ಸುದ್ದಿವಿಜಯ, ಜಗಳೂರು: ಪಟ್ಟಣದ ಡಾ.ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಶನಿವಾರ ಮಧ್ಯಾಹ್ನ 12ಕ್ಕೆ ಬಿಜೆಪಿ ಎಸ್ಸಿ ಮೋರ್ಚಾದಿಂದ ಜಿಲ್ಲಾ ಮಟ್ಟದ ಎಸ್ಸಿ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಬಿಜೆಪಿ ತಾಲೂಕಾಧ್ಯಕ್ಷ ಎಚ್.ಸಿ ಮಹೇಶ್ ತಿಳಿಸಿದರು.
ಇಲ್ಲಿನ ಪತ್ರಿಕಾ ಭವನದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜಗಳೂರು ವಿಧಾನ ಸಭಾ ಕ್ಷೇತ್ರ ಬಿಜೆಪಿಯ ಎಸ್ಸಿ ಸಮುದಾಯದ ಮುಖಂಡರು ಮತ್ತು ಕಾರ್ಯಕರ್ತರನ್ನು ಆಹ್ವಾನಿಸಲಾಗಿದೆ.
ಈ ಸಮಾವೇಶದಲ್ಲಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಎಸ್ಸಿ ಸಮುದಾಯಗಳಿಗೆ ಕೊಟ್ಟಿರುವ ಯೋಜನೆಗಳು, ಸೌಲಭ್ಯಗಳನ್ನು ಕುರಿತು ತಿಳಿಸಲಾಗುವುದು ಎಂದರು.
ಕಳೆದ ಇಪ್ಪೈದು ವರ್ಷಗಳಿಗೆ ಹೋಲಿಕೆ ಮಾಡಿದರೆ ಎಸ್ಸಿ ಸಮುದಾಯಗಳ ಮತದಾರರು ಬಿಜೆಪಿ ಪಕ್ಷಕ್ಕೆ ಹೆಚ್ಚು ಬೆಂಬಲವನ್ನು ನೀಡುತ್ತಾ ಬಂದಿದ್ದಾರೆ.
ಈಗಿನ ಚುನಾವಣೆಯಲ್ಲೂ ಶಾಸಕ ಎಸ್.ವಿ ರಾಮಚಂದ್ರ ಅವರಿಗೆ ಆಶೀರ್ವಾದ ಮಾಡಲಿದ್ದಾರೆ ಎಂದರು.
ಬಿಜೆಪಿ ಎಸ್ಸಿ ಮೋರ್ಚಾದ ಜಿಲ್ಲಾಧ್ಯಕ್ಷ ಹನುಮಂತನಾಯ್ಕ ಮಾತನಾಡಿ, ಎಸ್ಸಿ ಜಿಲ್ಲಾ ಸಮಾವೇಶವನ್ನು ಸುಮಾರು 2ಸಾವಿರ ಜನಸಂಖ್ಯೆಯೊಂದಿಗೆ ಆಚರಿಸಲಾಗುವುದು.
ರಾಜ್ಯದಲ್ಲಿ 150ಕ್ಕೂ ಹೆಚ್ಚು ಸ್ಥಾನಗಳಲ್ಲಿ ಬಿಜೆಪಿ ಪಕ್ಷ ಗೆಲುವು ಪಡೆದು ಮತ್ತೊಮ್ಮೆ ಸರಕಾರ ನಡೆಸಬೇಕು ಎನ್ನುವ ಉದ್ದೇಶದಿಂದ ಎಸ್ಸಿ ಸಮುದಾ ಒಂದಾಗಿ ಕೆಲಸ ಮಾಡಲಾಗುತ್ತಿದೆ ಎಂದರು.
ಈ ಸಮಾವೇಶಕ್ಕೆ ಎಂ.ಪಿ ಜಿ.ಎಂ ಸಿದ್ದೇಶ್ವರ್, ರಾಜ್ಯ ಎಸ್ಸಿ ಮೋರ್ಚಾ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಶಾಸಕ ಎಸ್.ವಿ ರಾಮಚಂದ್ರ, ಬಿಜೆಪಿ ಜಿಲ್ಲಾಧ್ಯಕ್ಷ ವೀರೇಶ್ ಹನಗವಾಡಿ ಸೇರಿದಂತೆ ಗಣ್ಯಾತಿಗಣ್ಯರು ಭಾಗವಹಿಸಲ್ಲಿದ್ದಾರೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಎಸ್ಸಿ ಮೋರ್ಚಾ ಅಧ್ಯಕ್ಷ ರಾಜೇಶ್, ಮುಖಂಡರಾದ ಪೂಜಾರಿ ಸಿದ್ದಪ್ಪ, ಗೌರಿಪುರ ಕುಬೇರಪ್ಪ, ಹನುಮಂತಪ್ಪ, ಹನುಮಂತಾಪುರ ಸತೀಶ್ ಸೇರಿದಂತೆ ಮತ್ತಿತರಿದ್ದರು.