ಸುದ್ದಿವಿಜಯ,ಜಗಳೂರು: ರಾಜ್ಯ ವಿಧಾನಸಭೆ ಚುನಾವಣೆಯ ಬಿಜೆಪಿ 189 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆಗೊಳಿಸಲಾಗಿದೆ. ಅದರಲ್ಲಿ ಶಾಸಕ ಎಸ್.ವಿ.ರಾಮಚಂದ್ರ ಅವರಿಗೆ ಟಿಕೆಟ್ ಘೋಷಣೆ ಮಾಡಲಾಗಿದೆ. ಆದ್ರೆ ಕಾಂಗ್ರೆಸ್ ಪಕ್ಷದಿಂದ ಕ್ಷೇತ್ರಕ್ಕೆ ಅಭ್ಯರ್ಥಿ ಯಾರು ಎನ್ನುವ ಗೊಂದಲ ಮುಂದುವರೆದಿದೆ.
ಕ್ಷೇತ್ರದಲ್ಲಿ ಗೊಂದಲವಿಲ್ಲದೇ ಬಿಜೆಪಿ ತನ್ನ ಅಭ್ಯರ್ಥಿಯನ್ನು ಪೈನಲ್ ಮಾಡಿದೆ. ಅಷ್ಟಕ್ಕೂ ಬಿಜೆಪಿ ಅಭ್ಯರ್ಥಿಯಾಗಿರುವ ಎಸ್.ವಿ.ರಾಮಚಂದ್ರ ಅವರಿಗೆ ಕ್ಷೇತ್ರದಲ್ಲಿ ಟಿಕೆಟ್ ಕೇಳುವ ಪ್ರತಿ ಸ್ಪರ್ಧಿಯಾರೂ ಇರಲಿಲ್ಲ.
ಹೀಗಾಗಿ ವರಿಷ್ಠರು ರಾಮಚಂದ್ರ ಅವರಿಗೆ ಟಿಕೆಟ್ ಘೋಷಣೆ ಮಾಡಿದ್ದಾರೆ. ಹೀಗಾಗಿ ಕೈಗನ್ನಡಿಯ ದರ್ಪಣದಂತೆ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಯಾವುದೇ ಗೊಂದಲವಿಲ್ಲದೇ ಬಗೆಹರಿದಿದೆ.
ಟಿಕೆಟ್ ಸಿಕ್ಕ ಹಿನ್ನೆಲೆ ಇಂದಿನಿಂದಲೇ SVR ಪ್ರಚಾರ ಶುರು:
ಶಾಸಕರಾಗಿರುವ ಎಸ್.ವಿ.ರಾಮಚಂದ್ರ ಅವರಿಗೆ ಯಾವುದೇ ಗೊಂದಲವಿಲ್ಲದೇ ಟಿಕೆಟ್ ಸಿಕ್ಕ ಹಿನ್ನೆಲೆ ಬುಧವಾರದಿಂದಲೇ ಪ್ರಚಾರ ಶುರುಮಾಡಲಿದ್ದಾರೆ ಎಂದು ಮಾಹಿತಿ ತಿಳಿದು ಬಂದಿದೆ. ಕ್ಷೇತ್ರದಾದ್ಯಂತ ಪ್ರಚಾರ ಶುರು ಮಾಡಲು ಚುನಾವಣಾ ಆಯೋಗದಿಂದ ಒಪ್ಪಿಗೆ ಪಡೆಯಲು ಕಾರ್ಯಕರ್ತರು, ಅಭಿಮಾನಿಗಳು ತಮ್ಮದೇ ಆದ ರಣತಂತ್ರ ಹೆಣೆದಿದ್ದಾರೆ ಎನ್ನಲಾಗಿದೆ.
ಕಾಂಗ್ರೆಸ್ ಟಿಕೆಟ್ ಗೊಂದಲದ ಗೂಡು:
ರಾಜ್ಯ ಕಾಂಗ್ರೆಸ್‌ನಲ್ಲಿ ಟಿಕೆಟ್ ಗೊಂದಲದ ಗೂಡಾಗಿದೆ. ಇನ್ನೂ ೬೯ ಕ್ಷೇತ್ರಗಳಲ್ಲಿ ಅಧಿಕೃತ ಅಭ್ಯರ್ಥಿಯಾರೂ ಎಂದು ಇನ್ನೂ ಘೋಷಣೆಯಾಗದ ಹಿನ್ನೆಲೆ ಜಗಳೂರು ಕ್ಷೇತ್ರಕ್ಕೆ ಅಭ್ಯರ್ಥಿಯಾರು ಎಂಬುದು ಬೂದಿ ಮುಚ್ಚಿದ ಕೆಂಡವಾಗಿದೆ.
