ಜಗಳೂರು: ಭೀಕರ ಅಪಘಾತ ವ್ಯಕ್ತಿ ಸಾವು!

Suddivijaya
Suddivijaya December 30, 2023
Updated 2023/12/30 at 2:10 PM
Motorcycle accident, flat vector illustration. Motorbike collision with car. Motor vehicle crash, injured motorcyclist. Road traffic accident.

ಸುದ್ದಿವಿಜಯ, ಜಗಳೂರು: ದಾವಣಗೆರೆ ಜಗಳೂರು ಮಧ್ಯೆ ಹಾದು ಹೋಗಿರುವ ಮಲ್ಪೆ ಮೊಳಕಾಲ್ಮೂರು ರಾಜ್ಯ ಹೆದ್ದಾರಿಯಲ್ಲಿರುವ ಮುಗ್ಗಿದರಾಗಿಹಳ್ಳಿಯ ಬಳಿ ಶನಿವಾರ ಕಾರು ಮತ್ತು ಬೈಕ್ ಮಧ್ಯೆ ಮುಖಾಮುಖಿ ಡಿಯಾಗಿ ಬೈಕ್ ಸವಾರ ಸಾವನ್ನಪ್ಪಿರುವ ಘಟನೆ ನಡೆದಿದೆ.

ಮೃತ ವ್ಯಕ್ತಿಯು ಮುಗ್ಗಿದರಾಗಿಹಳ್ಳಿ ಗ್ರಾಮದ ಬೈಕ್ ಸವಾರ ಅಂಜಿನಪ್ಪ(50) ಎಂದು ಗುರುತಿಸಲಾಗಿದೆ. ಸೊಕ್ಕೆ ಗ್ರಾಮದ ಕಾರು ಬೈಕ್ ಗುದ್ದಿ ಪರಿಣಾಮ ಬೈಕ್ ಸವಾರ ಸಾವು ಬದುಕಿನ ಮಧ್ಯೆ ಒದ್ದಾಡುತ್ತಿದ್ದಾಗ ಸ್ಥಳೀಯರು ತಕ್ಷಣವೇ ಅವರನ್ನು ದಾವಣಗೆರೆಯ ಎಸ್‍ಎಸ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಆದರೆ ತಲೆ ಮತ್ತು ಭುಜಕ್ಕೆ ಬಲವಾದ ಪೆಟ್ಟು ಬಿದ್ದಿದ್ದರಿಂದ ತೀವ್ರ ರಕ್ತಸ್ರಾವದಿಂದ ಮೃತಪಟ್ಟಿದ್ದಾರೆ. ಈ ಘಟನೆ ಸಂಬಂಧ ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇನ್ಸ್‍ಪೆಕ್ಟರ್ ಸೋಮಶೇಖರ್ ಸ್ಥಳಕ್ಕೆ ಭೇಟಿನೀಡಿ ಪರಿಶೀಲನೆ ನಡೆಸದರು. ಕಾರು ಮರಕ್ಕೆ ಗುದ್ದಿರುವ ರಭಸಕ್ಕೆ ನುಜ್ಜುಗುಜ್ಜಾಗಿದ್ದು ಕಾರಿನಲ್ಲಿ ಇದ್ದವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲಿಸಲಾಗಿದೆ.

Share this Article
Leave a comment

Leave a Reply

Your email address will not be published. Required fields are marked *

error: Content is protected !!