ಸುದ್ದಿವಿಜಯ, ಜಗಳೂರು: ಬರುವ ಅ.23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯಂತಿ ಮತ್ತು ನವೆಂಬರ್1 ರಂದು ಅದ್ಧೂರಿಯಾಗಿ ಕನ್ನಡ ರಾಜ್ಯೋತ್ಸವ ಆಚರಣೆಗೆ ಸೋಮವಾರ ತಹಶೀಲ್ದಾರ್ ಕಚೇರಿಯಲ್ಲಿ ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ನೇತೃತ್ವದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳ ಜೊತೆ ಪೂರ್ವಭಾವಿ ಸಭೆ ನಡೆಯಿತು.
ಈ ಭಾರಿ ಕನ್ನಡ ರಾಜ್ಯೋತ್ಸವವನ್ನು ಅದ್ಧೂರಿಯಾಗಿ ಆಚರಿಸೋಣ. ಮತ್ತೊಮ್ಮೆ ಶಾಸಕರ ನೇತೃತ್ವದಲ್ಲಿ ಸಭೆ ಕರೆದು ರೂಪು ರೇಷೆಗಳ ಕುರಿತು ಚರ್ಚೆ ಮಾಡೋಣ ಎಂದು ಅಧಿಕಾರಿಗಳು ಮತ್ತು ಸಂಘಟನೆಗಳ ಮುಖಂಡರಿಗೆ ತಹಶೀಲ್ದಾರ್ ತಿಳಿಸಿದರು. ಪಪಂ ಸದಸ್ಯ ಲುಕ್ಮಾನ್‍ವುಲ್ಲಾ ಖಾನ್ ಮಾತನಾಡಿ, ಕೋವಿಡ್ ಕಾಲದಲ್ಲಿ ವಿಜೃಂಭಣೆಯಿಂದ ಕನ್ನಡ ರಾಜ್ಯೋತ್ಸವ ಆಚರಿಸಲಾಗಲಿಲ್ಲ.
ಈಬಾರಿ ಸ್ತಬ್ಧಚಿತ್ರಗಳ ಮೆರವಣಿಗೆ ಮತ್ತು ಪ್ರಮುಖ ರಸ್ತೆಯ ಅಂಗಡಿಗಳ ಮೇಲೆ ಕನ್ನಡ ಧ್ವಜ ಹಾರಿಸಲು ಸೂಚನೆ ನೀಡಿ ಎಂದು ಸಭೆಯಲ್ಲಿ ಅಭಿಪ್ರಾಯ ತಿಳಿಸಿದರು.
ಕರವೇ ಅಧ್ಯಕ್ಷ ವೈ. ಮಹಾಂತೇಶ್ ಮಾತನಾಡಿ, ಈ ಬಾರಿ ನಾವೆಲ್ಲ ಒಗ್ಗಟ್ಟಾಗಿ ಆಚರಿಸೋಣ ಎಂದು ಸಭೆಯಲ್ಲಿ ತಿಳಿಸಿದರು. ಕನ್ನಡ ನಾಡು ನುಡಿ ರಕ್ಷಣೆಗೆ ಸೇವೆ ಸಲ್ಲಿಸಿದ 25 ಮಹಾನ್ ವ್ಯಕ್ತಿಗಳಿಗೆ ಈ ಬಾರಿ ಗೌರವ ಸಲ್ಲಿಸಲು ಪ್ರಶಸ್ತಿ ನೀಡಲಾಗುವುದು. ಹೀಗಾಗಿ ಸರಕಾರಿ ನೌಕರರ ತಾಲೂಕು ಅಧ್ಯಕ್ಷ ಎಂ.ಚಂದ್ರಪ್ಪ ಅವರಿಗೆ ಸಾಧಕರನ್ನು ಗುರುತಿಸುವ ಜವಾಬ್ದಾರಿ ನೀಡಲಾಗಿದೆ ಎಂದು ತಹಶೀಲ್ದಾರ್ ಜಿ.ಸಂತೋಷ್‍ಕುಮಾರ್ ತಿಳಿಸಿದರು.
ವೀರಶೈವ ಮಹಾಸಭಾ ತಾಲೂಕು ಅಧ್ಯಕ್ಷ ವೀರೇಶ್ ಮಾತನಾಡಿ, ಬರುವ 23 ರಂದು ಕಿತ್ತೂರು ರಾಣಿ ಚನ್ನಮ್ಮ ಜಯತ್ಯುತ್ಸವವನ್ನು ಈ ಬಾರಿ ವಿಶೇಷವಾಗಿ ಆಚರಿಸಲಾಗುವುದು. ಈ ಸಂಬಂಧ ವಿವಿಧ ಸಂಘಟನೆಗಳ ಮುಖಂಡರ ಮತ್ತು ಸಮುದಾಯದ ಮುಖಂಡ ಜೊತೆ ಚರ್ಚೆ ಮಾಡಿ ತಿಳಿಸುವುದುದಾಗಿ ಹೇಳಿದರು.
ಸಭೆಯಲ್ಲಿ ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿದೇಶಕ ಬಿ.ಮಹೇಶ್ವರಪ್ಪ, ಪಪಂ ಅಧ್ಯಕ್ಷರಾದ ಸಿ.ವಿಶಾಲಾಕ್ಷಿ ಓಬಳೇಶ್, ಕೃಷಿ ಇಲಾಖೆಯ ಸಹಾಯಕ ನಿರ್ದೇಶಕ ಮಿಥುನ್ ಕಿಮಾವತ್, ತೋಟಗಾರಿಕೆ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ವೆಂಕಟೇಶ್ ಮೂರ್ತಿ, ಪಿಡ್ಲ್ಯೂಡಿ ಎಇಇ ರುದ್ರಪ್ಪ, ಅರಣ್ಯ ಇಲಾಖೆ ಅಧಿಕಾರಿ ಅಮೃತ, ತಾ.ಪಂ ಮಾಜಿ ಸದಸ್ಯ ಸಿದ್ದಪ್ಪ, ಬಿಸಿಎಂ ಇಲಾಖೆ ಅಧಿಕಾರಿ ಮಂಜುನಾಥ್, ಹಿಂದುಳಿದ ಇಲಾಖೆ ಅಧಿಕಾರಿ ಆಸ್ಮಾಭಾನು, ಟಿಎಚ್‍ಒ ನಾಗರಾಜ್, ಪಪಂ ಮುಖ್ಯಾಧಿಕಾರಿ ಲೋಕ್ಯಾನಾಯ್ಕ, ಆರೋಗ್ಯಾಧಿಕಾರಿ ಕಿಫಾಯತ್ ಸೇರಿದಂತೆ ಅನೇಕರು ಇದ್ದರು.