ಟಿಕೆಟ್ ಸಿಗುವ ನಿರೀಕ್ಷೆಯಲ್ಲಿರುವ ಮಾಜಿ ಶಾಸಕ ಎಚ್.ಪಿ.ರಾಜೇಶ್ ಮತ್ತು ಚಿಕ್ಕಮ್ಮನಹಟ್ಟಿ ಬಿ.ದೇವೇಂದ್ರಪ್ಪ ಅವರು ಟೆಂಪಲ್ ರನ್ ಮಾಡುತ್ತಿದ್ದಾರೆ. ನಾಳೆಯಿಂದ ಚುನಾವಣಾ ಅಧಿಸೂಚನೆ ಜಾರಿಯಾಗಲಿದೆ.
ಅಂದರೆ ಏ.13 ರಿಂದ ಅಭ್ಯರ್ಥಿಗಳಿಗೆ ನಾಮಪತ್ರ ಸಲ್ಲಿಸಲು ಅವಕಾಶವನ್ನು ಚುನಾವಣಾ ಆಯೋಗ ಕಲ್ಪಿಸಿದೆ.
ಆದರೆ ಕಾಂಗ್ರೆಸ್ ಟಿಕೆಟ್ ಇನ್ನೂ ಘೋಷಣೆಯಾಗದ ಹಿನ್ನೆಲೆಯಲ್ಲಿ ಅಭ್ಯರ್ಥಿಗಳು ಗೊಂದಲದಲ್ಲೇ ಇರುವುದರಿಂದ ಚುನಾವಣಾ ಪ್ರಚಾರಕ್ಕೆ ಇನ್ನೂ ಕಾಂಗ್ರೆಸ್ ಸನ್ನದ್ಧವಾಗಿಲ್ಲ.
ಟಿಕೆಟ್ ಯಾರಿಗೆ ಸಿಗುತ್ತದೆ ಎಂಬುದರ ಮೇಲೆ ಕಾಂಗ್ರೆಸ್ ಅಭ್ಯರ್ಥಿಗಳು ಪ್ರಚಾರ ಕಾರ್ಯ ಶುರುಮಾಡಲಿದ್ದಾರೆ.
ಇಂದೇ ಕಾಂಗ್ರೆಸ್ ಮೂರನೇ ಪಟ್ಟಿ: ಕಾಂಗ್ರೆಸ್ ಪಕ್ಷದ ಮೂರನೇ ಪಟ್ಟಿ ಬುಧವಾರ 11 ಗಂಟೆಗೆ ಬಿಡುಗಡೆಯಾಗುವ ಸಧ್ಯತೆಯಿದೆ ಎಂದು ಮೂಲಗಳಿಂದ ತಿಳಿದು ಬಂದಿದೆ. ಆ ಪಟ್ಟಿಯಲ್ಲಿ ಜಗಳೂರು ವಿಧಾನಸಭಾ ಕ್ಷೇತ್ರದ ಕೈ ಅಭ್ಯರ್ಥಿಯಾರು ಎಂಬುದು ನಿಗದಿಯಾಗಲಿದೆ.
ಒಟ್ಟಿನಲ್ಲಿ ಬಿಜೆಪಿಗೆ ಕ್ಷೇತ್ರದಲ್ಲಿ ಗೊಂದಲವಿಲ್ಲದೇ ಟಿಕೆಟ್ ಬಗೆಹರಿದಿದ್ದು, ಕಾಂಗ್ರೆಸ್ ಟಿಕೆಟ್ ಗೊಂದಲ ಮುಂದುವರೆದಿದೆ. ಕೈ ಅಭ್ಯರ್ಥಿ ಯಾರು ಎಂಬುದು ಕೆಲವೇ ಗಂಟೆಗಳಲ್ಲಿ ಬಹಿರಂಗವಾಗಲಿದೆ.