ಸುದ್ದಿವಿಜಯ,ಜಗಳೂರು: ಮಾಜಿ ಸಚಿವ ಎಸ್.ಎಸ್ ಮಲ್ಲಿಕಾರ್ಜುನ ಅವರ 55ನೇ ವರ್ಷದ ಹುಟ್ಟು ಹಬ್ಬವನ್ನು ಸೆ.22ರಂದು ಅದ್ಧೂರಿಯಾಗಿ ಆಚರಿಸಲಾಗುವುದು ಎಂದು ಕಾಂಗ್ರೆಸ್ ಜಿಲ್ಲಾಧ್ಯಕ್ಷ ಎಚ್.ಬಿ ಮಂಜಪ್ಪ ತಿಳಿಸಿದರು.
ಇಲ್ಲಿನ ಪ್ರವಾಸಿ ಮಂದಿರದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ದಾವಣಗೆರೆ ಅಭಿವೃದ್ದಿಯಲ್ಲಿ ಎಸ್‍ಎಸ್‍ಎಂ ಸಾಕಷ್ಟು ಶ್ರಮಿಸಿದ್ದಾರೆ. ಸಚಿವರಾಗಿದ್ದಾಗ ಎಲ್ಲಾ ಎಪಿಎಂಸಿಗಳಿಗೆ ಒತ್ತು ಕೊಟ್ಟು ಅನುದಾನ ನೀಡಿ ರೈತರಿಗೆ ನೆರವಾಗಿದ್ದಾರೆ.
ಕೋವಿಡ್ ಸಂದರ್ಭದಲ್ಲಿ ಹಾಸಿಗೆ, ಆಕ್ಸಿಜನ್ ಸೇರಿದಂತೆ ಎಲ್ಲಾ ರೀತಿಯ ಸೌಕರ್ಯಗಳನ್ನು ಕಲ್ಪಿಸಿ ಅನೇಕ ಪ್ರಾಣ ಕಾಪಾಡಿದ್ದಾರೆ ಇಂತಹ ರಾಜ್ಯ ನಾಯಕರನ್ನು ಗೌರವಿಸುವ ಹಿನ್ನೆಲೆ ಯಾವುದೇ ಫಲಾಪೇಕ್ಷೆ ಇಲ್ಲದೇ ಕಾರ್ಯಕರ್ತರು, ಮುಖಂಡರು ಸೇರಿಕೊಂಡು ಅವರ ಜನ್ಮ ದಿನಾಚರಣೆಯನ್ನು ಆಚರಿಸಲಾಗುತ್ತಿದೆ ಎಂದರು.
ಕಾರ್ಯಕ್ರಮಕ್ಕೆ ಮಾಜಿ ಸಿ.ಎಂ ಸಿದ್ದರಾಮಯ್ಯ, ಡಿ.ಕೆ ಶಿವಕುಮಾರ್, ಎಂ.ಬಿ ಪಾಟೀಲ್, ಸತೀಶ್ ಜಾರಕಿಹೊಳೆ ಸೇರಿದಂತೆ ನೂರಾರು ಗಣ್ಯರು ಭಾಗವಹಿಸಲಿದ್ದಾರೆ. ಅಂದು ಸಂಜೆ ನಟ ದರ್ಶನ್, ಸಂಗೀತ ನಿರ್ದೇಶಕ ಹರಿಕೃಷ್ಣ ಅವರಿಂದ ಸಾಂಸ್ಕøತಿಕ ಕಾರ್ಯಕ್ರಮ ನಡೆಸಿಕೊಡಲಿದ್ದಾರೆ ಎಂದರು.
ಹರಪನಹಳ್ಳಿ ತಾಲೂಕು ಸೇರಿದಂತೆ 8 ತಾಲೂಕುಗಳಿಂದ ಸುಮಾರು 50 ಸಾವಿರ ಜನರನ್ನು ಸೇರಿಸಲಾಗುವುದು, ಜನ್ಮ ದಿನದ ಅಂಗವಾಗಿ 5555 ಜನರಿಂದ ರಕ್ತದಾನ ಶಿಬಿರವನ್ನು ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಕಾರ್ಯಕ್ರಮವನ್ನು ಯಶಸ್ವಿಗೊಳಿಸಬೇಕು ಎಂದು ಮನವಿ ಮಾಡಿದರು.
ಮಾಜಿ ಶಾಸಕ ಎಚ್.ಪಿ ರಾಜೇಶ್ ಮಾತನಾಡಿ, ಎಸ್‍ಎಸ್‍ಎಂ ದೂರ ದೃಷ್ಟಿ ಇಟ್ಟುಕೊಂಡು ಕೆಲಸ ಮಾಡುತ್ತಿದ್ದಾರೆ. ರಾಜ್ಯ ಮತ್ತು ಜಿಲ್ಲೆಯಲ್ಲಿ ಅಭಿಮಾನಿಗಳ ದೊಡ್ಡ ಪಡೆಯನ್ನು ಹೊಂದಿದ್ದಾರೆ. ಇಂತಹ ನಾಯಕರು ನಮ್ಮ ಜಿಲ್ಲೆಯಲ್ಲಿದ್ದಾರೆ ಅವರ ಕೈ ಬಲ ಪಡಿಸಲು ಕಾಂಗ್ರೆಸ್ ಕಾರ್ಯಕರ್ತರು ಬೆನ್ನೆಲುಬಾಗಿ ನಿಲ್ಲಬೇಕು ಎಂದರು.
