ನಾಳೆ ಜಗಳೂರಿನಲ್ಲಿ ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರ ಪರ ಬಿ.ಎಸ್.ಯಡಿಯೂರಪ್ಪ ರೋಡ್ ಶೋ..

Suddivijaya
Suddivijaya April 24, 2023
Updated 2023/04/24 at 1:51 PM

ಸುದ್ದಿವಿಜಯ, ಜಗಳೂರು: ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಮಂಗಳವಾರ ಪಟ್ಟಣದ ಅಂಬೇಡ್ಕರ್ ವೃತ್ತದಿಂದ ಗಾಂಧಿ ವೃತ್ತದವರೆಗೆ ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರ ಪರ ರೋಡ್ ಶೋ ನಡೆಸಲಿದ್ದಾರೆ ಎಂದು ಮಂಡಲ್ ಬಿಜೆಪಿ ಅಧ್ಯಕ್ಷ ಎಚ್.ಸಿ.ಮಹೇಶ್ ಹೇಳಿದರು.

ಪಟ್ಟಣದ ಪ್ರೆಸ್‍ಕ್ಲಬ್‍ನಲ್ಲಿ ಸೋಮವಾರ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು, ಬಿಜೆಪಿ ಅಭ್ಯರ್ಥಿ ಎಸ್.ವಿ.ರಾಮಚಂದ್ರ ಅವರ ಪರವಾಗಿ ಮಾಜಿ ಸಿಎಂ ಬಿಎಸ್‍ವೈ ರೋಡ್ ಶೋ ನಡೆಸಲಿದ್ದಾರೆ. ಸಂಸದ ಜಿ.ಎಂ.ಸಿದ್ದೇಶ್ವರ್ ಸೇರಿದಂತೆ ರಾಜ್ಯ ಮಟ್ಟದ ಅನೇಕ ನಾಯಕರು ರೋಡ್ ಶೋನಲ್ಲಿ ಭಾಗವಹಿಸಲಿದ್ದಾರೆ. ಈ ವೇಳೆ ಅಂದಾಜು 10 ಸಾವಿರಕ್ಕೂ ಹೆಚ್ಚು ಜನ ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದರು.

 

ಜತ್ಯಾತೀತ ನಾಯಕರಾಗಿರುವ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ರೋಡ್ ಶೋ ವೇಳೆ ಎರಡು ಕಡೆ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಕ್ಷೇತ್ರಕ್ಕೆ ಬಿಜೆಪಿ ಸರಕಾರ ನೀಡಿರುವ ಅಪ್ಪರ್ ಭದ್ರಾ, 57 ಕೆರೆ ನೀರು ತುಂಬಿಸುವ ಯೋಜನೆ, ಬಹುಗ್ರಾಮ ಕುಡಿಯುವ ನೀರಿನ ಯೋಜನೆ ಸೇರಿದಂತೆ 3500 ಕೋಟಿ ರೂ ಹಣ ಬಿಡುಗಡೆ ಮಾಡಿ ಮಾದರಿ ಕ್ಷೇತ್ರವನ್ನಾಗಿ ಮಾಡಲು ಅವರ ಕೊಡುಗೆ ಹೆಚ್ಚಿದೆ.ಹೀಗಾಗಿ ರಾಜ್ಯದಲ್ಲಿ ಬಿಜೆಪಿ ಅಲೆಯಿದ್ದು ಈ ಬಾರಿ ಕ್ಷೇತ್ರದಲ್ಲೂ ಬಿಜೆಪಿ ಪಕ್ಷ ಗೆಲ್ಲಲಿದೆ ಎಂದರು.


ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಕ್ಷೇತ್ರ ಉಸ್ತುವಾರಿ ಆರುಂಡಿನಾಗರಾಜ್, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಸೊಕ್ಕೆ ನಾಗರಾಜ್, ಬಿಜೆಪಿ ಮುಖಂಡರಾದ ಬಿದರಕೆರೆ ರವಿ, ಹೊನ್ನಮರಡಿ ಬಾಲರಾಜ್, ಡಿ.ವಿ.ನಾಗಪ್ಪ ಸೇರಿದಂತೆ ಅನೇಕರು ಇದ್ದರು.

Share this Article
Leave a comment

Leave a Reply

Your email address will not be published. Required fields are marked *

error: Content is protected !!