ಸುದ್ದಿವಿಜಯ, ಜಗಳೂರು: ವಿಧಾನಸಭೆ ಚುನಾವಣೆಯಲ್ಲಿ ಎಎಪಿ ಅಭ್ಯರ್ಥಿಯಾಗಿ ಗೋವಿಂದರಾಜು ಅವರಿಗೆ ಆಫ್ ಪಕ್ಷದಿಂದ ಟಿಕೆಟ್ ಘೋಷಣೆ ಮಾಡಲಾಗಿದೆ.
ಎಎಪಿ ವರಿಷ್ಠ ಹಾಗೂ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಾರ್ಟಿ ರಾಜ್ಯ ಘಟಕದಿಂದ 80 ಕ್ಷೇತ್ರಗಳ ಅಭ್ಯರ್ಥಿಗಳಿಗೆ ಟಿಕೆಟ್ ಘೋಷಣೆ ಮಾಡಿದ್ದು ಪಟ್ಟಿಯನ್ನು ಬಿಡುಗಡೆ ಗೊಳಿಸಿದ್ದಾರೆ.
ಗೋವಿಂದರಾಜು ಅವರು ಜಗಳೂರು ಎಸ್‍ಟಿ ಕ್ಷೇತ್ರದ ಅಭ್ಯರ್ಥಿಗಾಗಿ ಅರ್ಜಿಸಲ್ಲಿಸಿದ್ದರು. ಅವರ ಸಂಘಟನಾ ಚತುರತೆ, ಕಾರ್ಯಕರ್ತರನ್ನು ಒಗ್ಗೂಡಿಸುವ ಸಾಮಥ್ರ್ಯವನ್ನು ಮನಗಂಡು ಗೋವಿಂದ ರಾಜು ಅವರಿಗೆ ಎಎಪಿ ಮುಖಂಡರು ಟಿಕೆಟ್ ಘೋಷಣೆ ಮಾಡಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೇಂದ್ರ ಮತ್ತು ರಾಜ್ಯ ಸರಕಾರಗಳ ದುರಾಡಳಿತದಿಂದ ಬೇಸತ್ತು ಜನ ಎಎಪಿ ಕಡೆ ವಾಲಿದ್ದಾರೆ ಈಗಾಗಲೇ ಸಾವಿರಾರು ಕಾರ್ಯಕರ್ತರ ಪಡೆ ಇಡೀ ಕ್ಷೇತ್ರದಲ್ಲಿದೆ. ಯುವಕರು ಕಾಂಗ್ರೆಸ್, ಬಿಜೆಪಿ, ಜೆಡಿಎಸ್ ಪಕ್ಷಗಳ ಅಭ್ಯರ್ಥಿಗಳನ್ನು ಧಿಕ್ಕರಿಸಿ ಎಎಪಿಗೆ ಮತಹಾಕಲು ತೀರ್ಮಾನಿಸಿದ್ದಾರೆ. ಈ ಬಾರಿ ಕ್ಷೇತ್ರದಲ್ಲಿ ಆಮ್ ಆದ್ಮಿ ಪಕ್ಷಕ್ಕೆ ಉತ್ತಮವಾದ ವಾತಾವರಣವಿದ್ದು, ಮತದಾರರು ನನ್ನನ್ನು ಗೆಲ್ಲಿಸುತ್ತಾರೆ ಎಂಬ ಭವರವಸೆಯಿದೆ ಎಂದರು.