ಜಗಳೂರು: ಬಿಜೆಪಿ ಸದಸ್ಯತ್ವ ನೋಂದಣಿ ಮಾಡಿಸಲು ಮಾಜಿ ಶಾಸಕರ ಪಣ

Suddivijaya
Suddivijaya August 31, 2024
Updated 2024/08/31 at 1:00 PM
????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????????

suddivijayanews31/08/2024

ಸುದ್ದಿವಿಜಯ, ಜಗಳೂರು: ಬಿಜೆಪಿ ಪಕ್ಷ ಬಲಿಷ್ಠವಾಗಬೇಕಾದರೆ ಕಾರ್ಯಕರ್ತರ ಶ್ರಮ ಮತ್ತು ತತ್ವ ಬದ್ಧತೆ ಮುಖ್ಯ. ಹೆಚ್ಚು ಬಿಜೆಪಿ ಸದಸ್ಯತ್ವ ನೋಂದಾಣಿ ಮಾಡಿಸಿ ಪಕ್ಷವನ್ನು ಬಲವರ್ಧನೆಗೊಳಿಸಿ ಮುಂಬರುವ ಜಿ.ಪಂ ತಾಪಂ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕು ಎಂದು ಮಾಜಿ ಶಾಸಕ ಎಸ್.ವಿ ರಾಮಚಂದ್ರ ಹೇಳಿದರು.

ಪಟ್ಟಣದ ವಾಲ್ಮೀಕಿ ಭವನದಲ್ಲಿ ಶನಿವಾರ ಭಾರತೀಯ ಜನತಾಪಾರ್ಟಿಯಿಂದ ಹಮ್ಮಿಕೊಂಡಿದ್ದ ಬಿಜೆಪಿ ಸದಸ್ಯತ್ವ ಅಭಿಯಾನ ಕಾರ್ಯಾಗಾರದಲ್ಲಿ ಮಾತನಾಡಿದರು.

ನಮ್ಮ ಅವದಿಯಲ್ಲಿ 57ಕೆರೆಗಳಿಗೆ ನೀರು ತುಂಬಿಸುವ ಯೋಜನೆ, ಭದ್ರಾ ಮೇಲ್ದಂಡೆ ಯೋಜನೆ ಸೇರಿದಂತೆ ಸಾಕಷ್ಟು ಅನುದಾನ ತಂದು ಅಭಿವೃದ್ದಿ ಕೆಲಸಗಳನ್ನು ಮಾಡಿದ್ದೇವೆ. ಆದರೂ ಮತದಾರರ ಕೈ ಹಿಡಿಯಲಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

ಈಗಿನ ಕಾಂಗ್ರೆಸ್ ಸರಕಾರ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಕೋಟ್ಯಾಂತರ ರೂ ಅವ್ಯವಹಾರ ಮಾಡಿ ವಾಲೀಕಿ ಸಮಾಜದ ಜನರಿಗೆ ಅನ್ಯಾಯ ಮಾಡಿರುವುದು ಎಲ್ಲರ ಗಮನಕ್ಕೆ ಬಂದಿದೆ. ಮುಡಾ ಹಗರಣದಲ್ಲಿ ಸಿದ್ದರಾಮಯ್ಯನವರು ಅಧಿಕಾರ ಕಳೆದುಕೊಳ್ಳಬಹುದು ಎಂದು ಭವಿಷ್ಯ ನುಡಿದರು.ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ ಮತ್ತು ಎಚ್.ಪಿ.ರಾಜೇಶ್ ಚಾಲನೆ ನೀಡಿದರು.ಜಗಳೂರು ಪಟ್ಟಣದ ವಾಲ್ಮೀಕಿ ಭವನದಲ್ಲಿ ಬಿಜೆಪಿ ಸದಸ್ಯತ್ವ ಅಭಿಯಾನಕ್ಕೆ ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ ಮತ್ತು ಎಚ್.ಪಿ.ರಾಜೇಶ್ ಚಾಲನೆ ನೀಡಿದರು.

ಮಾಜಿ ಶಾಸಕ ಎಚ್.ಪಿ ರಾಜೇಶ್ ಮಾತನಾಡಿ, ಸದಸ್ಯತ್ವ ನೋಂದಾಣಿ ಮಾಡಿಸಲು ಮಾಜಿ ಶಾಸಕರಾದ ಎಸ್.ವಿ.ರಾಮಚಂದ್ರ ಮತ್ತು ನನ್ನ ಮೇಲೆ ಮೇಲೆ ರಾಜ್ಯ, ಜಿಲ್ಲಾ ನಾಯಕರು ತುಂಬ ನಿರೀಕ್ಷೆ ಇಟ್ಟುಕೊಂಡಿದ್ದಾರೆ ಅದರಂತೆ ಕ್ಷೇತ್ರದಲ್ಲಿ ಹೆಚ್ಚು ಜನರನ್ನು ಬಿಜೆಪಿಗೆ ಸದಸ್ಯತ್ವ ಕೊಡಿಸಿ ದಾಖಲೆ ಬರೆಯಬೇಕು ಎಂದರು.

