ಸುದ್ದಿವಿಜಯ: ಜಗಳೂರು: ತಾಲೂಕಿನ ಅರಿಶಿಣಗುಂಡಿ ಗ್ರಾಮದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಇಸ್ಪೀಟ್ ಆಟವಾಡುತ್ತಿದ್ದ ಗುಂಪಿನ ಮೇಲೆ ಪೊಲೀಸರು ಬುಧವಾರ ಸಂಜೆ ದಾಳಿ ಮಾಡಿದ್ದಾರೆ.
ಜಗಳೂರು ಪಟ್ಟಣದ ಪಿಎಸ್ಐ ಮಹೇಶ್ ಹೊಸಪೇಟ ನೇತೃತ್ವದಲ್ಲಿ ಪೊಲೀಸರು ಸಿಬ್ಬಂದಿ ದಾಳಿ ಮಾಡಿ ಇಸ್ಪೀಟ್ ಆಡುತ್ತಿದ್ದ ವ್ಯಕ್ತಿಗಳನ್ನು ಬಂಧಿಸಿದ್ದಾರೆ.
ಅಂಗನವಾಡಿ ಕೇಂದ್ರದಲ್ಲಿ ನಿತ್ಯ ಜೂಜಾಡುತ್ತಿದ್ದ ವ್ಯಕ್ತಿಗಳಿಗೆ ಚಳಿಬಿಡಿಸಿದ್ದಾರೆ. ಖಚಿತ ಮಾಹಿತಿ ಮೇರೆ ದಾಳಿ ಮಾಡಿದಾಗ 8900 ರೂ ವಶಪಡಿಸಿಕೊಂಡಿದ್ದಾರೆ. ಈ ವೇಳೆ ನಾಲ್ವರ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದಾರೆ. ದಾಳಿಯ ವೇಳೆ ಪೊಲೀಸ್ ಸಿಬ್ಬಂದಿಗಳಾದ ಆನಂದಪ್ಪ, ರಾಜಪ್ಪ, ಮಹಾಂತೇಶ ಮತ್ತು ನಾಗರಾಜ್ ಉಪಸ್ಥಿತರಿದ್ದರು.