ಅಂದು ಜಗಳೂರಿನ ಸರ್ಕಾರಿ ಆಸ್ಪತ್ರೆಯ ರೋಗಿಗಳಿಗೆ ಬ್ರೆಡ್, ಹಣ್ಣು ವಿತರಣೆ ಮಾಡಲಾಗುವುದು, ಕಾರ್ಯಕ್ರಮಕ್ಕೆ ಜಗಳೂರಿನಂದ 5 ಸಾವಿರ ಜನರನ್ನು ಕರೆದುಕೊಂಡು ಹೋಗಲಾಗುವುದು ಎಂದರು.
ಈ ಸಂದರ್ಭದಲ್ಲಿ ದಾವಣಗೆರೆ ಮಾಜಿ ಎಪಿಎಂಸಿ ಅಧ್ಯಕ್ಷ ಗಿರೀಶ್ ಗೌಡರು, ದಾವಣಗೆರೆ ಬ್ಲಾಕ್ ಅಧ್ಯಕ್ಷ, ಪರಶುರಾಮ್ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಶಂಷೀರ್ ಅಹಮದ್, ಕಂಬತ್ತಳ್ಳಿ ಮಂಜುನಾಥ್, ಕೆಪಿಸಿಸಿ ಎಸ್ಟಿ ಘಟಕದ ಅಧ್ಯಕ್ಷ ಕೆ.ಪಿ ಪಾಲಯ್ಯ, ಮುಖಂಡ ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ಎಲ್ ಭೈರೇಶ್, ಬ್ಲಾಕ್ ಕಾಂಗ್ರಸ್ ಮಾಜಿ ಅಧ್ಯಕ್ಷರಾದ ತಿಪ್ಪೇಸ್ವಾಮಿ ಗೌಡ,ಸುರೇಶ್ ಗೌಡ, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ಪಲ್ಲಾಗಟ್ಟೆ ಶೇಖರಪ್ಪ, ಕ್ಷೇತ್ರ ಉಸ್ತುವಾರಿ ಕಲ್ಲೇಶ್ ರಾಜ್ ಪಟೇಲ್, ಮಾಜಿ ಎಪಿಎಂಸಿ ಅಧ್ಯಕ್ಷ ಎನ್.ಎಸ್ ರಾಜು, ಯುಜಿ ಶಿವಕುಮಾರ್, ಮಹಿಳಾ ಘಟಕದ ಅಧ್ಯಕ್ಷೆ ಕೆಂಚಮ್ಮ, ಕಾರ್ಯದರ್ಶಿ ಸಾವಿತ್ರಮ್ಮ, ಮಾಜಿ.ಪ.ಪಂ ಅಧ್ಯಕ್ಷ ಇಕ್ಬಾಲ್ ಅಹಮದ್, ಎಸ್ಟಿ ಘಟಕ ತಾಲೂಕಾಧ್ಯಕ್ಷ ಬಿ.ಲೋಕೇಶ್ ಸೇರಿದಂತೆ ಮತ್ತಿತರಿದ್ದರು.
55 ಸಾವಿರ ಲಾಡು ಉಂಡೆ
ಎಸ್‍ಎಸ್ ಮಲ್ಲಿಕಾರ್ಜುನ ಅವರ ಅಭಿವೃದ್ದಿ ಕಾರ್ಯಗಳು ಜನಮಾನಸದಲ್ಲಿ ಉಳಿದುಕೊಂಡಿದೆ. ದಸರಾ ಅಂಬಾರಿ ಹೋರುವ ಆನೆಯಂತೆ ಅವರು ರಾಜ್ಯದ ಅಂಬಾರಿ ಹೋರಬೇಕು ಎನ್ನುವುದು ಎಲ್ಲರ ಆಶಯವಾಗಿದೆ. ಅವರ ಜನ್ಮ ದಿನಕ್ಕೆ ನನ್ನ ವೈಯಕ್ತಿಕವಾಗಿ 55 ಸಾವಿರ ಲಾಡು ಉಂಡೆಗಳನ್ನು ಸಿದ್ದಪಡಿಸಿ ವಿತರಣೆ ಮಾಡಲಾಗವುದು.
-ಚಿಕ್ಕಮ್ಮನಹಟ್ಟಿ ದೇವೇಂದ್ರಪ್ಪ, ಕಾಂಗ್ರೆಸ್ ಮುಖಂಡರು.