ಮಾಜಿ ಶಾಸಕ ಎಸ್.ವಿ ರಾಮಚಂದ್ರ ಮತ್ತು ನನ್ನ ಅವದಿಯಲ್ಲಿ ಕ್ಷೇತ್ರದಲ್ಲಿ ರಸ್ತೆ ಅಭಿವೃದ್ದಿ, ಆರ್ಒ ಘಟಕ, ಸಮುದಾಯ ಭವನಗಳು, ಕೆರೆಗಳಿಗೆ ನೀರು ತುಂಬಿಸುವ, ಭದ್ರಾ ಮೇಲ್ದಂಡೆ ಯೋಜನೆ, ಹೊಸ ಕೆರೆಗಳ ನಿರ್ಮಾಣ, ಮನೆಗಳ ಹಂಚಿಕೆ ಹೀಗೆ ಸಾವಿರಾರು ಕೋಟಿ ಅನುದಾನ ತಂದು ಅಭಿವೃದ್ದಿ ಮಾಡಿದ್ದೇವೆ ಎಂದರು.

ಪಟ್ಟಣದಲ್ಲಿ ರಸ್ತೆಗಳ ವಿಸ್ತರಣೆಗೆ ಈಗಾಗಲೇ ವಿವಿಧ ಇಲಾಖೆಗಳ ನೇತೃತ್ವದಲ್ಲಿ ಸರ್ವೇ ಮೂಲಕ ಮಾರ್ಕಿಂಗ್ ಕೆಲಸ ಆರಂಭವಾಗಿದೆ. ಇದು ಕೇವಲ ಸರ್ವೇಗೆ ಸೀಮಿತವಾಗದೇ ಕಟ್ಟಡಗಳ ತೆರವು ಕಾರ್ಯಾಚರಣೆ ಯಾಗಬೇಕು.

ಇದರಿಂದ ಪಟ್ಟಣದ ಸುಂದರವಾಗಲಿದೆ. ಜತೆಗೆ ಭರಸಮುದ್ರದವರೆಗೂ ರಸ್ತೆ ಅಗಲೀಕರಣ ಮಾಡಲು ಶಾಸಕರಾದ ಬಿ.ದೇವೇಂದ್ರಪ್ಪ ಮುಂದಾಗಬೇಕು. ಸರಕಾರದಿಂದ ಹೆಚ್ಚು ಅನುದಾನ ತಂದು ಪಟ್ಟಣ, ಹಳ್ಳಿಗಳಿಗೆ ಮೂಲಭೂತ ಸೌಕರ್ಯಗಳನ್ನು ಕಲ್ಪಿಸಲಿ ಎಂದು ಸಲಹೆ ನೀಡಿದರು.

ಈ ಸಂದರ್ಭದಲ್ಲಿ ಬಿಜೆಪಿ ಮಂಡಲ್ ಅಧ್ಯಕ್ಷ ಎಚ್.ಸಿ ಮಹೇಶ್, ಅಭಿಯಾನದ ಜಿಲ್ಲಾ ಕಾರ್ಯದರ್ಶಿ ಅನೀಲ್‍ನಾಯ್ಕ, ಜಿಲ್ಲಾ ಸಂಚಾಲಕ ಧನಂಜಯ್ ಕಡ್ಲೆಬಾಳು, ಕೊಟ್ರೇಶ್‍ಗೌಡ,

ಜಿ.ಪಂ ಮಾಜಿ ಸದಸ್ಯರಾದ ಎಸ್.ಕೆ ಮಂಜುನಾಥ, ಸವಿತಾ ಕಲ್ಲೇಶಪ್ಪ, ತಾ.ಪಂ ಮಾಜಿ ಸದಸ್ಯ ಸಿದ್ದೇಶ್, ಮುಖಂಡರಾದ ಶಿವಕುಮಾರ್‍ಸ್ವಾಮಿ, ಎನ್.ಎಸ್ ರಾಜು, ಶಿವಯೋಗಿ ಸೇರಿದಂತೆ ಮತ್ತಿತರರಿದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!