ಸುದ್ದಿವಿಜಯ, ಜಗಳೂರು: ಪಟ್ಟಣದ ಎಂಜಿ ವೃತ್ತದ ಬಳಿ ಸೋಮವಾರ ಬೆಳಿಗ್ಗೆ 7.30 ರ ಸುಮಾರಿಗೆ ವ್ಯಾಪಾರ ವೃತ್ತಿ ಮಾಡುತ್ತಿದ್ದ ಹೊನ್ನೂರ್ ಸಾಬ್ (55) ಅವರಿಗೆ ಮಿನಿ ಸರಕು ಸಾಗಾಣೆ ವಾಹನ ಡಿಕ್ಕಿಯಾಗಿ ಮೃತ ಪಟ್ಟಿರುವ ಘಟನೆ ನಡೆದಿದೆ.
ಎಂದಿನಂತೆ ಅವರು ವಾಯುವಿಹಾರಕ್ಕೆಂದು ಜಗಳೂರು ಗೊಲ್ಲರಹಟ್ಟಿ ಗ್ರಾಮದಿಂದ ಪಟ್ಟಣಕ್ಕೆ ಆಗಮಿಸಿದ್ದಾರೆ. ಮಹಾತ್ಮಾ ಗಾಂಧಿ ವೃತ್ತದಲ್ಲಿ ಬಳಿ ತರಕಾರಿ ಜಯ್ಯಣ್ಣ ಎಂಬುವರು ತಮ್ಮ ಮಿನಿ ಸರಕು ಸಾಗಾಣೆ ವಾಹನವನ್ನು ವೇಗವಾಗಿ ಚಲಾಯಿಸಿದ್ದರಿಂದ ಹೊನ್ನೂರ್ ಸಾಬ್ ಅವರಿಗೆ ಗುದ್ದಿದ್ದಾರೆ.
ತಲೆಗೆ ಬಲವಾದ ಪೆಟ್ಟು ಬಿದ್ದು ರಕ್ತಸ್ರಾವವಾಗಿದ್ದರಿಂದ ಅವರನ್ನು ಸ್ಥಳೀಯರು ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಹೆಚ್ಚಿನ ಚಿಕಿತ್ಸೆಗಾಗಿ ದಾವಣಗೆರೆ ಸರಕಾರಿ ಆಸ್ಪತ್ರೆಗೆ ಕರೆದೊಯ್ಯುವಾಗಲೇ ದಾರಿ ಮಧ್ಯೆ ಹೊನ್ನೂರ್ ಸಾಬ್ ಮೃತಪಟ್ಟಿದ್ದಾರೆ ಎಂದು ದಾವಣಗೆರೆ ಸಿಜಿ ಆಸ್ಪತ್ರೆಯ ವೈದ್ಯರು ಮಾಹಿತಿ ನೀಡಿದ್ದಾರೆ.
ಅಪಘಾತ ಮಾಡಿದ ಜಯ್ಯಣ್ಣ ಅವರ ವಿರುದ್ಧ ಜಗಳೂರು ಪಟ್ಟಣದ ಪೊಲೀಸ್ ಠಾಣೆಯಲ್ಲಿ ಎಫ್‍ಐಆರ್ ದಾಖಲಾಗಿದೆ. ಸ್ಥಳಕ್ಕೆ ಸಬ್‍ಇನ್‍ಸ್ಪೆಕ್ಟರ್ ಎಸ್.ಡಿ.ಸಾಗರ್ ಮತ್ತು ಪೊಲೀಸ್ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದರು.