸಾಗರ್ ನೇತೃತ್ವದ ಪೊಲೀಸರು ಜಪ್ತಿ ಮಾಡಿ ಆರೋಪಿ ಮಲ್ಲಪ್ಪ (62) ಅವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಬೆಳೆಯಲಾಗಿದ್ದ ಗಾಂಜಾ ಗಿಡಗಳ ಬಗ್ಗೆ ಬಾತ್ಮೀದಾರರು ನೀಡಿದ ಸುಳಿವು ಆಧಾರದ ಮೇಲೆ ದಾಳಿ ಮಾಡಿದ ಪೊಲೀಸರು ಮಲೇಮಾಚಿಕೆರೆ ಗ್ರಾಮಕ್ಕೆ ಹೋಗುವ ರಸ್ತೆಯ ಬದಿಯಲ್ಲಿರುವ ಮಲ್ಲಪ್ಪ ಅವರ ಜಮೀನಿನಲ್ಲಿ ಬೆಳೆಯಲಾಗಿದ್ದ ಅಂದಾಜು 3 ಕೆಜಿ ಗಾಂಜಾ ಸೊಪ್ಪನ್ನು ವಶಪಡಿಸಿಕೊಂಡು ಆರೋಪಿಯನ್ನು ಬಂಧಿಸಿ ಸುಮೋಟೋ ಕೇಸ್ ದಾಖಲಿಸಿಕೊಂಡು ಎನ್ಡಿಪಿಎಸ್ ಕಾಯ್ದೆ 1985 ಅಡಿ ಜೈಲಿಗೆ ಕಳುಹಿಸಿದ್ದಾರೆ.