ಜಗಳೂರು: ಬಿಜೆಪಿ ಅಭಿವೃದ್ಧಿ ನೋಡಿ ಕಾಂಗ್ರೆಸ್‍ನವರಿಗೆ ಹೊಟ್ಟೆ ಉರಿ!

Suddivijaya
Suddivijaya November 22, 2022
Updated 2022/11/22 at 11:51 AM

ಸುದ್ದಿವಿಜಯ, ಜಗಳೂರು: ಬಿಜೆಪಿ ಸರಕಾರದ ಅಭಿವೃದ್ಧಿ ಕಾರ್ಯಗಳನ್ನು ಸಹಿಸದೇ ಕಾಂಗ್ರೆಸ್ ಮುಖಂಡರಿಗೆ ಹೊಟ್ಟೆ ಉರಿ ಆರಂಭವಾಗಿದೆ. ಹೀಗಾಗಿ ನಮ್ಮ ಶಾಸಕರ ಮೇಲೆ 40 ಪರ್ಸೆಂಟ್ ಕಮೀಷನ್ ಆರೋಪ ಮಾಡ್ತಿದ್ದಾರೆ. ನಮ್ಮ ಶಾಸಕರು ನಾಲ್ಕು ಪರ್ಸೆಂಟ್ ಕಮೀಷನ್ ಸಹ ಪಡೆದಿದಲ್ಲ ಎಂದು ಸಂಸದ ಜಿ.ಎಂ.ಸಿದ್ದೇಶ್ವರ್ ಮಾಜಿ ಶಾಸಕ ಎಚ್.ಪಿ.ರಾಜೇಶ್ ಹಾಗೂ ಕಾಂಗ್ರೆಸ್ ಮುಖಂಡರಿಗೆ ತಿರುಗೇಟು ನೀಡಿದರು.

ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬಿಜೆಪಿ ಜನ ಸಂಕಲ್ಪ ಯಾತ್ರೆಗೆ ಜಗಳೂರಿಗೆ ಆಗಮಿಸುತ್ತಿರುವ ಹಿನ್ನೆಲೆ ವೇದಿಕೆ ಸಿದ್ದತೆ ವ್ಯವಸ್ಥೆಯನ್ನು ವೀಕ್ಷಿಸಲು ಮಂಗಳವಾರ ಪಟ್ಟಣದ ಬಯಲು ರಂಗಮಂದಿರಕ್ಕೆ ಭೇಟಿ ನೀಡಿದ ನಂತರ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್ ನಾಯಕರನ್ನು ತರಾಟೆಗೆ ತೆಗದುಕೊಂಡರು.

ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಇಂದು ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಸಿದ್ಧತೆಯನ್ನು ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ವಿ.ರಾಮಚಂದ್ರ ವೀಕ್ಷಿಸಿದರು.

ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಭಿವೃದ್ಧಿ ಕಾರ್ಯಗಳನ್ನು ಸಹಿಸಲು ಕಾಂಗ್ರೆಸ್ ನಾಯಕರಿಗೆ ಆಗುತ್ತಿಲ್ಲ. ಮುಖ್ಯಮಂತ್ರಿಗಳಾಗಿದ್ದಾಗ ಬಿ.ಎಸ್.ಯಡಿಯೂರಪ್ಪನವರು 57 ಕೆರೆ ತುಂಬಿಸುವ ಯೋಜನೆಗೆ 665 ಕೋಟಿ ಹಣ ನೀಡಿದರು.

ಸಿಎಂ ಬಸವರಾಜ್ ಬೊಮ್ಮಾಯಿ ಅವರು ಭದ್ರಾಮೇಲ್ದಂಡೆ ಯೋಜನೆ ನೀಡಿ ಬರಮುಕ್ತ ಜಗಳೂರು ಮಾಡಲು ಪಣ ತೊಟ್ಟಿದ್ದಾರೆ. ಅವರು ಕೊಟ್ಟ ಕಾರ್ಯಗಳನ್ನು ಮರೆಯಲು ಸಾಧ್ಯವಿಲ್ಲ ಎಂದರು.

ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಇಂದು ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಸಿದ್ಧತೆಯನ್ನು ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ವಿ.ರಾಮಚಂದ್ರ ವೀಕ್ಷಿಸಿದರು.
ಜಗಳೂರು ಪಟ್ಟಣದ ಬಯಲು ರಂಗಮಂದಿರದಲ್ಲಿ ಇಂದು ನಡೆಯಲಿರುವ ಬಿಜೆಪಿ ಜನ ಸಂಕಲ್ಪ ಯಾತ್ರೆಯ ಸಿದ್ಧತೆಯನ್ನು ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕ ಎಸ್.ವಿ.ರಾಮಚಂದ್ರ ವೀಕ್ಷಿಸಿದರು.

ಎಸ್ಟಿ ಸಮುದಾಯಕ್ಕೆ ಶೇ.7 ರಷ್ಟು ಮೀಸಲಾತಿ, ಎಸ್‍ಸಿ ಸಮುದಾಯಕ್ಕೆ ಶೇ.17ರಷ್ಟು ಮೀಸಲಾತಿ ನೀಡಲಾಗಿದೆ. ನಮ್ಮ ಸರಕಾರದ ವಿದ್ಯಾಸಿರಿ ಯೋಜನೆ ರೈತರ ಮಕ್ಕಳಿಗೆ ನೆರವಾಗಿದೆ. ಬಾಬು ಜಗಜೀವನ್ ರಾಂ ಯೋಜನೆ ಅಡಿ ಸ್ವಯಂ ಉದ್ಯೋಗ ನೀಡುವ ಯೋಜನೆ ಜಾರಿಗೆ ತರಲಾಗಿದೆ.

