ಸುದ್ದಿವಿಜಯ, ಜಗಳೂರು:ಮತ ಎಂಬುದು ಪ್ರಜೆಗಳ ಕೈಯಲ್ಲಿಯ ಒಂದು ಪ್ರಬಲ ಅಸ್ತ್ರ ಅದನ್ನು ಜಾಣತನದಿಂದ ಪರಿಣಾಮಕಾರಿಯಾಗಿ ಉಪಯೋಗಿಸದಿದ್ದರೆ ಜನತಂತ್ರ ಸರಿಯಾಗಿ ನಡೆಯಲಾರದು ಎಂದು ಪ್ರಬಾರ ಕ್ಷೇತ್ರ ಸಮನ್ವಯಾಧಿಕಾರಿ ಡಿ.ಡಿ. ಹಾಲಪ್ಪ ಅಭಿಪ್ರಾಯಪಟ್ಟರು.
ಇಲ್ಲಿನ ಸರಕಾರಿ ಪದವಿ ಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದಿಂದ ಶನಿವಾರ ಹಮ್ಮಿಕೊಂಡಿದ್ದ ಶಾಲಾ ಸಂಸತ್ ಅಣಕು ಚುನಾವಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಪ್ರಜಾಪ್ರಭುತ್ವ ಸರಕಾರ ರಚನೆಯ ಪ್ರಶ್ನೆ ಮೊಟ್ಟಮೊದಲು ಉದ್ಭವವಾದದ್ದು 19ನೆಯ ಶತಮಾನದಲ್ಲಿ. 18ನೆಯ ಶತಮಾನದವರೆಗೆ ಇದರ ಪೂರ್ಣ ಪರಿಕಲ್ಪನೆಯಾಗಿರಲಿಲ್ಲ.
ಸಾಮಾಜಿಕ, ರಾಜಕೀಯ ಜೀವನದಲ್ಲೂ ಸಮಾನತೆಗಾಗಿ ಕಾರ್ಖಾನೆಗಳ ಮಾಲೀಕ ಹಾಗೂ ಕಾರ್ಮಿಕರಿಗೂ ಘರ್ಷಣೆ ಮೊದಲಾಗಿ, ಸಮಾನತೆಯನ್ನು ಪ್ರಜಾಪ್ರಭುತ್ವದ ತತ್ವವಾಗಿ ಪರಿಗಣಿಸಲಾಗಿದ್ದು 18ನೆಯ ಶತಮಾನದಿಂದ ಈಚೆಗೆ ಎಂದರು.
ಆ ಕಾಲದಲ್ಲಿ ಪ್ರಜಾಪ್ರಭುತ್ವ ಪ್ರಚಲಿತವಾಗಿರಲಿಲ್ಲ. ಆಧುನಿಕ ಕಾಲದವರೆಗೆ ಪ್ರಚಲಿತವಾಗಿದ್ದ ಪ್ರಮುಖ ರಾಜ್ಯ ಪದ್ಧತಿ ಎಂದರೆ ಅರಸೊತ್ತಿಗೆ.
ಆದರೆ, ಇಂದಿನ ಪರಿಸ್ಥಿತಿಯೇ ಬೇರೆ. ಹದಿನಾರನೆಯ ಶತಮಾನದಿಂದೀಚೆಗೆ ಅರಸೊತ್ತಿಗೆ ಕ್ಷೀಣಿಸುತ್ತ ಬಂದಿದೆ. ಈಗ ಪ್ರಜಾಪ್ರಭುತ್ವದ ತತ್ವಗಳು, ಆದರ್ಶಗಳು ಆಳವಾಗಿ ಬೇರೂರಿಕೊಂಡಿವೆ.
ಪ್ರಪಂಚದ ಕೆಲವು ಭಾಗಗಳನ್ನು ಬಿಟ್ಟರೆ ಎಲ್ಲೆಡೆಯಲ್ಲೂ ಸರಕಾರಗಳನ್ನು ಪ್ರಜಾಪ್ರಭುತ್ವದ ಕೆಲವು ತತ್ವಗಳಿಗೆ ಅನುಕೂಲವಾಗಿ ರಚಿಸಲಾಗಿದೆ ಎಂದರು.
ಶಾಲಾ ಶಿಕ್ಷಕರು ಸೇರಿದಂತೆ ತರಬೇತಿ ಪ್ರಶಿಕ್ಷರು ಚುನಾವಣೆ ಮತದಾನ ನೆಡೆಸುವ ಪ್ರಕ್ರಿಯೆಯಲ್ಲಿ ಭಾಗವಹಿಸಿದರು. ಮತ ಪೆಟ್ಟಿಗೆಯನ್ನು ಅಭ್ಯರ್ಥಿ ಹಾಗೂ ಏಜೆಂಟರ್ ಸಮ್ಮುಖದಲ್ಲಿ ತೆರೆಯಲಾಯಿತು.
ಮತ ಪತ್ರದಲ್ಲಿ ಮುದ್ರಿಸಿದಂತೆ ಅಭ್ಯರ್ಥಿ ಕ್ರಮ ಸಂಖ್ಯೆ ಮುಂದೆ ಮತ ಹಾಕುವಂತೆ ತಿಳಿಸಿದರು. ವಿದ್ಯಾರ್ಥಿಗಳು ತಮ್ಮ ಶಾಲಾ ಗುರುತಿನ ಪತ್ರವನ್ನೆ ಮತದಾನ ಗುರುತಿನ ಪತ್ರವಾಗಿ ಪರಿಗಣಿಸಿ ಸರತಿ ಸಾಲಿನಲ್ಲಿ ನಿಂತು ಗೌಪ್ಯ ಮತದಾನ ಮಾಡಿದರು.
ಮತಪೆಟ್ಟಿ ದೋಷವಾಗದಂತೆ ಚುನಾವಣೆ ಮತಗಟ್ಟಿ ಅಧಿಕಾರಿಗಳಾದ ಪ್ರಶಿಕ್ಷರು ಜಾಗೃತಿ ವಹಿಸಿದರು. ಅಂತಿಮವಾಗಿ ಚುನಾವಣೆ ಪ್ರಕ್ರಿಯೆ ಶಾಂತಿಯುತವಾಗಿ ನಡೆಡು ಶೇ.75 ಶಾಲಾ ಸಂಸತ್‍ಗೆ ಅಣಕು ಮತದಾನ ಪ್ರಕ್ರಿಯೆ ನೆಡೆದಿದ್ದು ವಿಧ್ಯಾರ್ಥಿ ನಾಯಕರ ಭವಿಷ್ಯ ಸೋಮವಾರ ಹೊರ ಬೀಳಲಿದೆ.
ಈ ಸಂದರ್ಭದಲ್ಲಿ ಶಾಲಾ ಹಿರಿಯ ಶಿಕ್ಷಕರು , ಸಿದ್ದಾರ್ಥ ಶಿಕ್ಷಣ ಮಹಾ ವಿದ್ಯಾಲಯ ಬಿ.ಇಡಿ ಪ್ರಶಿಕ್ಷಕರು ವಿಧ್ಯಾರ್ಥಿಗಳು ಭಾಗವಹಿಸಿದ್ದರು.