ಸುದ್ದಿವಿಜಯ, ಜಗಳೂರು: ಪಟ್ಟಣದ ವಿವಿಧ ಕಡೆ ಸರಕಳ್ಳತನ ಮಾಡಿ ಪರಾರಿಯಾಗಿದ್ದ ಕಳ್ಳನನ್ನು ಜಗಳೂರು ಪೆÇಲೀಸರು ಬಂಧಿಸಿದ್ದಾರೆ.
ವಿಜಯನಗರ ಜಿಲ್ಲೆ, ಕೊಟ್ಟೂರು ತಾಲೂಕು ನಿಂಬಳಗೆರೆ ಗ್ರಾಮದ ಅಲ್ಲಾಭಕ್ಷಿ ಬಂಧಿತ ಆರೋಪಿಯಾಗಿದ್ದಾರೆ.
ಪಟ್ಟಣದ ಮರೇನಹಳ್ಳಿ ರಸ್ತೆಯಲ್ಲಿ ಅ.2ರಂದು ಆಯುವಿಹಾರ ಮಾಡುತ್ತಿದ್ದ ಮಹಿಳೆಯ ಕೊರಳಿನಲ್ಲಿದ್ದ 50 ಗ್ರಾಂ ತೂಕದ ಬಂಗಾರದ ಮಾಂಗಲ್ಯ ಸರ ಕಳ್ಳತನ ಮಾಡಿ ಪರಾರಿಯಾಗಿದ್ದ, ಅ.29ರಂದು ದೇವೇಗೌಡ ಬಡಾವಣೆಯಲ್ಲಿ ವಾಕ್ ಮಾಡುತ್ತಿದ್ದ ಮತ್ತೊಬ್ಬ ಮಹಿಳೆಯ ಸರ ಕಳ್ಳತನ ಮಾಡಿದ್ದ ಈ ಸಂಬಂಧ ಎರಡು ದೂರುಗಳು ಜಗಳೂರು ಠಾಣೆಯಲ್ಲಿ ದಾಖಲಾಗಿತ್ತು.
ಡಿವೈಎಸ್ಪಿ ಕನ್ನಿಕಾ ಸಿಕ್ರಿವಾಲ್, ಹೆಚ್ಚುವರಿ ಡಿವೈಎಸ್ಪಿ ಬಸವರಾಜ್, ಸಿಪಿಐ ಸತ್ಯನಾರಾಯಣಸ್ವಾಮಿ ಇವರ ಮಾರ್ಗದರ್ಶನದಲ್ಲಿ ಪಿಎಸ್‍ಐ ಎಲ್.ಎಚ್ ಮಹೇಶ್, ಎಎಸ್‍ಐ ಚಂದ್ರಶೇಖರ್, ಜಿ.ಟಿ ವೆಂಕಟೇಶ್,ನಾಗರಾಜ್, ಮೂರ್ತಿ ಹಾಗೂ ಸಿಬ್ಬಂದಿಗಳಾದ
ನಾಗಭೂಷಣ್,ಪಂಪನಾಯ್ಕ, ಮಾರಪ್ಪ, ನಾಗರಾಜ್ ಸೇರಿದಂತೆ ಇತರೆ ಸಿಬ್ಬಂದಿಗಳ ವಿಶೇಷ ತಂಡ ಕಳ್ಳನ ಪತ್ತೆಗೆ ಬಲೆ ಬೀಸಿ ಕಾರ್ಯಾಚರಣೆ ನಡೆಸಿ ಸಿಸಿ ಕ್ಯಾಮೇರದ ಸಹಾದೊಂದಿಗೆ ಕಳ್ಳನನ್ನು ಬಂಧಿಸಿದ್ದಾರೆ. ಕಳ್ಳನಿಂದ 1.5 ಲಕ್ಷ ಬೆಲೆ ಬಂಗಾರದ ಸರ, ಒಂದು ಬೈಕ್ ವಶಕ್ಕೆ ಪಡೆದುಕೊಂಡಿದ್ದಾರೆ.