ರಾಜ್ಯದಲ್ಲಿ 8 ಸಾವಿರ ನೂತನ ಶಾಲಾ ಕೊಠಿಗಳು, 4 ಸಾವಿರ ಅಂಗನವಾಡಿ ಕೇಂದ್ರಗಳನ್ನು ಸ್ಥಾಪನೆ ಮಾಡಿದ್ದೇವೆ. ಅಮೃತ ಯೋಜನೆ ಅಡಿ 750 ಗ್ರಾಪಂಗಳಿಗೆ ತಲಾ 25 ಲಕ್ಷ ರೂನೀಡುವ ಮೂಲಕ ನೀರು, ರಸ್ತೆ ಸೇರಿ ಮೂಲ ಸೌಕರ್ಯ ವೃದ್ಧಿಗೆ ಹೆಚ್ಚು ಒತ್ತು ನೀಡಿದ್ದೇವೆ. ಆದರೆ ಕಾಂಗ್ರೆಸ್ ನಾಯಕರು ಮಾಡಿರುವ ಕಾರ್ಯವಾದರೂ ಏನು? ಎಂದು ಪ್ರಶ್ನಿಸಿದರು.

ಎಸ್.ವಿ.ರಾಮಚಂದ್ರ ಶಾಸಕರಾದ ಮೇಲೆ ತಾಲೂಕು ಸಾಕಷ್ಟು ಅಭಿವೃದ್ಧಿಯಾಗಿದೆ. ತಾಲೂಕಿಗೆ ಅಭಿವೃದ್ಧಿ ಕಾರ್ಯಗಳ ಮೂಲಕ ರೂಪ ಕೊಟ್ಟವರೇ ಅವರು. ನೂತನ ಬಸ್‍ನಿಲ್ದಾಣ, ರಸ್ತೆ ಅಗಲೀಕರಣ ಮತ್ತು ವಿದ್ಯುದ್ಧೀಕರಣವಾಗಿದೆ. ಅವರು ಶಾಸಕರಾದ ಮೇಲೆ 3000 ಕೋಟಿ ಅನುದಾನ ತಂದು ಕ್ಷೇತ್ರದ ಅಭಿವೃದ್ಧಿ ಮಾಡಿದ್ದಾರೆ

ಹೀಗಾಗಿ ರೈತರು, ಕಾರ್ಮಿಕರು, ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಶಾಸಕ ಎಸ್.ವಿ.ರಾಮಚಂದ್ರ ಮಾತನಾಡಿ, ತಾಲೂಕು ಅಭಿವೃದ್ಧಿಗೆ ನಾನು ಕೊಟ್ಟ ಕೊಡುಗೆಯನ್ನು ಜನರು ಎಂದೂ ಮರೆತಿಲ್ಲ. ವಿಪಕ್ಷಗಳು ಸೈದ್ಧಾಂತಿಕವಾಗಿ ಟೀಕೆ ಮಾಡುವುದು ಸಾಮಾನ್ಯ. ವಾಸ್ತವಾಗಿ ಜನರೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ಹೇಳುತ್ತಿರುವಾಗ ವಿಪಕ್ಷಗಳ ಆರೋಪದ ಬಗ್ಗೆ ತಲೆ ಕೆಡಿಸಿಕೊಳ್ಳುವುದಿಲ್ಲ ಎಂದರು.

 
ಸಂಕಲ್ಪ ಯಾತ್ರೆಗೆ ಆಗಮಿಸುವ ಗಣ್ಯರು
ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ, ಸಚಿವರಾದ ಗೋವಿಂದ ಕಾರಜೋಳ, ಶ್ರೀರಾಮುಲು, ಭೈರತಿ ಬಸವರಾಜ್, ಸಂಸದ ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ಅನೇಕ ಸಚಿವರು, ಶಾಸಕರು ಭಾಗವಹಿಸಲಿದ್ದಾರೆ. 11 ಗಂಟೆಗೆ ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ತಾತ್ಕಾಲಿಕ ಹೆಲಿಪ್ಯಾಡ್ ನಿರ್ಮಾಣಕ್ಕೆ ವ್ಯವಸ್ಥೆ ಮಾಡಲಾಗಿದೆ. ಭದ್ರತೆಗಾಗಿ ನೂರಾರು ಪೊಲೀಸರನ್ನು ನಿಯೋಜನೆ ಮಾಡಲಾಗಿದೆ. ಹೆಲಿಪ್ಯಾಡ್‍ನಿಂದ ಪಟ್ಟಣದ ಬಯಲು ರಂಗಮಂದಿರದ ಬೃಹತ್ ವೇದಿಕೆಯಲ್ಲಿ ಬಿಜೆಪಿ ಜನ ಸಂಕಲ್ಪ ಯಾತ್ರ ನಡೆಯಲಿದೆ. ನಂತರ ಸಿಎಂ ಹರಿಹರಕ್ಕೆ ತೆರಳಿಲಿದ್ದಾರೆ. ಸಂಜೆ ಖ್ಯಾತ ಗಾಯಕರಿಂದ ರಸಮಂಜರಿ ಕಾರ್ಯಕ್ರಮ ನಡೆಯಲಿದೆ ಎಂದು ಶಾಸಕ ಎಸ್.ವಿ.ರಾಮಚಂದ್ರ ತಿಳಿಸಿದರು.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!