ಸುದ್ದಿವಿಜಯ, ಜಗಳೂರು: ತಾಲೂಕಿನ ಮುಗ್ಗಿದರಾಗಿಹಳ್ಳಿ ಗ್ರಾಮದ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಪ್ರಸ್ತುತ 2023-24ನೇ ಸಾಲಿನ ಎಸ್ಸೆಸ್ಸೆಲ್ಸಿ ಫಲಿತಾಂಶದಲ್ಲಿ ನೂರಕ್ಕೆ ನೂರು ಫಲಿತಾಂಶ ಪ್ರಕಟವಾಗಿದೆ ಎಂದು ಪ್ರಾಂಶುಪಾಲ ನೀಲಪ್ಪ ವೈ.ಪಿಡ್ಡಣ್ಣವರ್ ಮಾಹಿತಿ ನೀಡಿದ್ದಾರೆ.
ಸ್ಪೂರ್ತಿ-608, ಅಮೂಲ್ಯ-601, ದಿವ್ಯಾ-596, ನಿತ್ಯಶ್ರೀ-592, ಧೀಕ್ಷಿತ್-591 ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳಾಗಿದ್ದಾರೆ. ಕನ್ನಡ ಮಾಧ್ಯಮದಲ್ಲಿ ಆರು ವಿದ್ಯಾರ್ಥಿಗಳು ನೂರಕ್ಕೆ ನೂರು ಅಂಕಗಳನ್ನು ಗಳಿಸಿದ್ದಾರೆ.
ಸಮಾಜ ವಿಜ್ಞಾನ ವಿಭಾಗದಲ್ಲಿ ಕೆ.ಒ.ಭಾವನ 100ಕ್ಕೆ ನೂರು ಅಂಕಗಳಿಸುವ ಮೂಲಕ ಶಾಲೆಗೆ ಕೀರ್ತಿ ತಂದಿದ್ದಾರೆ ಎಂದು ಸಮಾಜ ವಿಜ್ಞಾನ ಶಿಕ್ಷಕ ಎನ್.ಬಿ.ರೇವಣಸಿದ್ದಪ್ಪ ಮತ್ತು ಎಲ್ಲಾ ಶಿಕ್ಷಕರು ಎಲ್ಲಾ ವಿದ್ಯಾರ್ಥಿಗಳಿಗೆ ಅಭಿನಂದನೆ ಸಲ್ಲಿಸಿದ್ದಾರೆ.