ಜಗಳೂರು: ಸಿದ್ದಗಂಗಾ ಮಠದ ಶ್ರೀ.ಶಿವಕುಮಾರ ಸ್ವಾಮೀಜಿಗಳ ಆದರ್ಶ ಮೈಗೂಡಿಸಿಕೊಳ್ಳಿ

Suddivijaya
Suddivijaya January 21, 2023
Updated 2023/01/21 at 1:44 PM

ಸುದ್ದಿವಿಜಯ, ಜಗಳೂರು: ಪದ್ಮಭೂಷಣ, ಕರ್ನಾಟಕ ರತ್ನ ತ್ರಿವಿಧ ದಾಸೋಹಿ, ಪರಮಪೂಜ ಡಾ.ಶ್ರೀ ಶಿವಕುಮಾರ ಮಹಾಶಿವಯೋಗಿಗಳ ಆದರ್ಶಗಳನ್ನು ವಿದ್ಯಾರ್ಥಿಗಳು ಮೈಗೂಡಿಸಿಕೊಳ್ಳಬೇಕು ಎಂದು ಬಿಜೆಪಿ ಮುಖಂಡ ಕಟ್ಟಿಗೆಹಳ್ಳಿ ಎಂ.ಎಸ್.ಮಂಜಪ್ಪ ಹೇಳಿದರು.

ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದ ಸರಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆಯಲ್ಲಿ ಸಿದ್ದಗಂಗಾ ಮಠದ ಶ್ರೀ.ಶಿವಕುಮಾರ ಸ್ವಾಮೀಜಿಗಳ 4ನೇ ವರ್ಷದ ಪುಣ್ಯ ಸಂಸ್ಕರಣೋತ್ಸವ ಕಾರ್ಯಕ್ರಮ ಶನಿವಾರ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದರು,

ಪ್ರತಿಯೊಬ್ಬ ವಿದ್ಯಾರ್ಥಿ ತಮ್ಮ ಜೀವನದಲ್ಲಿ ಅನ್ನ, ವಿದ್ಯೆ ಮತ್ತು ಶಿಸ್ತು ಕಲಿಬೇಕಾದರೆ ಒಮ್ಮೆಯಾದರೂ ಸಿದ್ದಗಂಗಾ ಮಠಕ್ಕೆ ಭೇಟಿ ನೀಡಬೇಕು. ಅನ್ನದ ಬೆಲೆ, ವಿದ್ಯೆಯ ನೆಲೆ ಕೊಟ್ಟ ಅವರು ಬಡವರ ಮಕ್ಕಳಿಗೆ ಆಶಾ ಕಿರಣರಾದಂತವರು.

 ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ತ್ರಿವಿದ ದಾಸೋಹಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಕರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
 ಜಗಳೂರು ತಾಲೂಕಿನ ಕಟ್ಟಿಗೆಹಳ್ಳಿ ಗ್ರಾಮದಲ್ಲಿ ತ್ರಿವಿದ ದಾಸೋಹಿ ಸಿದ್ದಗಂಗಾ ಮಠದ ಶ್ರೀ ಶಿವಕುಮಾರ ಸ್ವಾಮೀಜಿಗಳ ಪುಣ್ಯ ಸಂಸ್ಕರಣೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಕಷ್ಟ ಪಟ್ಟು ವಿದ್ಯಾಭ್ಯಾಸ ಮಾಡಿದರೆ ಮಾತ್ರ ಜೀವನ ಸಾರ್ಥಕವಾಗುತ್ತದೆ. ರಾಜ್ಯದ ಎಲ್ಲ ಸಮುದಾಯಗಳ ಜನರಿಗೆ ಅನ್ನದ ಜೊಗೆ ವಿದ್ಯೆ ನೀಡಿ ಜಾತಿ,ಬೇಧ ಮರೆತು ಸಮ ಸಮಾಜ ನಿರ್ಮಾಣಕ್ಕೆ ಅವರು ಸಾಕ್ಷೀಭೂತರಾಗಿದ್ದಾರೆ. ಅವರ ಹಾದಿಯಲ್ಲಿ ನಡೆದರೆ ಮಾತ್ರ ಬಾಳು ಬಂಗಾರವಾಗುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾರ್ಯಕ್ರಮದಲ್ಲಿ ಶ್ರೀ ಮಠದ ಹಳೇಯ ವಿದ್ಯಾರ್ಥಿ ಕೆ.ಎಸ್.ಎನ್ ಸೋಮನಗೌಡ, ಶಿವಕುಮಾರ್, ಶಿಕ್ಷಕರಾದ ಗೋವಿಂದಪ್ಪ, ಗೌರಮ್ಮ ಸೇರಿದಂತೆ ಅನೇಕರು ಇದ್ದರು. ಈ ವೇಳೆ ಶ್ರೀಗಳ ನೆನಪಿಗಾಗಿ ಹಳೇ ವಿದ್ಯಾರ್ಥಿಗಳು ಶಾಲಾ ವಿದ್ಯಾರ್ಥಿಗಳಿಗೆ, ಗ್ರಾಮಸ್ಥರಿಗೆ ದಾಸೋಹ ವ್ಯವಸ್ಥೆ ಮಾಡಲಾಯಿತು.

 

Share this Article
Leave a comment

Leave a Reply

Your email address will not be published. Required fields are marked *

error: Content is protected !!