ಸುದ್ದಿವಿಜಯ, ಜಗಳೂರು: ದೇವನಗರಿ ದಾವಣಗೆರೆಯ ಹೈಸ್ಕೂಲ್ ಮೈದಾನದಲ್ಲಿ ಅ.29ರಿಂದ ನ.10ರವರೆಗೂ ಮಹರ್ಷಿ ವಾಲ್ಮೀಕಿ ಜಯಂತ್ಯುತ್ಸವ ಹಮ್ಮಿಕೊಳ್ಳಲಾಗಿದ್ದು, ತಾಲೂಕಿನ ಜನತೆ ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳಬೇಕು ಎಂದು ಎಂದು ರೈತ ಸಂಘದ ಜಿಲ್ಲಾ ಮುಖಂಡ ಕಾನನಕಟ್ಟೆ ತಿಪ್ಪೇಸ್ವಾಮಿ ತಿಳಿಸಿದರು.
ಪಟ್ಟಣದ ಪತ್ರಿಕಾ ಭವನದಲ್ಲಿ ಬುಧವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ವಾಲ್ಮೀಕಿಯೂ ಕೇವಲ ಒಂದು ಜಾತಿಗೆ ಸೀಮಿತವಾಗಿಲ್ಲ. ಪ್ರತಿಯೊಂದು ಸಮಾಜಕ್ಕೂ ಬೇಕಾಗಿದ್ದಾರೆ. ಅವರ ಆದರ್ಶ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು, ಸಮುದಾಯಗಳನ್ನು ಒಗ್ಗೂಡಿಸಬೇಕು, ಶಿಕ್ಷಣವಂತರನ್ನಾಗಿ ಮಾಡಬೇಕು ಎನ್ನುವುದು ನಮ್ಮ ಉದ್ದೇಶವಾಗಿದೆ. ಹಾಗಾಗಿ ತಾಲೂಕಿನಲ್ಲಿ ಸರಳವಾಗಿ ಆಚರಿಸಿಕೊಂಡು ಜಿಲ್ಲಾ ಮಟ್ಟದಲ್ಲಿ ಬೃಹತ್ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದರು.
ಅ.29ರ ಭಾನುವಾರ ರಾಜನಹಳ್ಳಿ ಪ್ರಸನ್ನಾನಂದಪುರಿ ಮಹಾಸ್ವಾಮಿ ಮೆರವಣಿಗೆಗೆ ಚಾಲನೆ ನೀಡಲಿದ್ದು, ಕೆಎಸ್‍ಆರ್‍ಟಿಸಿ ಹತ್ತಿರ ತಾಲೂಕು ಕಚೇರಿ ಮುಂಭಾಗದಿಂದ ಗಾಂಧಿ ಸರ್ಕಲ್, ಜಯದೇವ ವೃತ್ತ, ಅಂಬೇಡ್ಕರ್ ವೃತ್ತದ ಮೂಲಕ ಹೈಸ್ಕೂಲ್ ಮೈದಾನಕ್ಕೆ ಮೆರವಣಿಗೆ ನಡೆಯಲಿದೆ ಎಂದು ತಿಳಿಸಿದರು.
ಅ.30 ಸೋಮವಾರ ಮಹರ್ಷಿ ವಾಲೀಕಿ ಪೂಜೆ, ಅ.31 ಮಂಗಳವಾರ ರಾಜ್ಯಮಟ್ಟದ ಭಜನೆ ಸ್ಪರ್ಧೆ, ನ.01 ಬುಧವಾರ ಯುವ ಜನೋತ್ಸವ, ನ.2 ಗುರುವಾರ ರಾಜ್ಯ ಮಟ್ಟದ ಕೋಲಾಟ, ನ.4 ಶನಿವಾರ ಮಹಿಳಾ ಸಮಾವೇಶ, ಮಹಿಳಾ ಭಜನೆ ಸ್ಪರ್ಧೆ, ಸೋಬಾನೆ ಸ್ಪರ್ಧೆ, ಮ್ಯೂಸಿಕಲ್ ಚೇರ್, ಟಿನಿಕಾಟ್, ನ. 5 ಭಾನುವಾರ ಕ್ರಿಕೆಟ್ ಮತ್ತು ವಾಲಿಬಾಲ್ ಪಂದ್ಯಾವಳಿಗಳು
ನ.6 ಸೋಮವಾರ ಕಾನೂನು ಅರಿವು-ನೆರವು ಕಾರ್ಯಕ್ರಮ, ನ.7 ಮಂಗಳವಾರ ರಾಜ್ಯ ಮಟ್ಟದ ವಿಚಾರ ಸಂಕಿರಣ, ನ.10 ಶುಕ್ರವಾರ ಮಾಜಿ ಹಾಗೂ ಹಾಲಿ ಶಾಸಕರಿಗೆ ಸನ್ಮಾನ ಕಾರ್ಯಕ್ರಮ ನಡೆಯಲಿದೆ ಎಂದರು.
ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾ ಪ್ರ.ಕಾರ್ಯದರ್ಶಿ ಸಿ.ಎಂ ಹೊಳೆ ಚಿರಂಜೀವಿ, ಕಾರ್ಯದರ್ಶಿ ಸತೀಶ್, ನಗರ ಘಟಕದ ಅಧ್ಯಕ್ಷ ಬೈರನಾಯಕನಹಳ್ಳಿ ರಾಜು, ಗೌ. ಅಧ್ಯಕ್ಷ ಗಂಗಾಧರಪ್ಪ, ಕಾರ್ಯದರ್ಶಿ ಸಹದೇವ ರೆಡ್ಡಿ, ಮುಖಂಡರಾದ ಸೂರಪ್ಪ, ಶರಣಪ್ಪ, ಬಸಣ್ಣ, ಪ್ರಹ್ಲಾದಪ್ಪ, ವೀರೇಶ್ ಸೇರಿದಂತೆ ಮತ್ತಿತರರಿದ್ದರು.