ಸುದ್ದಿವಿಜಯ, ಜಗಳೂರು: ಭಾನುವಾರ ಸಂಜೆಯಿಂದ ಸುರಿದ ಭಾರಿ ಮಳೆಯಿಂದ ಉಂಟಾಗಿರುವ ಪ್ರಕೃತಿ ವಿಕೋಪ ನಿರ್ವಹಣೆಗೆ ತಹಶಿಲ್ದಾರ್ ಜಿ.ಸಂತೋಷ್ ಕುಮಾರ್ ಅವರಿಗೆ ಸೂಚನೆ ನೀಡಲಾಗಿದೆ ಎಂದು ಶಾಸಕರಾದ ಬಿ.ದೇವೇಂದ್ರಪ್ಪ ಸುದ್ದಿವಿಜಯ ವೆಬ್ ನ್ಯೂಸ್ ಗೆ ತಿಳಿಸಿದರು.
ದೂರವಾಣಿಯಲ್ಲಿ ಮಾಹಿತಿ ನೀಡಿದ ಅವರು, ಮಠದದ್ಯಾಮೇನಹಳ್ಳಿ, ಸೊಕ್ಕೆ, ಗುರುಸಿದ್ದಾಪುರ, ಮಲೆ ಮಾಚಿಕೆರೆ ಗ್ರಾಮಗಳಲ್ಲಿ ಮಳೆಯಿಂದ ಬಾಳೆ, ಅಡಕೆ, ಪಪ್ಪಾಯ ಗಿಡಗಳು ನೆಲಕ್ಕುರುಳಿರುವ ಬಗ್ಗೆ ಮಾಧ್ಯಮಗಳಿಂದ ತಿಳಿಯಿತು.
ತಕ್ಷಣವೇ ತಹಶಿಲ್ದಾರ್ ಜಿ.ಸಂತೋಷ್ ಕುಮಾರ್ ಅವರಿಗೆ ದೂರವಾಣಿಯಲ್ಲಿ ಮಾತನಾಡಿ ವರದಿ ನೀಡುವಂತೆ ಮಾಹಿತಿ ನೀಡಿದ್ದೇನೆ.
ತೋಟಗಾರಿಕೆ ಸಹಾಯಕ ನಿರ್ದೇಶಕರಾದ ವೆಂಕಟೇಶ್ ಮೂರ್ತಿ, ಬೆಸ್ಕಾಂ ಎಇಇ ರಾಮಚಂದ್ರಪ್ಪ ಅವರಿಗೂ ಮಾತನಾಡಿ ಯಾವುದೇ ಸಮಸ್ಯೆಯಾಗದಂತೆ ನೋಡಿಕೊಳ್ಳಿ ಎಂದು ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.