suddivijayanews10/6/2024
ಸುದ್ದಿವಿಜಯ, ಜಗಳೂರು: ಎನ್‍ಡಿಎ ಮೈತ್ರಿಕೂಟದ ಗೆಲುವಿನೊಂದಿಗೆ ನರೇಂದ್ರ ಮೋದಿ 3ನೇ ಬಾರಿ ಭಾನುವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದ್ದಕ್ಕೆ ಜಗಳೂರು ಪಟ್ಟಣದಲ್ಲಿ ಬಿಜೆಪಿ ಕಾರ್ಯಕರ್ತರು ಸಂಜೆ ಮಹಾತ್ಮ ಗಾಂಧಿ ವೃತ್ತದಲ್ಲಿ ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂಭ್ರಮಿಸಿದರು.
ಇದೇ ವೇಳೆ ಮಾತನಾಡಿದ ಮಂಡಲ್ ಬಿಜೆಪಿ ಅಧ್ಯಕ್ಷ ಪಲ್ಲಾಗಟ್ಟೆ ಮಹೇಶ್, ದಾಖಲೆಯ ಮೂರನೇ ಬಾರಿ ನರೇಂದ್ರ ಮೋದಿ ಪ್ರಮಾಣ ಸ್ವೀಕರಿಸುತ್ತಿರುವುದು ದಾಖಲೆ.
ಭಾರತ ವಿಶ್ವಗುರು ಆಗಬೇಕಾದರೆ ಅದು ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ. ರಾಜ್ಯದಲ್ಲಿ ಅಭಿವೃದ್ಧಿಯಾಗಲು ಎನ್‍ಡಿಎ ಮೈತ್ರಿ ಕೂಟದ ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ,
ಪ್ರಹ್ಲಾದ್ ಜೋಶಿ, ರಾಜ್ಯದಿಂದ ರಾಜ್ಯ ಸಭೆಗೆ ಆಯ್ಕೆಯಾಗಿರುವ ನಿರ್ಮಲಾ ಸೀತಾರಾಮನ್, ಶೋಭಾ ಕರಂದ್ಲಾಜೆ ಮತ್ತು ವಿ.ಸೋಮಣ್ಣ ಶ್ರಮಿಸಲಿದ್ದಾರೆ.ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ ಮಾಡಿದ ಸಾಧನೆಗಳು ದೇಶದ ಉದ್ದಗಲಕ್ಕೂ ಕಾಣುತ್ತಿವೆ. ಮುಂದಿನ 5 ವರ್ಷಗಳಲ್ಲಿ ಎನ್‍ಡಿಎ ಸರಕಾರ ಭಾರತವನ್ನು 3ನೇ ಆರ್ಥಿಕ ಶಕ್ತಿ ರಾಷ್ಟ್ರವನ್ನಾಗಿ ಜಾಗತಿಕ ಮಟ್ಟದಲ್ಲಿ ತನ್ನ ವರ್ಚಸ್ಸನ್ನು ಹೆಚ್ಚಿಸಿಕೊಳ್ಳುವ ನಿಟ್ಟಿನಲ್ಲಿ ಮೋದಿ ಕಾರ್ಯನಿರ್ವಹಿಸಲಿದ್ದಾರೆ ಎಂದರು.
ಪಪಂ ಮಾಜಿ ಅಧ್ಯಕ್ಷ ಜೆ.ವಿ.ನಾಗರಾಜ್, ಈ ದೇಶಕ್ಕೆ ಸಮರ್ಥ ನಾಯಕನನ್ನು ಜನರು ಆಯ್ಕೆ ಮಾಡಿದ್ದಾರೆ. ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾರತ ಬಲಿಷ್ಟವಾಗಬೇಕಾದರೆ ನರೇಂದ್ರ ಮೋದಿ ಅವರಿಂದ ಮಾತ್ರ ಸಾಧ್ಯ ಎಂದರು.
ವಕೀಲ, ಮಾಜಿ ಬಿಜೆಪಿ ಮಂಡಲ್ ಅಧ್ಯಕ್ಷ ಡಿ.ವಿ ನಾಗಪ್ಪ, ಪಪಂ ಸದಸ್ಯರಾದ ಪಾಪಲಿಂಗಪ್ಪ, ಆರ್.ತಿಪ್ಪೇಸ್ವಾಮಿ, ಲೋಕೇಶ್ ಸೇರಿದಂತೆ ಅನೇಕ ಮುಖಂಡರು, ಕಾರ್ಯಕರ್ತರು ಭಾಗವಹಿಸಿದ್ದರು.